1 ULB <<ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ>> ಎಂಬುದು ಯೆಹೋವನ ನುಡಿ. BSB BSB: “Woe to the shepherds who destroy and scatter the sheep of My pasture!” declares the LORD.
2 ULB ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, <<ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು. BSB BSB: Therefore this is what the LORD, the God of Israel, says about the shepherds who tend My people: “You have scattered My flock and driven them away, and have not attended to them. Behold, I will attend to you for the evil of your deeds, declares the LORD.
3 ULB ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು. BSB BSB: Then I Myself will gather the remnant of My flock from all the lands to which I have banished them, and I will return them to their pasture, where they will be fruitful and multiply.
4 ULB ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ>> ಎಂಬುದೇ. BSB BSB: I will raise up shepherds over them who will tend them, and they will no longer be afraid or dismayed, nor will any go missing, declares the LORD.
5 ULB ಯೆಹೋವನು, <<ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು. BSB BSB: Behold, the days are coming, declares the LORD, when I will raise up for David a righteous Branch, and He will reign wisely as King and will administer justice and righteousness in the land.
6 ULB ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; <ಯೆಹೋವ ಚಿದ್ಕೇನು> ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು>> ಎಂದು ನುಡಿಯುತ್ತಾನೆ. BSB BSB: In His days Judah will be saved, and Israel will dwell securely. And this is His name by which He will be called: The LORD Our Righteousness.
7 ULB ಆಹಾ, ಮುಂದಿನ ಕಾಲದಲ್ಲಿ ಜನರು, <<ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು, BSB BSB: So behold, the days are coming, declares the LORD, when they will no longer say, ‘As surely as the LORD lives, who brought the Israelites up out of the land of Egypt.’
8 ULB ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.>> ಇದು ಯೆಹೋವನ ನುಡಿ. BSB BSB: Instead they will say, ‘As surely as the LORD lives, who brought and led the descendants of the house of Israel up out of the land of the north and all the other lands to which He had banished them.’ Then they will dwell once more in their own land.”
9 ULB ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ. BSB BSB: As for the prophets: My heart is broken within me, and all my bones tremble. I have become like a drunkard, like a man overcome by wine, because of the LORD, because of His holy words.
10 ULB ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ. ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ. BSB BSB: For the land is full of adulterers—because of the curse, the land mourns and the pastures of the wilderness have dried up—their course is evil and their power is misused.
11 ULB ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ. BSB BSB: “For both prophet and priest are ungodly; even in My house I have found their wickedness,” declares the LORD.
12 ULB ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು. ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ. BSB BSB: “Therefore their path will become slick; they will be driven away into the darkness and fall into it. For I will bring disaster upon them in the year of their punishment,” declares the LORD.
13 ULB ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ. BSB BSB: “Among the prophets of Samaria I saw an offensive thing: They prophesied by Baal and led My people Israel astray.
14 ULB ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ. BSB BSB: And among the prophets of Jerusalem I have seen a horrible thing: They commit adultery and walk in lies. They strengthen the hands of evildoers, so that no one turns his back on wickedness. They are all like Sodom to Me; the people of Jerusalem are like Gomorrah.”
15 ULB ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, <<ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ>> ಎಂದು ನುಡಿಯುತ್ತಾನೆ. BSB BSB: Therefore this is what the LORD of Hosts says concerning the prophets: “I will feed them wormwood and give them poisoned water to drink, for from the prophets of Jerusalem ungodliness has spread throughout the land.”
16 ULB ಸೇನಾಧೀಶ್ವರನಾದ ಯೆಹೋವನು, <<ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ. BSB BSB: This is what the LORD of Hosts says: “Do not listen to the words of the prophets who prophesy to you. They are filling you with false hopes. They speak visions from their own minds, not from the mouth of the LORD.
17 ULB ನನ್ನನ್ನು ಅಸಡ್ಡೆಮಾಡುವವರಿಗೆ, <ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ> ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, <ನಿಮಗೆ ಯಾವ ಕೇಡೂ ಸಂಭವಿಸದು> ಎಂದು ನುಡಿಯುತ್ತಾರೆ. BSB BSB: They keep saying to those who despise Me, ‘The LORD says that you will have peace,’ and to everyone who walks in the stubbornness of his own heart, ‘No harm will come to you.’
18 ULB ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ? BSB BSB: But which of them has stood in the council of the LORD to see and hear His word? Who has given heed to His word and obeyed it?
19 ULB ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು. BSB BSB: Behold, the storm of the LORD has gone out with fury, a whirlwind swirling down upon the heads of the wicked.
