1 ULB ಯೆಹೋವನು ಹೀಗೆನ್ನುತ್ತಾನೆ, <<ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು. BSB BSB: This is what the LORD says: “Where is your mother’s certificate of divorce with which I sent her away? Or to which of My creditors did I sell you? Look, you were sold for your iniquities, and for your transgressions your mother was sent away.
2 ULB ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು. BSB BSB: Why was no one there when I arrived? Why did no one answer when I called? Is My hand too short to redeem you? Or do I lack the strength to deliver you? Behold, My rebuke dries up the sea; I turn the rivers into a desert; the fish rot for lack of water and die of thirst.
3 ULB ನಾನು ಆಕಾಶಕ್ಕೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.>> BSB BSB: I clothe the heavens in black and make sackcloth their covering.”
4 ULB ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ. BSB BSB: The Lord GOD has given Me the tongue of discipleship, to sustain the weary with a word. He awakens Me morning by morning; He awakens My ear to listen as a disciple.
5 ULB ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ. BSB BSB: The Lord GOD has opened My ears, and I have not been rebellious, nor have I turned back.
6 ULB ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ. BSB BSB: I offered My back to those who struck Me, and My cheeks to those who tore out My beard. I did not hide My face from scorn and spittle.
7 ULB ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು. BSB BSB: Because the Lord GOD helps Me, I have not been disgraced; therefore I have set My face like flint, and I know that I will not be put to shame.
8 ULB ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ. BSB BSB: The One who vindicates Me is near. Who will dare to contend with Me? Let us confront each other! Who has a case against Me? Let him approach Me!
9 ULB ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು. BSB BSB: Surely the Lord GOD helps Me. Who is there to condemn Me? See, they will all wear out like a garment; the moths will devour them.
10 ULB ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ. BSB BSB: Who among you fears the LORD and obeys the voice of His Servant? Who among you walks in darkness and has no light? Let him trust in the name of the LORD; let him lean on his God.
11 ULB ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. ಇಗೋ, <<ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.>> BSB BSB: Behold, all you who kindle a fire, who array yourselves with firebrands, walk in the light of your fire and of the firebrands you have lit! This is what you will receive from My hand: You will lie down in a place of torment.
Select verses for actions: Enter goes to them and Escape comes back.