1 ULB ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು. BSB BSB: I will sing for my beloved a song of his vineyard: My beloved had a vineyard on a very fertile hill.
2 ULB ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು. BSB BSB: He dug it up and cleared the stones and planted the finest vines. He built a watchtower in the middle and dug out a winepress as well. He waited for the vineyard to yield good grapes, but the fruit it produced was sour!
3 ULB ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ. BSB BSB: “And now, O dwellers of Jerusalem and men of Judah, I exhort you to judge between Me and My vineyard.
4 ULB ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು? BSB BSB: What more could have been done for My vineyard than I have done for it? Why, when I expected sweet grapes, did it bring forth sour fruit?
5 ULB ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು. BSB BSB: Now I will tell you what I am about to do to My vineyard: I will take away its hedge, and it will be consumed; I will tear down its wall, and it will be trampled.
6 ULB ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು. BSB BSB: I will make it a wasteland, neither pruned nor cultivated, and thorns and briers will grow up. I will command the clouds that rain shall not fall on it.”
7 ULB ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು. BSB BSB: For the vineyard of the LORD of Hosts is the house of Israel, and the men of Judah are the plant of His delight. He looked for justice, but saw bloodshed; for righteousness, but heard a cry of distress.
8 ULB ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು, ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ! BSB BSB: Woe to you who add house to house and join field to field until no place is left and you live alone in the land.
9 ULB ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು. BSB BSB: I heard the LORD of Hosts declare: “Surely many houses will become desolate, great mansions left unoccupied.
10 ULB ಏಕೆಂದರೆ ಹತ್ತು ಎಕರೆ ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ ಬೀಜದಿಂದ ಕಡಿಮೆ ದವಸವು ಬರುವುದು. BSB BSB: For ten acres of vineyard will yield but a bath of wine, and a homer of seed only an ephah of grain.”
11 ULB ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ! BSB BSB: Woe to those who rise early in the morning in pursuit of strong drink, who linger into the evening, to be inflamed by wine.
12 ULB ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ. BSB BSB: At their feasts are the lyre and harp, tambourines and flutes and wine. They disregard the actions of the LORD and fail to see the work of His hands.
13 ULB ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು. BSB BSB: Therefore My people will go into exile for their lack of understanding; their dignitaries are starving and their masses are parched with thirst.
14 ULB ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು. BSB BSB: Therefore Sheol enlarges its throat and opens wide its enormous jaws, and down go Zion’s nobles and masses, her revelers and carousers!
15 ULB ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು. BSB BSB: So mankind will be brought low, and each man humbled; the arrogant will lower their eyes.
16 ULB ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು. BSB BSB: But the LORD of Hosts will be exalted by His justice, and the holy God will show Himself holy in righteousness.
17 ULB ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು. BSB BSB: Lambs will graze as in their own pastures, and strangers will feed in the ruins of the wealthy.
18 ULB ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ, BSB BSB: Woe to those who draw iniquity with cords of deceit and pull sin along with cart ropes,
19 ULB ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ! BSB BSB: to those who say, “Let Him hurry and hasten His work so that we may see it! Let the plan of the Holy One of Israel come so that we may know it!”
20 ULB ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ! BSB BSB: Woe to those who call evil good and good evil, who turn darkness to light and light to darkness, who replace bitter with sweet and sweet with bitter.
21 ULB ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!. BSB BSB: Woe to those who are wise in their own eyes and clever in their own sight.
22 ULB ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ; BSB BSB: Woe to those who are heroes in drinking wine and champions in mixing strong drink,
23 ULB ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ! BSB BSB: who acquit the guilty for a bribe and deprive the innocent of justice.
24 ULB ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು. BSB BSB: Therefore, as a tongue of fire consumes the straw, and as dry grass shrivels in the flame, so their roots will decay and their blossoms will blow away like dust; for they have rejected the instruction of the LORD of Hosts and despised the word of the Holy One of Israel.
25 ULB ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು. BSB BSB: Therefore the anger of the LORD burns against His people; His hand is raised against them to strike them down. The mountains quake, and the corpses lie like refuse in the streets. Despite all this, His anger is not turned away; His hand is still upraised.
26 ULB ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ. BSB BSB: He lifts a banner for the distant nations and whistles for those at the ends of the earth. Behold—how speedily and swiftly they come!
27 ULB ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ. ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ. BSB BSB: None of them grows weary or stumbles; no one slumbers or sleeps. No belt is loose and no sandal strap is broken.
28 ULB ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ. ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ. BSB BSB: Their arrows are sharpened, and all their bows are strung. The hooves of their horses are like flint; their chariot wheels are like a whirlwind.
29 ULB ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ. ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ಷಿಸುವವರು ಯಾರೂ ಇಲ್ಲ. BSB BSB: Their roaring is like that of a lion; they roar like young lions. They growl and seize their prey; they carry it away, and no one can rescue it.
30 ULB ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು. BSB BSB: In that day they will roar over it, like the roaring of the sea. If one looks over the land, he will see darkness and distress; even the light will be obscured by clouds.
Select verses for actions: Enter goes to them and Escape comes back.