1 ULB ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಿಂದ ಪ್ರಚೋದಿಸಲ್ಪಡುವ ಹೋರಾಡುವ ಮನೋಭಾವ ದುರಾಶೆಗಳಿಂದ ಬರುತ್ತವಲ್ಲವೇ? BSB BSB: What causes conflicts and quarrels among you? Don’t they come from the passions at war within you?
2 ULB ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನಿವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ. BSB BSB: You crave what you do not have; you kill and covet, but are unable to obtain it. You quarrel and fight. You do not have, because you do not ask.
3 ULB ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ. BSB BSB: And when you do ask, you do not receive, because you ask with wrong motives, that you may squander it on your pleasures.
4 ULB ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ. BSB BSB: You adulteresses! Do you not know that friendship with the world is hostility toward God? Therefore, whoever chooses to be a friend of the world renders himself an enemy of God.
5 ULB ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನ ನಿರೀಕ್ಷೆಯೊಂದಿಗೆ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ? BSB BSB: Or do you think the Scripture says without reason that the Spirit He caused to dwell in us yearns with envy?
6 ULB ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ,<< ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ>> ಎಂದು ಧರ್ಮಶಾಸ್ತ್ರವು ಹೇಳುತ್ತದೆ. BSB BSB: But He gives us more grace. This is why it says: “God opposes the proud, but gives grace to the humble.”
7 ULB ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು. BSB BSB: Submit yourselves, then, to God. Resist the devil, and he will flee from you.
8 ULB ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ. BSB BSB: Draw near to God, and He will draw near to you. Cleanse your hands, you sinners, and purify your hearts, you double-minded.
9 ULB ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಕರ್ತನ ಕೃಪೆಗಾಗಿ ಗೋಳಿಟ್ಟು ಬೇಡಿಕೊಳ್ಳಿ. ನಿಮ್ಮ ಲೌಕಿಕ ಸಂತೋಷವನ್ನು ಬಿಟ್ಟು ಕರ್ತನನ್ನು ಪಡೆಯಲು ಪ್ರಯತ್ನಿಸಿ. BSB BSB: Grieve, mourn, and weep. Turn your laughter to mourning, and your joy to gloom.
10 ULB ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು. BSB BSB: Humble yourselves before the Lord, and He will exalt you.
11 ULB ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ. BSB BSB: Brothers, do not slander one another. Anyone who speaks against his brother or judges him speaks against the law and judges it. And if you judge the law, you are not a practitioner of the law, but a judge of it.
12 ULB ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ ನಾಶಮಾಡುವುದಕ್ಕೂ ಸಮರ್ಥನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು? BSB BSB: There is only one Lawgiver and Judge, the One who is able to save and destroy. But who are you to judge your neighbor?
14 ULB ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ. BSB BSB: You do not even know what will happen tomorrow! What is your life? You are a mist that appears for a little while and then vanishes.
15 ULB ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು <<ದೇವರ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು>> ಎಂದು ಹೇಳಬೇಕು. BSB BSB: Instead, you ought to say, “If the Lord is willing, we will live and do this or that.”
16 ULB ಆದರೆ ನೀವು ನಿಮ್ಮ ಅಹಂನಿಂದ ನಿಮ್ಮಬಗ್ಗೆ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ದೇವರಮುಂದೆ ಕೆಟ್ಟದ್ದೇ. BSB BSB: As it is, you boast in your proud intentions. All such boasting is evil.
17 ULB ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ. BSB BSB: Anyone, then, who knows the right thing to do, yet fails to do it, is guilty of sin.
Select verses for actions: Enter goes to them and Escape comes back.