1 ULB ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, <<ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು, BSB BSB: This is what the LORD says: “Go down to the palace of the king of Judah and proclaim this message there,
2 ULB ದಾವೀದನ ಸಿಂಹಾಸನರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಮತ್ತು ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ. BSB BSB: saying, ‘Hear the word of the LORD, O king of Judah, who sits on the throne of David—you and your officials and your people who enter these gates.
3 ULB ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ>> ಎಂದು ಹೇಳುತ್ತಾನೆ. BSB BSB: This is what the LORD says: Administer justice and righteousness. Rescue the victim of robbery from the hand of his oppressor. Do no wrong or violence to the foreigner, the fatherless, or the widow. Do not shed innocent blood in this place.
4 ULB <<ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು. BSB BSB: For if you will indeed carry out these commands, then kings who sit on David’s throne will enter through the gates of this palace riding on chariots and horses—they and their officials and their people.
5 ULB ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ>> ಎಂಬುದೇ. BSB BSB: But if you do not obey these words, then I swear by Myself, declares the LORD, that this house will become a pile of rubble.’”
6 ULB ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, <<ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ. BSB BSB: For this is what the LORD says concerning the house of the king of Judah: “You are like Gilead to Me, like the summit of Lebanon; but I will surely turn you into a desert, like cities that are uninhabited.
7 ULB ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು. BSB BSB: I will appoint destroyers against you, each man with his weapons, and they will cut down the choicest of your cedars and throw them into the fire.
8 ULB ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, <ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?> ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ, BSB BSB: And many nations will pass by this city and ask one another, ‘Why has the LORD done such a thing to this great city?’
9 ULB <ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು> ಎಂದು ಅಂದುಕೊಳ್ಳುವರು.>> BSB BSB: Then people will reply, ‘Because they have forsaken the covenant of the LORD their God and have worshiped and served other gods.’”
10 ULB ಸತ್ತವನಿಗಾಗಿ ಅಳಬೇಡಿರಿ, ಗೋಳಾಡಬೇಡಿರಿ; ಸೆರೆಯಾದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂಮಿಯನ್ನು ನೋಡನು. BSB BSB: Do not weep for him who is dead; do not mourn his loss. Weep bitterly for him who is exiled, for he will never return to see his native land.
11 ULB ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, <<ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು. BSB BSB: For this is what the LORD says concerning Shallum son of Josiah, king of Judah, who succeeded his father Josiah but has gone forth from this place: “He will never return,
12 ULB ಅವನನ್ನು ಎಲ್ಲಿಗೆ ಸೆರೆಯೊಯ್ದರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು>> ಎಂಬುದೇ. BSB BSB: but he will die in the place to which he was exiled; he will never see this land again.”
13 ULB ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ, BSB BSB: “Woe to him who builds his palace by unrighteousness, and his upper rooms without justice, who makes his countrymen serve without pay, and fails to pay their wages,
14 ULB ಆಹಾ, <<ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು>> ಎಂದು ಹೇಳಿ, ಅಗಲಗಲವಾದ ಕಿಟಕಿಗಳನ್ನಿಡಿಸಿ, ಒಳಗೆ ಗೋಡೆಗೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ! BSB BSB: who says, ‘I will build myself a great palace, with spacious upper rooms.’ So he cuts windows in it, panels it with cedar, and paints it with vermilion.
15 ULB ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು. BSB BSB: Does it make you a king to excel in cedar? Did not your father have food and drink? He administered justice and righteousness, and so it went well with him.
16 ULB ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ. BSB BSB: He took up the cause of the poor and needy, and so it went well with him. Is this not what it means to know Me?” declares the LORD.
17 ULB ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ. BSB BSB: “But your eyes and heart are set on nothing except your own dishonest gain, on shedding innocent blood, on practicing extortion and oppression.”
18 ULB ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. <<ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು. BSB BSB: Therefore this is what the LORD says concerning Jehoiakim son of Josiah king of Judah: “They will not mourn for him: ‘Alas, my brother! Alas, my sister!’ They will not mourn for him: ‘Alas, my master! Alas, his splendor!’
19 ULB ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಡಿ ಮಣ್ಣುಪಾಲು ಮಾಡುವರು>> ಎನ್ನುತ್ತಾನೆ. BSB BSB: He will be buried like a donkey, dragged away and thrown outside the gates of Jerusalem.
20 ULB ಚೀಯೋನ್ ಯುವತಿಯೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀಮಿನಲ್ಲಿ ಅರಚಿಕೋ! ನಿನ್ನೊಂದಿಗೆ ವ್ಯಭಿಚಾರ ಮಾಡಿದವರೆಲ್ಲಾ ಹಾಳಾಗಿ ಹೋದರಲ್ಲಾ. BSB BSB: Go up to Lebanon and cry out; raise your voice in Bashan; cry out from Abarim, for all your lovers have been crushed.
21 ULB ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ <<ನಾನು ಕೇಳುವುದಿಲ್ಲ>> ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ. BSB BSB: I warned you when you were secure. You said, ‘I will not listen.’ This has been your way from youth, that you have not obeyed My voice.
22 ULB ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವುದು. ನಿನ್ನೊಂದಿಗೆ ವ್ಯಭಿಚಾರ ಮಾಡಿದವರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿಮಿತ್ತ ನೀನು ಆಶಾಭಂಗಪಟ್ಟು ಅವಮಾನಕ್ಕೀಡಾಗುವುದು ಖಂಡಿತ. BSB BSB: The wind will drive away all your shepherds, and your lovers will go into captivity. Then you will be ashamed and humiliated because of all your wickedness.
23 ULB ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು! BSB BSB: O inhabitant of Lebanon, nestled in the cedars, how you will groan when pangs of anguish come upon you, agony like a woman in labor.”
24 ULB ಯೆಹೋವನು ಹೀಗೆನ್ನುತ್ತಾನೆ, <<ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು! BSB BSB: “As surely as I live,” declares the LORD, “even if you, Coniah son of Jehoiakim king of Judah, were a signet ring on My right hand, I would pull you off.
25 ULB ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು. BSB BSB: In fact, I will hand you over to those you dread, who want to take your life—to Nebuchadnezzar king of Babylon and to the Chaldeans.
26 ULB ನಿನ್ನನ್ನೂ ಮತ್ತು ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು; ಅಲ್ಲೇ ಸಾಯುವಿರಿ. BSB BSB: I will hurl you and the mother who gave you birth into another land, where neither of you were born—and there you both will die.
27 ULB ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವುದೇ ಇಲ್ಲ>> ಎಂಬುದೇ. BSB BSB: You will never return to the land for which you long.”
28 ULB ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ? BSB BSB: Is this man Coniah a despised and shattered pot, a jar that no one wants? Why are he and his descendants hurled out and cast into a land they do not know?
29 ULB ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು! BSB BSB: O land, land, land, hear the word of the LORD!
30 ULB ಯೆಹೋವನು, <<ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳುವುದಿಲ್ಲ ಬಾಳನು>> ಎಂದು ಹೇಳುತ್ತಾನೆ. BSB BSB: This is what the LORD says: “Enroll this man as childless, a man who will not prosper in his lifetime. None of his descendants will prosper to sit on the throne of David or to rule again in Judah.”
Select verses for actions: Enter goes to them and Escape comes back.