1 ULB ಯೆಹೋವನು ಹೀಗೆನ್ನುತ್ತಾನೆ: <<ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು? BSB BSB: This is what the LORD says: “Heaven is My throne, and earth is My footstool. What kind of house will you build for Me? Or where will My place of repose be?
2 ULB ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ. BSB BSB: Has not My hand made all these things? And so they came into being,” declares the LORD. “This is the one I will esteem: he who is humble and contrite in spirit, who trembles at My word.
3 ULB ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ; BSB BSB: Whoever slaughters an ox is like one who slays a man; whoever sacrifices a lamb is like one who breaks a dog’s neck; whoever presents a grain offering is like one who offers pig’s blood; whoever offers frankincense is like one who blesses an idol. Indeed, they have chosen their own ways and delighted in their abominations.
4 ULB ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.>> BSB BSB: So I will choose their punishment and I will bring terror upon them, because I called and no one answered, I spoke and no one listened. But they did evil in My sight and chose that in which I did not delight.”
5 ULB ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, <<ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ>> ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು. BSB BSB: You who tremble at His word, hear the word of the LORD: “Your brothers who hate you and exclude you because of My name have said, ‘Let the LORD be glorified that we may see your joy!’ But they will be put to shame.”
6 ULB ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ! BSB BSB: Hear the uproar from the city; listen to the voice from the temple! It is the voice of the LORD, repaying His enemies what they deserve!
7 ULB ಆಹಾ, ಬೇನೆ ತಿನ್ನುವುದರೊಳಗೆ ಹೆರಿಗೆಯಾಯಿತು, ಪ್ರಸವವೇದನೆ ಇನ್ನು ಕಾಣದಿರುವಲ್ಲಿ ಗಂಡು ಮಗುವನ್ನು ಹೆತ್ತಳು. BSB BSB: “Before she was in labor, she gave birth; before she was in pain, she delivered a boy.
8 ULB ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು? ಒಂದು ದಿನದಲ್ಲಿ ರಾಷ್ಟ್ರವು ಹುಟ್ಟೀತೇ? ಕ್ಷಣಮಾತ್ರದಲ್ಲಿ ಜನಾಂಗವನ್ನು ಹೆರಲಿಕ್ಕಾದೀತೇ? ಹೌದು, ಚೀಯೋನೆಂಬಾಕೆಯು ಬೇನೆತಿಂದು ತನಗಾಗಿ ಮಕ್ಕಳನ್ನು ಹೆತ್ತಿದ್ದಾಳೆ. BSB BSB: Who has heard of such as this? Who has seen such things? Can a country be born in a day or a nation be delivered in an instant? Yet as soon as Zion was in labor, she gave birth to her children.
9 ULB <<ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?>> ಎಂದು ಯೆಹೋವನು ಹೇಳುತ್ತಾನೆ. <<ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?>> ಎಂದು ನಿನ್ನ ದೇವರು ನುಡಿಯುತ್ತಾನೆ. BSB BSB: Shall I bring a baby to the point of birth and not deliver it?” says the LORD. “Or will I who deliver close the womb?” says your God.
10 ULB ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ! BSB BSB: Be glad for Jerusalem and rejoice over her, all who love her. Rejoice greatly with her, all who mourn over her,
11 ULB ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ. BSB BSB: so that you may nurse and be satisfied at her comforting breasts; you may drink deeply and delight yourselves in her glorious abundance.
12 ULB ಯೆಹೋವನು ಹೀಗೆನ್ನುತ್ತಾನೆ, <<ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು. BSB BSB: For this is what the LORD says: “I will extend peace to her like a river, and the wealth of nations like a flowing stream; you will nurse and be carried on her arm, and bounced upon her knees.
13 ULB ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು; ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು. BSB BSB: As a mother comforts her son, so will I comfort you, and you will be consoled over Jerusalem.”
14 ULB ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು. BSB BSB: When you see, you will rejoice, and you will flourish like grass; then the hand of the LORD will be revealed to His servants, but His wrath will be shown to His enemies.
15 ULB ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು. BSB BSB: For behold, the LORD will come with fire—His chariots are like a whirlwind—to execute His anger with fury and His rebuke with flames of fire.
16 ULB ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು. BSB BSB: For by fire and by His sword, the LORD will execute judgment on all flesh, and many will be slain by the LORD.
17 ULB ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ, ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು>> ಎಂದು ಯೆಹೋವನು ನುಡಿಯುತ್ತಾನೆ. BSB BSB: “Those who consecrate and purify themselves to enter the groves—to follow one in the center of those who eat the flesh of swine and vermin and rats—will perish together,” declares the LORD.
18 ULB <<ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು. BSB BSB: “And I, knowing their deeds and thoughts, am coming to gather all nations and tongues, and they will come and see My glory.
19 ULB ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.>> BSB BSB: I will establish a sign among them, and I will send survivors from among them to the nations—to Tarshish, Put, and the archers of Lud; to Tubal, Javan, and the islands far away who have not heard of My fame or seen My glory. So they will proclaim My glory among the nations.
20 ULB ಯೆಹೋವನು ಹೀಗೆನ್ನುತ್ತಾನೆ, <<ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು. BSB BSB: And they will bring all your brothers from all the nations as a gift to the LORD on horses and chariots and wagons, on mules and camels, to My holy mountain Jerusalem,” says the LORD, “just as the Israelites bring an offering in a clean vessel to the house of the LORD.”
21 ULB ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು>> ಎಂದು ಯೆಹೋವನು ಹೇಳುತ್ತಾನೆ. BSB BSB: “And I will select some of them as priests and Levites,” says the LORD.
22 ULB <<ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು. BSB BSB: “For just as the new heavens and the new earth, which I will make, will endure before Me,” declares the LORD, “so your descendants and your name will endure.
23 ULB ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು>> ಇದು ಯೆಹೋವನ ನುಡಿ. BSB BSB: From one New Moon to another and from one Sabbath to another, all mankind will come to worship before Me,” says the LORD.
24 ULB <<ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.>> BSB BSB: “As they go forth, they will see the corpses of the men who have rebelled against Me; for their worm will never die, their fire will never be quenched, and they will be a horror to all mankind.”
Select verses for actions: Enter goes to them and Escape comes back.