1 ULB ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, BSB BSB: This is the word that came to Jeremiah concerning all the people of Judah in the fourth year of Jehoiakim son of Josiah king of Judah, which was the first year of Nebuchadnezzar king of Babylon.
2 ULB ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇಮಿನವರಿಗೂ ಸಾರಿದನು. BSB BSB: So the prophet Jeremiah spoke to all the people of Judah and all the residents of Jerusalem as follows:
3 ULB ಆತನು, <<ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ. BSB BSB: “From the thirteenth year of Josiah son of Amon king of Judah until this very day—twenty-three years—the word of the LORD has come to me, and I have spoken to you again and again, but you have not listened.
4 ULB ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ. BSB BSB: And the LORD has sent all His servants the prophets to you again and again, but you have not listened or inclined your ear to hear.
5 ULB ಆತನು ನಿಮಗೆ ಹೇಳಿದ ಮಾತೇನೆಂದರೆ, <ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ. BSB BSB: The prophets told you, ‘Turn now, each of you, from your evil ways and deeds, and you can dwell in the land that the LORD has given to you and your fathers forever and ever.
6 ULB ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ> ಎಂಬುದೇ. BSB BSB: Do not follow other gods to serve and worship them, and do not provoke Me to anger with the works of your hands. Then I will do you no harm.’
7 ULB ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ>> ಎಂದು ಹೇಳಿದನು. BSB BSB: ‘But to your own harm, you have not listened to Me,’ declares the LORD, ‘so you have provoked Me to anger with the works of your hands.’
8 ULB ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ, <<ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, BSB BSB: Therefore this is what the LORD of Hosts says: ‘Because you have not obeyed My words,
9 ULB ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು. BSB BSB: behold, I will summon all the families of the north, declares the LORD, and I will send for My servant Nebuchadnezzar king of Babylon, whom I will bring against this land, against its residents, and against all the surrounding nations. So I will devote them to destruction and make them an object of horror and contempt, an everlasting desolation.
10 ULB ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು. BSB BSB: Moreover, I will banish from them the sounds of joy and gladness, the voices of the bride and bridegroom, the sound of the millstones, and the light of the lamp.
11 ULB ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು. BSB BSB: And this whole land will become a desolate wasteland, and these nations will serve the king of Babylon for seventy years.
12 ULB ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ. BSB BSB: But when seventy years are complete, I will punish the king of Babylon and that nation, the land of the Chaldeans, for their guilt, declares the LORD, and I will make it an everlasting desolation.
13 ULB ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು. BSB BSB: I will bring upon that land all the words I have pronounced against it, all that is written in this book, which Jeremiah has prophesied against all the nations.
14 ULB ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು>> ಎಂಬುದೇ. BSB BSB: For many nations and great kings will enslave them, and I will repay them according to their deeds and according to the work of their hands.’”
15 ULB ಇಸ್ರಾಯೇಲರ ದೇವರಾದ ಯೆಹೋವನು ನನಗೆ, <<ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು. BSB BSB: This is what the LORD, the God of Israel, said to me: “Take from My hand this cup of the wine of wrath, and make all the nations to whom I send you drink from it.
16 ULB ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು>> ಎಂದು ಅಪ್ಪಣೆಕೊಟ್ಟನು. BSB BSB: And they will drink and stagger and go out of their minds, because of the sword that I will send among them.”
