1 ULB <<ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, <ಇಗೋ, ನಾನಿದ್ದೇನೆ! ನಾನಿದ್ದೇನೆ> ಎನ್ನುತ್ತಿದ್ದೆನು. BSB BSB: “I revealed Myself to those who did not ask for Me; I was found by those who did not seek Me. To a nation that did not call My name, I said, ‘Here I am! Here I am!’
2 ULB ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು. BSB BSB: All day long I have held out My hands to an obstinate people who walk in the wrong path, who follow their own imaginations,
3 ULB ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ. BSB BSB: to a people who continually provoke Me to My face, sacrificing in the gardens and burning incense on altars of brick,
4 ULB ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ, ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ. BSB BSB: sitting among the graves, spending nights in secret places, eating the meat of pigs and polluted broth from their bowls.
5 ULB ಅವರು, <ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ> ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ. BSB BSB: They say, ‘Keep to yourself; do not come near me, for I am holier than you!’ Such people are smoke in My nostrils, a fire that burns all day long.
6 ULB ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು; BSB BSB: Behold, it is written before Me: I will not keep silent, but I will repay; I will pay it back into their laps,
7 ULB ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು>> ಎಂದು ಯೆಹೋವನು ಹೇಳುತ್ತಾನೆ. BSB BSB: both for your iniquities and for those of your fathers,” says the LORD. “Because they burned incense on the mountains and scorned Me on the hills, I will measure into their laps full payment for their former deeds.”
8 ULB ಯೆಹೋವನು ಹೀಗನ್ನುತ್ತಾನೆ, <<ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, <ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ> ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು, BSB BSB: This is what the LORD says: “As the new wine is found in a cluster of grapes, and men say, ‘Do not destroy it, for it contains a blessing,’ so I will act on behalf of My servants; I will not destroy them all.
9 ULB ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು. BSB BSB: And I will bring forth descendants from Jacob, and heirs from Judah; My elect will possess My mountains, and My servants will dwell there.
10 ULB ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ, ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು. BSB BSB: Sharon will become a pasture for flocks, and the Valley of Achor a resting place for herds, for My people who seek Me.
11 ULB ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು. BSB BSB: But you who forsake the LORD, who forget My holy mountain, who set a table for Fortune and fill bowls of mixed wine for Destiny,
12 ULB ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.>> BSB BSB: I will destine you for the sword, and you will all kneel down to be slaughtered, because I called and you did not answer, I spoke and you did not listen; you did evil in My sight and chose that in which I did not delight.”
13 ULB ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, <<ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ. BSB BSB: Therefore this is what the Lord GOD says: “My servants will eat, but you will go hungry; My servants will drink, but you will go thirsty; My servants will rejoice, but you will be put to shame.
14 ULB ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಹೃದಯದ ಯಾತನೆಯಿಂದ ಗೋಳಾಡುವಿರಿ. BSB BSB: My servants will shout for joy with a glad heart, but you will cry out with a heavy heart and wail with a broken spirit.
15 ULB ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು. BSB BSB: You will leave behind your name as a curse for My chosen ones, and the Lord GOD will slay you; but to His servants He will give another name.
16 ULB ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು. BSB BSB: Whoever invokes a blessing in the land will do so by the God of truth, and whoever takes an oath in the land will swear by the God of truth. For the former troubles will be forgotten and hidden from My sight.
17 ULB <<ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು. BSB BSB: For behold, I will create new heavens and a new earth. The former things will not be remembered, nor will they come to mind.
18 ULB ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು. BSB BSB: But be glad and rejoice forever in what I create; for I will create Jerusalem to be a joy and its people to be a delight.
19 ULB ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು. BSB BSB: I will rejoice in Jerusalem and take delight in My people. The sounds of weeping and crying will no longer be heard in her.
20 ULB ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ; ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು. BSB BSB: No longer will a nursing infant live but a few days, or an old man fail to live out his years. For the youth will die at a hundred years, and he who fails to reach a hundred will be considered accursed.
21 ULB ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು. BSB BSB: They will build houses and dwell in them; they will plant vineyards and eat their fruit.
22 ULB ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು. BSB BSB: No longer will they build houses for others to inhabit, nor plant for others to eat. For as is the lifetime of a tree, so will be the days of My people, and My chosen ones will fully enjoy the work of their hands.
23 ULB ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು. BSB BSB: They will not labor in vain or bear children doomed to disaster; for they will be a people blessed by the LORD—they and their descendants with them.
24 ULB ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು. BSB BSB: Even before they call, I will answer, and while they are still speaking, I will hear.
25 ULB ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ>> ಎಂದು ಯೆಹೋವನು ಅನ್ನುತ್ತಾನೆ. BSB BSB: The wolf and the lamb will feed together, and the lion will eat straw like the ox, but the food of the serpent will be dust. They will neither harm nor destroy on all My holy mountain,” says the LORD.
Select verses for actions: Enter goes to them and Escape comes back.