1 ULB ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ, BSB BSB: The Spirit of the Lord GOD is on Me, because the LORD has anointed Me to preach good news to the poor. He has sent Me to bind up the brokenhearted, to proclaim liberty to the captives and freedom to the prisoners,
2 ULB ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ, BSB BSB: to proclaim the year of the LORD’s favor and the day of our God’s vengeance, to comfort all who mourn,
3 ULB ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು. BSB BSB: to console the mourners in Zion—to give them a crown of beauty for ashes, the oil of joy for mourning, and a garment of praise for a spirit of despair. So they will be called oaks of righteousness, the planting of the LORD, that He may be glorified.
4 ULB ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು, ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು. BSB BSB: They will rebuild the ancient ruins; they will restore the places long devastated; they will renew the ruined cities, the desolations of many generations.
5 ULB ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು. BSB BSB: Strangers will stand and feed your flocks, and foreigners will be your plowmen and vinedressers.
6 ULB ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ. BSB BSB: But you will be called the priests of the LORD; they will speak of you as ministers of our God; you will feed on the wealth of nations, and you will boast in their riches.
7 ULB ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು. BSB BSB: Instead of shame, My people will have a double portion, and instead of humiliation, they will rejoice in their share; and so they will inherit a double portion in their land, and everlasting joy will be theirs.
8 ULB ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. BSB BSB: For I, the LORD, love justice; I hate robbery and iniquity; in My faithfulness I will give them their recompense and make an everlasting covenant with them.
9 ULB ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು. BSB BSB: Their descendants will be known among the nations, and their offspring among the peoples. All who see them will acknowledge that they are a people the LORD has blessed.
10 ULB ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ. BSB BSB: I will rejoice greatly in the LORD, my soul will exult in my God; for He has clothed me with garments of salvation and wrapped me in a robe of righteousness, as a bridegroom wears a priestly headdress, as a bride adorns herself with her jewels.
11 ULB ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು. BSB BSB: For as the earth brings forth its growth, and as a garden enables seed to spring up, so the Lord GOD will cause righteousness and praise to spring up before all the nations.
Select verses for actions: Enter goes to them and Escape comes back.