1 ULB ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ, BSB BSB: In the fourth year of Jehoiakim son of Josiah king of Judah, this word came to Jeremiah from the LORD:
2 ULB <<ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ. BSB BSB: “Take a scroll and write on it all the words I have spoken to you concerning Israel, Judah, and all the nations, from the day I first spoke to you during the reign of Josiah until today.
3 ULB ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು>> ಎಂಬ ಮಾತನ್ನು ತಿಳಿಸಿದನು. BSB BSB: Perhaps when the people of Judah hear about all the calamity I plan to bring upon them, each of them will turn from his wicked way. Then I will forgive their iniquity and their sin.”
5 ULB ಮತ್ತು ಯೆರೆಮೀಯನು ಬಾರೂಕನಿಗೆ, <<ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ; BSB BSB: Then Jeremiah commanded Baruch, “I am restricted; I cannot enter the house of the LORD;
6 ULB ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು. BSB BSB: so you are to go to the house of the LORD on a day of fasting, and in the hearing of the people you are to read the words of the LORD from the scroll you have written at my dictation. Read them in the hearing of all the people of Judah who are coming from their cities.
7 ULB ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ>> ಎಂದು ಅಪ್ಪಣೆಕೊಟ್ಟನು. BSB BSB: Perhaps they will bring their petition before the LORD, and each one will turn from his wicked way; for great are the anger and fury that the LORD has pronounced against this people.”
8 ULB ನೇರೀಯನ ಮಗನಾದ ಬಾರೂಕನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಯೆಹೋವನ ಆಲಯದೊಳಗೆ ಓದಿ ಪ್ರವಾದಿಯಾದ ಯೆರೆಮೀಯನು ಆಜ್ಞಾಪಿಸಿದಂತೆ ಮಾಡಿದನು. BSB BSB: So Baruch son of Neriah did everything that Jeremiah the prophet had commanded him. In the house of the LORD he read the words of the LORD from the scroll.
9 ULB ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು. BSB BSB: Now in the ninth month of the fifth year of Jehoiakim son of Josiah king of Judah, a fast before the LORD was proclaimed to all the people of Jerusalem and all who had come there from the cities of Judah.
11 ULB ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ, ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು. BSB BSB: When Micaiah son of Gemariah, the son of Shaphan, heard all the words of the LORD from the scroll,
12 ULB ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು. BSB BSB: he went down to the scribe’s chamber in the king’s palace, where all the officials were sitting: Elishama the scribe, Delaiah son of Shemaiah, Elnathan son of Achbor, Gemariah son of Shaphan, Zedekiah son of Hananiah, and all the other officials.
13 ULB ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು, BSB BSB: And Micaiah reported to them all the words he had heard Baruch read from the scroll in the hearing of the people.
14 ULB ಸಕಲ ಪ್ರಧಾನರು ಬಾರೂಕನಿಗೆ, <<ನೀನು ಜನರ ಮುಂದೆ ಓದಿದ ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ>> ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿ ಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು. BSB BSB: Then all the officials sent word to Baruch through Jehudi son of Nethaniah, the son of Shelemiah, the son of Cushi, saying, “Bring the scroll that you read in the hearing of the people, and come here.” So Baruch son of Neriah took the scroll and went to them.
15 ULB ಅವರು ಅವನಿಗೆ, <<ದಯಮಾಡಿ ಕುಳಿತುಕೊಂಡು ನಮ್ಮ ಮುಂದೆ ಓದು>> ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು. BSB BSB: “Please sit down,” they said, “and read it in our hearing.” So Baruch read it in their hearing.
16 ULB ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, <<ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು>> ಎಂದು ಬಾರೂಕನಿಗೆ ಹೇಳಿದರು. BSB BSB: When they had heard all these words, they turned to one another in fear and said to Baruch, “Surely we must report all these words to the king.”
