1 ULB ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು. BSB BSB: This is the word that came to Jeremiah from the LORD in the tenth year of Zedekiah king of Judah, which was the eighteenth year of Nebuchadnezzar.
2 ULB ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. BSB BSB: At that time the army of the king of Babylon was besieging Jerusalem, and Jeremiah the prophet was imprisoned in the courtyard of the guard, which was in the palace of the king of Judah.
3 ULB ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, <<ನೀನು ಪ್ರವಾದನೆ ಮಾಡುತ್ತಾ, <ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು. BSB BSB: For Zedekiah king of Judah had imprisoned him, saying: “Why are you prophesying like this? You claim that the LORD says, ‘Behold, I am about to deliver this city into the hand of the king of Babylon, and he will capture it.
4 ULB ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು. BSB BSB: Zedekiah king of Judah will not escape from the hands of the Chaldeans, but he will surely be delivered into the hand of the king of Babylon, and will speak with him face to face and see him eye to eye.
5 ULB ಆ ಅರಸನು ಚಿದ್ಕೀಯನನ್ನು ಬಾಬೆಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?>>> ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು. BSB BSB: He will take Zedekiah to Babylon, where he will stay until I attend to him, declares the LORD. If you fight against the Chaldeans, you will not succeed.’”
6 ULB ಅದಕ್ಕೆ ಯೆರೆಮೀಯನು, <<ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು, BSB BSB: Jeremiah replied, “The word of the LORD came to me, saying:
7 ULB ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು <ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು>>> ಎಂದು ತಿಳಿಸಿದನು. BSB BSB: Behold! Hanamel, the son of your uncle Shallum, is coming to you to say, ‘Buy for yourself my field in Anathoth, for you have the right of redemption to buy it.’
8 ULB ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, <<ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ>> ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು. BSB BSB: Then, as the LORD had said, my cousin Hanamel came to me in the courtyard of the guard and urged me, ‘Please buy my field in Anathoth in the land of Benjamin, for you own the right of inheritance and redemption. Buy it for yourself.’” Then I knew that this was the word of the LORD.
9 ULB ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆನು. BSB BSB: So I bought the field in Anathoth from my cousin Hanamel, and I weighed out seventeen shekels of silver.
10 ULB ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು. BSB BSB: I signed and sealed the deed, called in witnesses, and weighed out the silver on the scales.
11 ULB ಆ ಮೇಲೆ ನಾನು ಕ್ರಯಪತ್ರವನ್ನು ಅಂದರೆ ನಿಯಮ ಮತ್ತು ಷರತ್ತುಗಳಿಂದ ಮುಚ್ಚಿದ್ದ ಪತ್ರವನ್ನೂ ಹಾಗು ಮುಚ್ಚಳದ ಪತ್ರವನ್ನೂ ತೆಗೆದುಕೊಂಡೆನು. BSB BSB: Then I took the deed of purchase—the sealed copy with its terms and conditions, as well as the open copy—
12 ULB ಅದನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ಸಹಿಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು. BSB BSB: and I gave this deed to Baruch son of Neriah, the son of Mahseiah, in the sight of my cousin Hanamel and the witnesses who were signing the purchase agreement and all the Jews sitting in the courtyard of the guard.
13 ULB ಅವರೆಲ್ಲರ ಮುಂದೆ ನಾನು ಬಾರೂಕನಿಗೆ, BSB BSB: In their sight I instructed Baruch,
14 ULB <<ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, <ನೀನು ಈ ಕ್ರಯಪತ್ರಗಳನ್ನು, ಅಂದರೆ ಮುಚ್ಚಿದ ಪತ್ರವನ್ನೂ ಮತ್ತು ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಬಹು ದಿನ ಇರುವ ಹಾಗೆ ಅದನ್ನು ಮಡಿಕೆಯಲ್ಲಿ ಬಚ್ಚಿಡು. BSB BSB: “This is what the LORD of Hosts, the God of Israel, says: Take these deeds—both the sealed copy and the open copy of the deed of purchase—and put them in a clay jar to preserve them for a long time.
15 ULB ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ>>> ಎಂದು ಖಂಡಿತವಾಗಿ ಹೇಳಿದೆನು. BSB BSB: For this is what the LORD of Hosts, the God of Israel, says: Houses, fields, and vineyards will again be bought in this land.”
16 ULB ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ, BSB BSB: After I had given the deed of purchase to Baruch son of Neriah, I prayed to the LORD:
17 ULB <<ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ. BSB BSB: “Oh, Lord GOD! You have made the heavens and the earth by Your great power and outstretched arm. Nothing is too difficult for You!
18 ULB ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ. BSB BSB: You show loving devotion to thousands but lay the iniquity of the fathers into the laps of their children after them, O great and mighty God whose name is the LORD of Hosts,
19 ULB ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ. BSB BSB: the One great in counsel and mighty in deed, whose eyes are on all the ways of the sons of men, to reward each one according to his ways and according to the fruit of his deeds.
