1 ULB ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ. BSB BSB: Awake, awake, clothe yourself with strength, O Zion! Put on your garments of splendor, O Jerusalem, holy city! For the uncircumcised and unclean will no longer enter you.
2 ULB ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ! BSB BSB: Shake off your dust! Rise up and sit on your throne, O Jerusalem. Remove the chains from your neck, O captive Daughter of Zion.
3 ULB ಯೆಹೋವನ ಈ ಮಾತನ್ನು ಕೇಳಿರಿ, <<ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆಮಾಡುವೆನು.>> BSB BSB: For this is what the LORD says: “You were sold for nothing, and without money you will be redeemed.”
4 ULB ಕರ್ತನಾದ ಯೆಹೋವನು ಹೀಗೆಂದುಕೊಳ್ಳುತ್ತಾನೆ, <<ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ ಅಲ್ಲಿ ಸೆರೆಯಾದರು. ಅಶ್ಶೂರ್ಯರು ಕಾರಣವಿಲ್ಲದೆ ಅವರನ್ನು ಬಾಧೆಪಡಿಸಿದರು.>> BSB BSB: For this is what the Lord GOD says: “At first My people went down to Egypt to live, then Assyria oppressed them without cause.
5 ULB ಕರ್ತನಾದ ಯೆಹೋವನು ಹೇಳುವುದೇನೆಂದರೆ, <<ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ. BSB BSB: And now what have I here? declares the LORD. For My people have been taken without cause; those who rule them taunt, declares the LORD, and My name is blasphemed continually all day long.
6 ULB ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಅವರ ಸಂಗಡ ಮಾತನಾಡಿದವನು ನಾನೇ. ಹೌದು ನಾನೇ>> ಎಂದು ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು. BSB BSB: Therefore My people will know My name; therefore they will know on that day that I am He who speaks. Here I am!”
7 ULB ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, <<ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ>> ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ. BSB BSB: How beautiful on the mountains are the feet of those who bring good news, who proclaim peace, who bring good tidings, who proclaim salvation, who say to Zion, “Your God reigns!”
8 ULB ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು. BSB BSB: Listen! Your watchmen lift up their voices, together they shout for joy. For every eye will see when the LORD returns to Zion.
9 ULB ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ. BSB BSB: Break forth in joy, sing together, O ruins of Jerusalem, for the LORD has comforted His people; He has redeemed Jerusalem.
10 ULB ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು. BSB BSB: The LORD has bared His holy arm in the sight of all the nations; all the ends of the earth will see the salvation of our God.
11 ULB ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ! BSB BSB: Depart, depart, go out from there! Touch no unclean thing; come out from it, purify yourselves, you who carry the vessels of the LORD.
12 ULB ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ. ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು. ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು. BSB BSB: For you will not leave in a hurry nor flee in haste, for the LORD goes before you, and the God of Israel is your rear guard.
14 ULB ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ, BSB BSB: Just as many were appalled at Him—His appearance was disfigured beyond that of any man, and His form was marred beyond human likeness—
15 ULB ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು. BSB BSB: so He will sprinkle many nations. Kings will shut their mouths because of Him. For they will see what they have not been told, and they will understand what they have not heard.
Select verses for actions: Enter goes to them and Escape comes back.