1 ULB ಯೆಹೋವನು ಯೆರೆಮೀಯನಿಗೆ, BSB BSB: This is the word that came to Jeremiah from the LORD:
2 ULB <<ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು; ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುವೆನು>> ಎಂಬ ಮಾತನ್ನು ದಯಪಾಲಿಸಿದನು. BSB BSB: “Go down at once to the potter’s house, and there I will give you My message.”
3 ULB ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡೆಸುತ್ತಿದ್ದನು. BSB BSB: So I went down to the potter’s house and saw him working at the wheel.
4 ULB ಆ ಕುಂಬಾರನು ಜೇಡಿಮಣ್ಣಿನಿಂದ ಮಾಡುತ್ತಿದ್ದ ಪಾತ್ರೆಯು ಅವನ ಕೈಯಲ್ಲಿ ಕೆಟ್ಟುಹೋಗಲು ಅವನು ಪುನಃ ತನಗೆ ಸರಿತೋಚಿದ ಹಾಗೆ ಅದನ್ನು ಹೊಸ ಪಾತ್ರೆಯನ್ನಾಗಿ ಮಾಡಿದನು. BSB BSB: But the vessel that he was shaping from the clay became flawed in his hand; so he formed it into another vessel, as it seemed best for him to do.
5 ULB ಆಗ ಯೆಹೋವನು ನನಗೆ ಈ ಮಾತನ್ನು ಅನುಗ್ರಹಿಸಿದನು, BSB BSB: Then the word of the LORD came to me, saying,
6 ULB <<ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ. BSB BSB: “O house of Israel, declares the LORD, can I not treat you as this potter treats his clay? Just like clay in the potter’s hand, so are you in My hand, O house of Israel.
7 ULB ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ, BSB BSB: At any time I might announce that a nation or kingdom will be uprooted, torn down, and destroyed.
8 ULB ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು. BSB BSB: But if that nation I warned turns from its evil, then I will relent of the disaster I had planned to bring.
9 ULB ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ, BSB BSB: And if at another time I announce that I will build up and establish a nation or kingdom,
10 ULB ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು. BSB BSB: and if it does evil in My sight and does not listen to My voice, then I will relent of the good I had intended for it.
11 ULB ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, <ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ> ಎಂಬ ಮಾತನ್ನು ಹೇಳು. BSB BSB: Now therefore, tell the men of Judah and the residents of Jerusalem that this is what the LORD says: ‘Behold, I am planning a disaster for you and devising a plan against you. Turn now, each of you, from your evil ways, and correct your ways and deeds.’
12 ULB ಅವರೋ, <ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು> ಎಂದು ಹೇಳುತ್ತಾರೆ.>> BSB BSB: But they will reply, ‘It is hopeless. We will follow our own plans, and each of us will act according to the stubbornness of his evil heart.’”
13 ULB ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, <<ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ. BSB BSB: Therefore this is what the LORD says: “Inquire among the nations: Who has ever heard things like these? Virgin Israel has done a most terrible thing.
14 ULB ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವುದೇ? ದೂರದಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದೇ? BSB BSB: Does the snow of Lebanon ever leave its rocky slopes? Or do its cool waters flowing from a distance ever run dry?
15 ULB ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ. BSB BSB: Yet My people have forgotten Me. They burn incense to worthless idols that make them stumble in their ways, leaving the ancient roads to walk on rutted bypaths instead of on the highway.
16 ULB ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು. BSB BSB: They have made their land a desolation, a perpetual object of scorn; all who pass by will be appalled and shake their heads.
17 ULB ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.>> BSB BSB: I will scatter them before the enemy like the east wind. I will show them My back and not My face in the day of their calamity.”
18 ULB ಆಗ ಅವರು, <<ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ>> ಎಂದುಕೊಂಡರು. BSB BSB: Then some said, “Come, let us make plans against Jeremiah, for the law will never be lost to the priest, nor counsel to the wise, nor an oracle to the prophet. Come, let us denounce him and pay no heed to any of his words.”
19 ULB ಯೆಹೋವನೇ, ನನ್ನ ಕಡೆಗೆ ಕಿವಿಗೊಡು, ನನ್ನೊಡನೆ ವ್ಯಾಜ್ಯವಾಡುವವರ ಮಾತನ್ನು ಕೇಳು. BSB BSB: Attend to me, O LORD. Hear what my accusers are saying!
20 ULB ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ. BSB BSB: Should good be repaid with evil? Yet they have dug a pit for me. Remember how I stood before You to speak good on their behalf, to turn Your wrath from them.
21 ULB ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ. BSB BSB: Therefore, hand their children over to famine; pour out the power of the sword upon them. Let their wives become childless and widowed; let their husbands be slain by disease, their young men struck down by the sword in battle.
22 ULB ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ. ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ. BSB BSB: Let a cry be heard from their houses when You suddenly bring raiders against them, for they have dug a pit to capture me and have hidden snares for my feet.
23 ULB ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು. BSB BSB: But You, O LORD, know all their deadly plots against me. Do not wipe out their guilt or blot out their sin from Your sight. Let them be overthrown before You; deal with them in the time of Your anger.
Select verses for actions: Enter goes to them and Escape comes back.