20 ULB ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ. BSB BSB: You performed signs and wonders in the land of Egypt, and You do so to this very day, both in Israel and among all mankind. And You have made a name for Yourself, as is the case to this day.
21 ULB ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ. BSB BSB: You brought Your people Israel out of the land of Egypt with signs and wonders, with a strong hand and an outstretched arm, and with great terror.
22 ULB ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ. BSB BSB: You gave them this land that You had sworn to give their fathers, a land flowing with milk and honey.
23 ULB ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ. BSB BSB: They came in and possessed it, but they did not obey Your voice or walk in Your law. They failed to perform all that You commanded them to do, and so You have brought upon them all this disaster.
24 ULB ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ. BSB BSB: See how the siege ramps are mounted against the city to capture it. And by sword and famine and plague, the city has been given into the hands of the Chaldeans who are fighting against it. What You have spoken has happened, as You now see!
25 ULB ಕರ್ತನಾದ ಯೆಹೋವನೇ, ನೀನು ನನಗೆ, <ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ> ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ>> ಎಂದು ವಿಜ್ಞಾಪನೆ ಮಾಡಿದೆನು. BSB BSB: Yet You, O Lord GOD, have said to me, ‘Buy for yourself the field with silver and call in witnesses, even though the city has been delivered into the hands of the Chaldeans!’”
26 ULB ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು, BSB BSB: Then the word of the LORD came to Jeremiah:
27 ULB <<ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ? BSB BSB: “Behold, I am the LORD, the God of all flesh. Is anything too difficult for Me?
28 ULB ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು. BSB BSB: Therefore this is what the LORD says: Behold, I am about to deliver this city into the hands of the Chaldeans and of Nebuchadnezzar king of Babylon, who will capture it.
29 ULB ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು. BSB BSB: And the Chaldeans who are fighting against this city will come in, set it on fire, and burn it, along with the houses of those who provoked Me to anger by burning incense to Baal on their rooftops and by pouring out drink offerings to other gods.
30 ULB ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ. BSB BSB: For the children of Israel and of Judah have done nothing but evil in My sight from their youth; indeed, they have done nothing but provoke Me to anger by the work of their hands, declares the LORD.
31 ULB ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ. BSB BSB: For this city has aroused My wrath and fury from the day it was built until now. Therefore I will remove it from My presence
32 ULB ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು. BSB BSB: because of all the evil the children of Israel and of Judah have done to provoke Me to anger—they, their kings, their officials, their priests and prophets, the men of Judah, and the residents of Jerusalem.
33 ULB ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ. BSB BSB: They have turned their backs to Me and not their faces. Though I taught them again and again, they would not listen or respond to discipline.
34 ULB ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ. BSB BSB: They have placed their abominations in the house that bears My Name, and so have defiled it.
35 ULB ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ>> ಎಂಬುದೇ. BSB BSB: They have built the high places of Baal in the Valley of Ben-hinnom to make their sons and daughters pass through the fire to Molech—something I never commanded them, nor had it ever entered My mind, that they should commit such an abomination and cause Judah to sin.
36 ULB ಹೀಗಿರಲು <<ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ, BSB BSB: Now therefore, about this city of which you say, ‘It will be delivered into the hand of the king of Babylon by sword and famine and plague,’ this is what the LORD, the God of Israel, says:
37 ULB <ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು. BSB BSB: I will surely gather My people from all the lands to which I have banished them in My furious anger and great wrath, and I will return them to this place and make them dwell in safety.
38 ULB ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು. BSB BSB: They will be My people, and I will be their God.
39 ULB ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. BSB BSB: I will give them one heart and one way, so that they will always fear Me for their own good and for the good of their children after them.
40 ULB ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು> ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು. BSB BSB: I will make an everlasting covenant with them: I will never turn away from doing good to them, and I will put My fear in their hearts, so that they will never turn away from Me.
41 ULB ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.>> BSB BSB: Yes, I will rejoice in doing them good, and I will faithfully plant them in this land with all My heart and with all My soul.
42 ULB ಯೆಹೋವನು ಇಂತೆನ್ನುತ್ತಾನೆ, <<ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು. BSB BSB: For this is what the LORD says: Just as I have brought all this great disaster on this people, so I will bring on them all the good I have promised them.
43 ULB ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಂಡುಕೊಳ್ಳುವರು, ಕೊಡುವರು. BSB BSB: And fields will be bought in this land about which you are saying, ‘It is a desolation, without man or beast; it has been delivered into the hands of the Chaldeans.’
44 ULB ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.>> ಇದು ಯೆಹೋವನ ನುಡಿ. BSB BSB: Fields will be purchased with silver, and deeds will be signed, sealed, and witnessed in the land of Benjamin, in the areas surrounding Jerusalem, and in the cities of Judah—the cities of the hill country, the foothills, and the Negev—because I will restore them from captivity, declares the LORD.”
Select verses for actions: Enter goes to them and Escape comes back.