20 ULB ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ. BSB BSB: The anger of the LORD will not turn back until He has fully accomplished the purposes of His heart. In the days to come you will understand this clearly.
21 ULB ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು. BSB BSB: I did not send these prophets, yet they have run with their message; I did not speak to them, yet they have prophesied.
22 ULB ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು>> ಎಂದು ಹೇಳುತ್ತಾನೆ. BSB BSB: But if they had stood in My council, they would have proclaimed My words to My people and turned them back from their evil ways and deeds.”
23 ULB ಯೆಹೋವನು ಇಂತೆನ್ನುತ್ತಾನೆ, <<ನಾನು ಸಮೀಪದಲ್ಲಿ ಮಾತ್ರ ಇರುವ ದೇವರೋ? BSB BSB: “Am I only a God nearby,” declares the LORD, “and not a God far away?”
25 ULB ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ. BSB BSB: “I have heard the sayings of the prophets who prophesy lies in My name: ‘I had a dream! I had a dream!’
26 ULB ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ. BSB BSB: How long will this continue in the hearts of these prophets who prophesy falsehood, these prophets of the delusion of their own minds?
27 ULB ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು? BSB BSB: They suppose the dreams that they tell one another will make My people forget My name, just as their fathers forgot My name through the worship of Baal.
28 ULB ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ. BSB BSB: Let the prophet who has a dream retell it, but let him who has My word speak it truthfully. For what is straw compared to grain?” declares the LORD.
29 ULB ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ. BSB BSB: “Is not My word like fire,” declares the LORD, “and like a hammer that smashes a rock?”
30 ULB ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ. BSB BSB: “Therefore behold,” declares the LORD, “I am against the prophets who steal from one another words they attribute to Me.”
31 ULB ಆಹಾ, ತಮ್ಮ ನಾಲಿಗೆಗಳನ್ನು ಚಾಚಿ <<ಯೆಹೋವನು ನುಡಿಯುತ್ತಾನೆ>> ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ. BSB BSB: “Yes,” declares the LORD, “I am against the prophets who wag their own tongues and proclaim, ‘The LORD declares it.’”
32 ULB ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ. BSB BSB: “Indeed,” declares the LORD, “I am against those who prophesy false dreams and retell them to lead My people astray with their reckless lies. It was not I who sent them or commanded them, and they are of no benefit at all to these people,” declares the LORD.
33 ULB ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ <<ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?>> ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, <<ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು. BSB BSB: “Now when this people or a prophet or priest asks you, ‘What is the burden of the LORD?’ you are to say to them, ‘What burden? I will forsake you, declares the LORD.’
34 ULB ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, <ಯೆಹೋವನ ಹೊರೆ> ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು. BSB BSB: As for the prophet or priest or anyone who claims, ‘This is the burden of the LORD,’ I will punish that man and his household.
35 ULB ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಮತ್ತು ಅಣ್ಣತಮ್ಮಂದಿರನ್ನೂ, <ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ?> BSB BSB: This is what each man is to say to his friend and to his brother: ‘What has the LORD answered?’ or ‘What has the LORD spoken?’
36 ULB ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ. BSB BSB: But refer no more to the burden of the LORD, for each man’s word becomes the burden, so that you pervert the words of the living God, the LORD of Hosts, our God.
37 ULB ನೀವು <ಯೆಹೋವನಿಂದ ನಿನಗೆ ಯಾವ ಉತ್ತರವಾಯಿತು, ಯೆಹೋವನು ಏನು ನುಡಿದಿದ್ದಾನೆ> ಎಂದು ಪ್ರವಾದಿಯನ್ನು ಕೇಳಿರಿ. BSB BSB: Thus you are to say to the prophet: ‘What has the LORD answered you?’ and ‘What has the LORD spoken?’
38 ULB ಒಂದು ವೇಳೆ ನೀವು <ಯೆಹೋವನ ಹೊರೆ> ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, <ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ, BSB BSB: But if you claim, ‘This is the burden of the LORD,’ then this is what the LORD says: Because you have said, ‘This is the burden of the LORD,’ and I specifically told you not to make this claim,
39 ULB ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು. BSB BSB: therefore I will surely forget you and will cast you out of My presence, both you and the city that I gave to you and your fathers.
40 ULB ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.>>> BSB BSB: And I will bring upon you everlasting shame and perpetual humiliation that will never be forgotten.”
Select verses for actions: Enter goes to them and Escape comes back.