1 ULB ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ. BSB BSB: Arise, shine, for your light has come, and the glory of the LORD rises upon you.
2 ULB ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು. BSB BSB: For behold, darkness covers the earth, and thick darkness is over the peoples; but the LORD will rise upon you, and His glory will appear over you.
3 ULB ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು. BSB BSB: Nations will come to your light, and kings to the brightness of your dawn.
4 ULB ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ. BSB BSB: Lift up your eyes and look around: They all gather and come to you; your sons will come from afar, and your daughters will be carried on the arm.
5 ULB ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು. BSB BSB: Then you will look and be radiant, and your heart will tremble and swell with joy, because the riches of the sea will be brought to you, and the wealth of the nations will come to you.
6 ULB ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು. BSB BSB: Caravans of camels will cover your land, young camels of Midian and Ephah, and all from Sheba will come, bearing gold and frankincense and proclaiming the praises of the LORD.
7 ULB ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು. BSB BSB: All the flocks of Kedar will be gathered to you; the rams of Nebaioth will serve you and go up on My altar with acceptance; I will adorn My glorious house.
8 ULB ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ! ಮೇಘದೋಪಾದಿಯಲ್ಲಿ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆ ಹಾರಿ ಬರುತ್ತಿರುವ ಇವರು ಯಾರು? BSB BSB: Who are these who fly like clouds, like doves to their shelters?
9 ULB ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ. BSB BSB: Surely the islands will wait for Me, with the ships of Tarshish in the lead, to bring your children from afar, with their silver and gold, to the honor of the LORD your God, the Holy One of Israel, for He has glorified you.
10 ULB ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ. BSB BSB: Foreigners will rebuild your walls, and their kings will serve you. Although I struck you in anger, yet in favor I will show you mercy.
11 ULB ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು. BSB BSB: Your gates will always stand open; they will never be shut, day or night, so that the wealth of the nations may be brought into you, with their kings being led in procession.
12 ULB ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು. BSB BSB: For the nation or kingdom that will not serve you will perish; it will be utterly destroyed.
13 ULB ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು. BSB BSB: The glory of Lebanon will come to you—its cypress, elm, and boxwood together—to adorn the place of My sanctuary, and I will glorify the place of My feet.
14 ULB ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು. BSB BSB: The sons of your oppressors will come and bow down to you; all who reviled you will fall facedown at your feet and call you the City of the LORD, Zion of the Holy One of Israel.
15 ULB ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು. BSB BSB: Whereas you have been forsaken and despised, with no one passing through, I will make you an everlasting pride, a joy from age to age.
16 ULB ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ. BSB BSB: You will drink the milk of nations and nurse at the breasts of royalty; you will know that I, the LORD, am your Savior and your Redeemer, the Mighty One of Jacob.
17 ULB ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು. BSB BSB: Instead of bronze I will bring you gold; I will bring silver in place of iron, bronze instead of wood, and iron instead of stones. I will appoint peace as your governor and righteousness as your ruler.
18 ULB ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ. BSB BSB: No longer will violence be heard in your land, nor ruin or destruction within your borders. But you will name your walls Salvation and your gates Praise.
19 ULB ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು. BSB BSB: No longer will the sun be your light by day, nor the brightness of the moon shine on your night; for the LORD will be your everlasting light, and your God will be your splendor.
20 ULB ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು. BSB BSB: Your sun will no longer set, and your moon will not wane; for the LORD will be your everlasting light, and the days of your sorrow will cease.
21 ULB ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು. BSB BSB: Then all your people will be righteous; they will possess the land forever; they are the branch of My planting, the work of My hands, so that I may be glorified.
22 ULB ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು. BSB BSB: The least of you will become a thousand, and the smallest a mighty nation. I am the LORD; in its time I will accomplish it quickly.
Select verses for actions: Enter goes to them and Escape comes back.