1 ULB ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ? BSB BSB: Righteous are You, O LORD, when I plead before You. Yet about Your judgments I wish to contend with You: Why does the way of the wicked prosper? Why do all the faithless live at ease?
2 ULB ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ. ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ. BSB BSB: You planted them, and they have taken root. They have grown and produced fruit. You are ever on their lips, but far from their hearts.
3 ULB ಯೆಹೋವನೇ, ನೀನು ನನ್ನನ್ನು ತಿಳಿದಿದ್ದಿ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತಿ. ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು. BSB BSB: But You know me, O LORD; You see me and test my heart toward You. Drag away the wicked like sheep to the slaughter and set them apart for the day of carnage.
4 ULB ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. <<ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ>> ಎಂದು ಹೇಳಿದ್ದಾರಷ್ಟೆ. BSB BSB: How long will the land mourn and the grass of every field be withered? Because of the evil of its residents, the animals and birds have been swept away, for the people have said, “He cannot see what our end will be.”
5 ULB ಇಂತೆನ್ನುವ ಯೆಹೋವನು ನನಗೆ, <<ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ? BSB BSB: “If you have raced with men on foot and they have worn you out, how can you compete with horses? If you stumble in a peaceful land, how will you do in the thickets of the Jordan?
6 ULB ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ>> ಎಂದು ಹೇಳಿದ್ದಾನೆ. BSB BSB: Even your brothers—your own father’s household—even they have betrayed you; even they have cried aloud against you. Do not trust them, though they speak well of you.
7 ULB ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ. BSB BSB: I have forsaken My house; I have abandoned My inheritance. I have given the beloved of My soul into the hands of her enemies.
8 ULB ನನ್ನ ಸ್ವಾಸ್ತ್ಯವಾದ ಜನವು ನನ್ನ ಪಾಲಿಗೆ ಅರಣ್ಯದಲ್ಲಿರುವ ಸಿಂಹದಂತಿದೆ; ಅದು ನನ್ನ ಮೇಲೆ ಗರ್ಜಿಸಿದೆ; ಆದಕಾರಣ ಅದನ್ನು ಹಗೆಮಾಡಿದ್ದೇನೆ. BSB BSB: My inheritance has become to Me like a lion in the forest. She has roared against Me; therefore I hate her.
9 ULB ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಬೇಟೆಯ ಹಕ್ಕಿಯಂತಿದೆ, ಹದ್ದುಗಳು ಅದರ ಸುತ್ತಲೂ ವಿರುದ್ಧವಾಗಿ ಕುಳಿತಿವೆಯೋ? ಹೋಗಿರಿ, ಅದನ್ನು ತಿಂದುಬಿಡುವುದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರೆತನ್ನಿರಿ. BSB BSB: Is not My inheritance to Me like a speckled bird of prey with other birds of prey circling against her? Go, gather all the beasts of the field; bring them to devour her.
10 ULB ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ. BSB BSB: Many shepherds have destroyed My vineyard; they have trampled My plot of ground. They have turned My pleasant field into a desolate wasteland.
11 ULB ಹೌದು, ಹಾಳುಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾರೂ ಗಮನಿಸದೆ ಇರುವುದರಿಂದ ದೇಶವೆಲ್ಲಾ ಹಾಳುಬಿದ್ದಿದೆ. BSB BSB: They have made it a desolation; desolate before Me, it mourns. All the land is laid waste, but no man takes it to heart.
12 ULB ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ. BSB BSB: Over all the barren heights in the wilderness the destroyers have come, for the sword of the LORD devours from one end of the earth to the other. No flesh has peace.
13 ULB ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು. BSB BSB: They have sown wheat but harvested thorns. They have exhausted themselves to no avail. Bear the shame of your harvest because of the fierce anger of the LORD.”
14 ULB ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, <<ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು. BSB BSB: This is what the LORD says: “As for all My evil neighbors who attack the inheritance that I bequeathed to My people Israel, I am about to uproot them from their land, and I will uproot the house of Judah from among them.
15 ULB ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು. BSB BSB: But after I have uprooted them, I will once again have compassion on them and return each one to his inheritance and to his land.
16 ULB ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ <ಯೆಹೋವನ ಜೀವದಾಣೆ> ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು. BSB BSB: And if they will diligently learn the ways of My people and swear by My name, saying, ‘As surely as the LORD lives’—just as they once taught My people to swear by Baal—then they will be established among My people.
17 ULB ಆದರೆ ಯಾವ ಜನಾಂಗವು ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶ ಮಾಡುವೆನು ಎಂಬುದು ಯೆಹೋವನ ನುಡಿ>> ಎಂದು ಹೇಳುತ್ತಾನೆ. BSB BSB: But if they will not obey, then I will uproot that nation; I will uproot it and destroy it, declares the LORD.”
Select verses for actions: Enter goes to them and Escape comes back.