1 ULB ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು, BSB BSB: This is the word that came to Jeremiah from the LORD:
2 ULB <<ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ನೀನು ಗ್ರಂಥವಾಗಿ ಬರೆ. BSB BSB: “This is what the LORD, the God of Israel, says: ‘Write in a book all the words that I have spoken to you.
3 ULB ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ>> ಎಂಬುದೇ. BSB BSB: For behold, the days are coming, declares the LORD, when I will restore from captivity My people Israel and Judah, declares the LORD. I will restore them to the land that I gave to their fathers, and they will possess it.’”
4 ULB ಯೆಹೋವನು ಇಸ್ರಾಯೇಲಿನ ಮತ್ತು ಯೆಹೂದದ ವಿಷಯವಾಗಿ ಈ ಮಾತುಗಳನ್ನು ಹೇಳಿದನು, BSB BSB: These are the words that the LORD spoke concerning Israel and Judah.
5 ULB <<ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ; BSB BSB: Yes, this is what the LORD says: “A cry of panic is heard—a cry of terror, not of peace.
6 ULB ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ? BSB BSB: Ask now, and see: Can a male give birth? Why then do I see every man with his hands on his stomach like a woman in labor and every face turned pale?
7 ULB ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.>> BSB BSB: How awful that day will be! None will be like it! It is the time of Jacob’s distress, but he will be saved out of it.
8 ULB ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು. BSB BSB: On that day, declares the LORD of Hosts, I will break the yoke off their necks and tear off their bonds, and no longer will strangers enslave them.
9 ULB ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.>> BSB BSB: Instead, they will serve the LORD their God and David their king, whom I will raise up for them.
10 ULB ಯೆಹೋವನು ಇಂತೆನ್ನುತ್ತಾನೆ, <<ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.>> BSB BSB: As for you, O Jacob My servant, do not be afraid, declares the LORD, and do not be dismayed, O Israel. For I will surely save you out of a distant place, your descendants from the land of their captivity! Jacob will return to quiet and ease, with no one to make him afraid.
11 ULB ಯೆಹೋವನು ಇಂತೆನ್ನುತ್ತಾನೆ, <<ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.>> BSB BSB: For I am with you to save you, declares the LORD. Though I will completely destroy all the nations to which I have scattered you, I will not completely destroy you. Yet I will discipline you justly, and will by no means leave you unpunished.”
12 ULB ಯೆಹೋವನು ಇಂತೆನ್ನುತ್ತಾನೆ, <<ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ. BSB BSB: For this is what the LORD says: “Your injury is incurable; your wound is grievous.
13 ULB ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ. BSB BSB: There is no one to plead your cause, no remedy for your sores, no recovery for you.
14 ULB ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು. BSB BSB: All your lovers have forgotten you; they no longer seek you, for I have struck you as an enemy would, with the discipline of someone cruel, because of your great iniquity and your numerous sins.
15 ULB ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು. BSB BSB: Why do you cry out over your wound? Your pain has no cure! Because of your great iniquity and your numerous sins I have done these things to you.
16 ULB ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.>> BSB BSB: Nevertheless, all who devour you will be devoured, and all your adversaries—every one of them—will go off into exile. Those who plundered you will be plundered, and all who raided you will be raided.
17 ULB ಯೆಹೋವನು ಇಂತೆನ್ನುತ್ತಾನೆ, <<ಇಗೋ, <ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ> ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.>> BSB BSB: But I will restore your health and heal your wounds, declares the LORD, because they call you an outcast, Zion, for whom no one cares.”
18 ULB ಯೆಹೋವನು ಹೀಗೆನ್ನುತ್ತಾನೆ, <<ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು. BSB BSB: This is what the LORD says: “I will restore the fortunes of Jacob’s tents and have compassion on his dwellings. And the city will be rebuilt on her own ruins, and the palace will stand in its rightful place.
19 ULB ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು. BSB BSB: Thanksgiving will proceed from them, a sound of celebration. I will multiply them, and they will not be decreased; I will honor them, and they will not be belittled.
20 ULB ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವುದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು. BSB BSB: Their children will be as in days of old, and their congregation will be established before Me; and I will punish all their oppressors.
21 ULB ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.>> BSB BSB: Their leader will be one of their own, and their ruler will arise from their midst. And I will bring him near, and he will approach Me, for who would dare on his own to approach Me?” declares the LORD.
22 ULB ನೀವು ನನ್ನ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು. BSB BSB: “And you will be My people, and I will be your God.”
23 ULB ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು. BSB BSB: Behold, the storm of the LORD has gone out with fury, a whirlwind swirling down upon the heads of the wicked.
24 ULB ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು, ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ. BSB BSB: The fierce anger of the LORD will not turn back until He has fully accomplished the purposes of His heart. In the days to come you will understand this.
Select verses for actions: Enter goes to them and Escape comes back.