1 ULB ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು. BSB BSB: At the beginning of the reign of Jehoiakim son of Josiah king of Judah, this word came from the LORD:
2 ULB <<ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ. BSB BSB: “This is what the LORD says: Stand in the courtyard of the house of the LORD and speak all the words I have commanded you to speak to all the cities of Judah who come to worship there. Do not omit a word.
3 ULB ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು. BSB BSB: Perhaps they will listen and turn—each from his evil way of life—so that I may relent of the disaster I am planning to bring upon them because of the evil of their deeds.
4 ULB ನೀನು ಅವರಿಗೆ, <ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ, BSB BSB: And you are to tell them that this is what the LORD says: ‘If you do not listen to Me and walk in My law, which I have set before you,
5 ULB ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ, BSB BSB: and if you do not listen to the words of My servants the prophets, whom I have sent you again and again even though you did not listen,
6 ULB ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು>>> ಎಂದು ಹೇಳು ಎಂದನು. BSB BSB: then I will make this house like Shiloh, and I will make this city an object of cursing among all the nations of the earth.’”
7 ULB ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು. BSB BSB: Now the priests and prophets and all the people heard Jeremiah speaking these words in the house of the LORD,
8 ULB ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, <<ನೀನು ಸಾಯಲೇಬೇಕು! BSB BSB: and as soon as he had finished telling all the people everything the LORD had commanded him to say, the priests and prophets and all the people seized him, shouting, “You must surely die!
9 ULB ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, <ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು> ಎಂದು ಏಕೆ ಹೇಳಿದೆ>> ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು. BSB BSB: How dare you prophesy in the name of the LORD that this house will become like Shiloh and this city will be desolate and deserted!” And all the people assembled against Jeremiah in the house of the LORD.
10 ULB ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು. BSB BSB: When the officials of Judah heard these things, they went up from the king’s palace to the house of the LORD and sat there at the entrance of the New Gate.
11 ULB ಆಗ ಯಾಜಕರೂ ಮತ್ತು ಪ್ರವಾದಿಗಳೂ, <<ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ>> ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು. BSB BSB: Then the priests and prophets said to the officials and all the people, “This man is worthy of death, for he has prophesied against this city, as you have heard with your own ears!”
12 ULB ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, <<ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು. BSB BSB: But Jeremiah said to all the officials and all the people, “The LORD sent me to prophesy against this house and against this city all the words that you have heard.
13 ULB ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು. BSB BSB: So now, correct your ways and deeds, and obey the voice of the LORD your God, so that He might relent of the disaster He has pronounced against you.
14 ULB ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ. BSB BSB: As for me, here I am in your hands; do to me what you think is good and right.
15 ULB ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ>> ಎಂದು ಹೇಳಿದನು. BSB BSB: But know for certain that if you put me to death, you will bring innocent blood upon yourselves, upon this city, and upon its residents; for truly the LORD has sent me to speak all these words in your hearing.”
16 ULB ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, <<ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ>> ಎಂದು ಹೇಳಿದರು. BSB BSB: Then the officials and all the people told the priests and prophets, “This man is not worthy of death, for he has spoken to us in the name of the LORD our God!”
17 ULB ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು, BSB BSB: Some of the elders of the land stood up and said to the whole assembly of the people,
18 ULB <<ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, <ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು> ಎಂದು ಹೇಳಲಾಗಿ BSB BSB: “Micah the Moreshite prophesied in the days of Hezekiah king of Judah and told all the people of Judah that this is what the LORD of Hosts says: ‘Zion will be plowed like a field, Jerusalem will become a heap of rubble, and the temple mount a wooded ridge.’
19 ULB ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ>> ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು. BSB BSB: Did Hezekiah king of Judah or anyone else in Judah put him to death? Did Hezekiah not fear the LORD and seek His favor, and did not the LORD relent of the disaster He had pronounced against them? But we are about to bring great harm on ourselves!”
20 ULB ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು. BSB BSB: Now there was another man prophesying in the name of the LORD, Uriah son of Shemaiah from Kiriath-jearim. He prophesied against this city and against this land the same things that Jeremiah did.
21 ULB ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು. BSB BSB: King Jehoiakim and all his mighty men and officials heard his words, and the king sought to put him to death. But when Uriah found out about it, he fled in fear and went to Egypt.
22 ULB ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು. BSB BSB: Then King Jehoiakim sent men to Egypt: Elnathan son of Achbor along with some other men.
23 ULB ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು. BSB BSB: They brought Uriah out of Egypt and took him to King Jehoiakim, who had him put to the sword and his body thrown into the burial place of the common people.
24 ULB ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು. BSB BSB: Nevertheless, Ahikam son of Shaphan supported Jeremiah, so he was not handed over to the people to be put to death.
Select verses for actions: Enter goes to them and Escape comes back.