17 ULB ಮತ್ತು, <<ನೀನು ಈ ಮಾತುಗಳನ್ನೆಲ್ಲಾ ಹೇಗೆ ಬರೆದಿ? ಅವನ ಬಾಯಿಂದ ಬಂದ ಹಾಗೆತಾನೇ? ದಯಮಾಡಿ ನಮಗೆ ತಿಳಿಸು>> ಎಂದು ಅವನನ್ನು ಕೇಳಿದರು. BSB BSB: “Tell us now,” they asked Baruch, “how did you write all these words? Was it at Jeremiah’s dictation?”
18 ULB ಬಾರೂಕನು ಅವರಿಗೆ, <<ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಸಿಯಿಂದ ಈ ಪುಸ್ತಕದಲ್ಲಿ ಬರೆದೆನು>> ಎಂದು ಉತ್ತರಕೊಟ್ಟನು. BSB BSB: “It was at his dictation,” Baruch replied. “He recited all these words to me and I wrote them in ink on the scroll.”
19 ULB ಆಗ ಪ್ರಧಾನರು ಬಾರೂಕನಿಗೆ, <<ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು>> ಎಂದು ಹೇಳಿದನು. BSB BSB: Then the officials said to Baruch, “You and Jeremiah must hide yourselves and tell no one where you are.”
20 ULB ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು. BSB BSB: So the officials went to the king in the courtyard. And having stored the scroll in the chamber of Elishama the scribe, they reported everything to the king.
21 ULB ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು. BSB BSB: Then the king sent Jehudi to get the scroll, and he took it from the chamber of Elishama the scribe. And Jehudi read it in the hearing of the king and all the officials who were standing beside him.
22 ULB ಆಗ ಪುಷ್ಯಮಾಸ; ಅರಸನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯು ಉರಿಯುತ್ತಿತ್ತು. BSB BSB: Since it was the ninth month, the king was sitting in his winter quarters with a fire burning before him.
23 ULB ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು. BSB BSB: And as soon as Jehudi had read three or four columns, Jehoiakim would cut them off with a scribe’s knife and throw them into the firepot, until the entire scroll had been consumed by the fire.
24 ULB ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ. BSB BSB: Yet in hearing all these words, the king and his servants did not become frightened or tear their garments.
25 ULB ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, <<ದಯಮಾಡಿ ಸುರುಳಿಯನ್ನು ಸುಡಬಾರದು>> ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ. BSB BSB: Even though Elnathan, Delaiah, and Gemariah urged the king not to burn the scroll, he would not listen to them.
26 ULB ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು. BSB BSB: Instead, the king commanded Jerahmeel, a son of the king, as well as Seraiah son of Azriel and Shelemiah son of Abdeel, to seize Baruch the scribe and Jeremiah the prophet. But the LORD had hidden them.
28 ULB <<ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು. BSB BSB: “Take another scroll and rewrite on it the very words that were on the original scroll, which Jehoiakim king of Judah has burned.
29 ULB ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, <ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ. BSB BSB: You are to proclaim concerning Jehoiakim king of Judah that this is what the LORD says: You have burned the scroll and said, ‘Why have you written on it that the king of Babylon would surely come and destroy this land and deprive it of man and beast?’
30 ULB ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು. BSB BSB: Therefore this is what the LORD says about Jehoiakim king of Judah: He will have no one to sit on David’s throne, and his body will be thrown out and exposed to heat by day and frost by night.
31 ULB ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು>>> ಎಂದು ಹೇಳಿದನು. BSB BSB: I will punish him and his descendants and servants for their iniquity. I will bring on them, on the residents of Jerusalem, and on the men of Judah, all the calamity about which I warned them but they did not listen.”
32 ULB ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂತಹ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. BSB BSB: Then Jeremiah took another scroll and gave it to the scribe Baruch son of Neriah, and at Jeremiah’s dictation he wrote on it all the words of the scroll that Jehoiakim king of Judah had burned in the fire. And many similar words were added to them.
Select verses for actions: Enter goes to them and Escape comes back.