1 ULB ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ. BSB BSB: “The sin of Judah is written with an iron stylus, engraved with a diamond point on the tablets of their hearts and on the horns of their altars.
2 ULB ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ, ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು. BSB BSB: Even their children remember their altars and Asherah poles by the green trees and on the high hills.
3 ULB ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು. BSB BSB: O My mountain in the countryside, I will give over your wealth and all your treasures as plunder, because of the sin of your high places, within all your borders.
4 ULB ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು. BSB BSB: And you yourself will relinquish the inheritance that I gave you. I will enslave you to your enemies in a land that you do not know, for you have kindled My anger; it will burn forever.”
5 ULB ಯೆಹೋವನು ಹೀಗೆನ್ನುತ್ತಾನೆ, <<ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು. BSB BSB: This is what the LORD says: “Cursed is the man who trusts in mankind, who makes mere flesh his strength and turns his heart from the LORD.
6 ULB ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು. BSB BSB: He will be like a shrub in the desert; he will not see when prosperity comes. He will dwell in the parched places of the desert, in a salt land where no one lives.
7 ULB ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು. BSB BSB: But blessed is the man who trusts in the LORD, whose confidence is in Him.
8 ULB ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.>> BSB BSB: He is like a tree planted by the waters that sends out its roots toward the stream. It does not fear when the heat comes, and its leaves are always green. It does not worry in a year of drought, nor does it cease to produce fruit.
9 ULB ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು? BSB BSB: The heart is deceitful above all things and beyond cure. Who can understand it?
10 ULB ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ. BSB BSB: I, the LORD, search the heart; I examine the mind to reward a man according to his way, by what his deeds deserve.
11 ULB ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು. BSB BSB: Like a partridge hatching eggs it did not lay is the man who makes a fortune unjustly. In the middle of his days his riches will desert him, and in the end he will be the fool.”
12 ULB ನಮ್ಮ ಪವಿತ್ರಾಲಯಸ್ಥಾನವು ಆದಿಯಿಂದಲೂ ಉನ್ನತವಾದ ಮಹಿಮೆಯ ಸಿಂಹಾಸನವಾಗಿದೆ. BSB BSB: A glorious throne, exalted from the beginning, is the place of our sanctuary.
13 ULB ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು. BSB BSB: O LORD, the hope of Israel, all who abandon You will be put to shame. All who turn away will be written in the dust, for they have abandoned the LORD, the fountain of living water.
14 ULB ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು. BSB BSB: Heal me, O LORD, and I will be healed; save me, and I will be saved, for You are my praise.
15 ULB ಆಹಾ, ಜನರು ನನಗೆ, <<ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ>> ಎಂದು ಹೇಳುತ್ತಾರೆ. BSB BSB: Behold, they keep saying to me, “Where is the word of the LORD? Let it come now!”
16 ULB ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು. BSB BSB: But I have not run away from being Your shepherd; I have not desired the day of despair. You know that the utterance of my lips was spoken in Your presence.
17 ULB ನನ್ನ ಹೆದರಿಕೆಗೆ ಕಾರಣನಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದಿ. BSB BSB: Do not become a terror to me; You are my refuge in the day of disaster.
18 ULB ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು. BSB BSB: Let my persecutors be put to shame, but do not let me be put to shame. Let them be terrified, but do not let me be terrified. Bring upon them the day of disaster and shatter them with double destruction.
19 ULB ಯೆಹೋವನು ನನಗೆ ಇಂತೆಂದನು, <<ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು, BSB BSB: This is what the LORD said to me: “Go and stand at the gate of the people, through which the kings of Judah go in and out; and stand at all the other gates of Jerusalem.
20 ULB <ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ. BSB BSB: Say to them, ‘Hear the word of the LORD, O kings of Judah, all people of Judah and Jerusalem who enter through these gates.
21 ULB ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ. BSB BSB: This is what the LORD says: Take heed for yourselves; do not carry a load or bring it through the gates of Jerusalem on the Sabbath day.
22 ULB ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ. BSB BSB: You must not carry a load out of your houses or do any work on the Sabbath day, but you must keep the Sabbath day holy, just as I commanded your forefathers.
23 ULB ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ. BSB BSB: Yet they would not listen or incline their ear, but they stiffened their necks and would not listen or receive My discipline.
24 ULB ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ, BSB BSB: If, however, you listen carefully to Me, says the LORD, and bring no load through the gates of this city on the Sabbath day, and keep the Sabbath day holy, and do no work on it,
25 ULB ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ, ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಈ ಪಟ್ಟಣವು ನಿತ್ಯವೂ ನೆಲೆಯಾಗಿರುವುದು. BSB BSB: then kings and princes will enter through the gates of this city. They will sit on the throne of David, riding in chariots and on horses with their officials, along with the men of Judah and the residents of Jerusalem, and this city will be inhabited forever.
26 ULB ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು. BSB BSB: And people will come from the cities of Judah and the places around Jerusalem, from the land of Benjamin, and from the foothills, the hill country, and the Negev, bringing burnt offerings and sacrifices, grain offerings and frankincense, and thank offerings to the house of the LORD.
27 ULB ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ>>> ಎಂದು ಹೇಳಿದನು. BSB BSB: But if you do not listen to Me to keep the Sabbath day holy by not carrying a load while entering the gates of Jerusalem on the Sabbath day, then I will kindle an unquenchable fire in its gates to consume the citadels of Jerusalem.’”
Select verses for actions: Enter goes to them and Escape comes back.