17 ULB ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ, ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು. BSB BSB: So I took the cup from the LORD’s hand and made all the nations drink from it, each one to whom the LORD had sent me,
18 ULB ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು. BSB BSB: to make them a ruin, an object of horror and contempt and cursing, as they are to this day—Jerusalem and the cities of Judah, its kings and officials;
19 ULB ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು, BSB BSB: Pharaoh king of Egypt, his officials, his leaders, and all his people;
20 ULB ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಹಾಳಾಗದೆ ಉಳಿದ ಸ್ವಲ್ಪ ಅಷ್ಡೋದ್, BSB BSB: all the mixed tribes; all the kings of Uz; all the kings of the Philistines: Ashkelon, Gaza, Ekron, and the remnant of Ashdod;
21 ULB ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, BSB BSB: Edom, Moab, and the Ammonites;
22 ULB ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು, BSB BSB: all the kings of Tyre and Sidon; the kings of the coastlands across the sea;
23 ULB ದೆದಾನ್ಯರು, ತೇಮಾ ದೇಶದವರು, ಬೂಜ್ ದೇಶದವರು, ಚಂಡಿಕೆ ಬಿಟ್ಟುಕೊಂಡಿರುವವರೆಲ್ಲರು, BSB BSB: Dedan, Tema, Buz, and all who cut the corners of their hair;
24 ULB ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ ಎಲ್ಲಾ ಅರಸರು, BSB BSB: all the kings of Arabia, and all the kings of the mixed tribes who dwell in the desert;
25 ULB ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು, BSB BSB: all the kings of Zimri, Elam, and Media;
26 ULB ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ. BSB BSB: all the kings of the north, both near and far, one after another—all the kingdoms on the face of the earth. And after all of them, the king of Sheshach will drink it too.
27 ULB ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, <<ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.>> BSB BSB: “Then you are to tell them that this is what the LORD of Hosts, the God of Israel, says: ‘Drink, get drunk, and vomit. Fall down and never get up again, because of the sword I will send among you.’
28 ULB ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, <<ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು. BSB BSB: If they refuse to take the cup from your hand and drink it, you are to tell them that this is what the LORD of Hosts says: ‘You most certainly must drink it!
29 ULB ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ>> ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ. BSB BSB: For behold, I am beginning to bring disaster on the city that bears My Name, so how could you possibly go unpunished? You will not go unpunished, for I am calling down a sword upon all the inhabitants of the earth, declares the LORD of Hosts.’
30 ULB ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, <<ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು. BSB BSB: So you are to prophesy all these words against them and say to them: ‘The LORD will roar from on high; He will raise His voice from His holy habitation. He will roar loudly over His pasture; like those who tread the grapes, He will call out with a shout against all the inhabitants of the earth.
31 ULB ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು>> ಇದು ಯೆಹೋವನ ನುಡಿ. BSB BSB: The tumult will resound to the ends of the earth because the LORD brings a charge against the nations. He brings judgment on all mankind and puts the wicked to the sword,’” declares the LORD.
32 ULB ಸೇನಾಧೀಶ್ವರನಾದ ಯೆಹೋವನು, <<ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು. BSB BSB: This is what the LORD of Hosts says: “Behold! Disaster is spreading from nation to nation; a mighty storm is rising from the ends of the earth.”
33 ULB ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು. BSB BSB: Those slain by the LORD on that day will be spread from one end of the earth to the other. They will not be mourned, gathered, or buried. They will be like dung lying on the ground.
34 ULB ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ. BSB BSB: Wail, you shepherds, and cry out; roll in the dust, you leaders of the flock. For the days of your slaughter have come; you will fall and be shattered like fine pottery.
35 ULB ಕುರುಬರು ಓಡಿಹೋಗುವುದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ನಾಯಕರು ತಪ್ಪಿಸಿಕೊಳ್ಳುವುದಕ್ಕೆ ಆಸ್ಪದ ದೊರೆಯದು. BSB BSB: Flight will evade the shepherds, and escape will elude the leaders of the flock.
36 ULB ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ನಾಯಕರ ಅರಚಾಟ! ಯೆಹೋವನು ಆ ಹುಲ್ಗಾವಲನ್ನು ಹಾಳುಮಾಡುತ್ತಿದ್ದಾನಲ್ಲಾ. BSB BSB: Hear the cry of the shepherds, the wailing of the leaders of the flock, for the LORD is destroying their pasture.
37 ULB ನೆಮ್ಮದಿಯ ಗೋಮಾಳಗಳು ಯೆಹೋವನ ರೋಷಾಗ್ನಿಯಿಂದ ನಿಶ್ಯಬ್ದವಾಗಿವೆ. BSB BSB: The peaceful meadows have been silenced because of the LORD’s burning anger.
38 ULB ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ>> ಎಂದು ನುಡಿಯುತ್ತಾನೆ. BSB BSB: He has left His den like a lion, for their land has been made a desolation by the sword of the oppressor, and because of the fierce anger of the LORD.
Select verses for actions: Enter goes to them and Escape comes back.