1 ULB <<ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು>> ಎಂದು ಯೆಹೋವನು ಹೇಳುತ್ತಾನೆ. BSB BSB: “Shout for joy, O barren woman, who bears no children; break forth in song and cry aloud, you who have never travailed; because more are the children of the desolate woman than of her who has a husband,” says the LORD.
2 ULB ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು. BSB BSB: “Enlarge the site of your tent, stretch out the curtains of your dwellings, do not hold back. Lengthen your ropes and drive your stakes in deep.
3 ULB ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು. BSB BSB: For you will spread out to the right and left; your descendants will dispossess the nations and inhabit the desolate cities.
4 ULB <<ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು. BSB BSB: Do not be afraid, for you will not be put to shame; do not be intimidated, for you will not be humiliated. For you will forget the shame of your youth and will remember no more the reproach of your widowhood.
5 ULB <<ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು. BSB BSB: For your husband is your Maker—the LORD of Hosts is His name—the Holy One of Israel is your Redeemer; He is called the God of all the earth.
6 ULB ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ>> ಎಂಬುದು ನಿನ್ನ ದೇವರ ನುಡಿ. BSB BSB: For the LORD has called you back, like a wife deserted and wounded in spirit, like the rejected wife of one’s youth,” says your God.
7 ULB <<ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು. BSB BSB: “For a brief moment I forsook you, but with great compassion I will bring you back.
8 ULB ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು>> ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ. BSB BSB: In a surge of anger I hid My face from you for a moment, but with everlasting kindness I will have compassion on you,” says the LORD your Redeemer.
9 ULB <<ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ. BSB BSB: “For to Me this is like the days of Noah, when I swore that the waters of Noah would never again cover the earth. So I have sworn that I will not be angry with you or rebuke you.
10 ULB ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ. BSB BSB: Though the mountains may be removed and the hills may be shaken, My loving devotion will not depart from you, and My covenant of peace will not be broken,” says the LORD, who has compassion on you.
11 ULB ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು. BSB BSB: “O afflicted city, lashed by storms, without solace, surely I will set your stones in antimony and lay your foundations with sapphires.
12 ULB ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರ ರತ್ನಗಳಿಂದ ನಿರ್ಮಿಸುವೆನು. BSB BSB: I will make your pinnacles of rubies, your gates of sparkling jewels, and all your walls of precious stones.
13 ULB ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು. BSB BSB: Then all your sons will be taught by the LORD, and great will be their prosperity.
14 ULB ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು. BSB BSB: In righteousness you will be established, far from oppression, for you will have no fear. Terror will be far removed, for it will not come near you.
15 ULB ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು. BSB BSB: If anyone attacks you, it is not from Me; whoever assails you will fall before you.
16 ULB ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ, ಹಾಳುಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ. BSB BSB: Behold, I have created the craftsman who fans the coals into flame and forges a weapon fit for its task; and I have created the destroyer to wreak havoc.
17 ULB ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ>> ಎಂದು ಯೆಹೋವನು ಅನ್ನುತ್ತಾನೆ. BSB BSB: No weapon formed against you shall prosper, and you will refute every tongue that accuses you. This is the heritage of the servants of the LORD, and their vindication is from Me,” declares the LORD.
Select verses for actions: Enter goes to them and Escape comes back.