1 ULB ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು. BSB BSB: In the seventh month, Ishmael son of Nethaniah, the son of Elishama, who was a member of the royal family and one of the king’s chief officers, came with ten men to Gedaliah son of Ahikam at Mizpah, and they ate a meal together there.
2 ULB ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು. BSB BSB: Then Ishmael son of Nethaniah and the ten men who were with him got up and struck down Gedaliah son of Ahikam, the son of Shaphan, with the sword, killing the one whom the king of Babylon had appointed to govern the land.
3 ULB ಇದಲ್ಲದೆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ, ಅಲ್ಲಿ ಸಿಕ್ಕಿದ ಕಸ್ದೀಯರಾದ ಸೈನಿಕರನ್ನೂ ಹತ್ಯೆಮಾಡಿದನು. BSB BSB: Ishmael also killed all the Jews who were with Gedaliah at Mizpah, as well as the Chaldean soldiers who were there.
4 ULB ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು, BSB BSB: On the second day after the murder of Gedaliah, when no one yet knew about it,
5 ULB ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು. BSB BSB: eighty men who had shaved off their beards, torn their garments, and cut themselves came from Shechem, Shiloh, and Samaria, carrying grain offerings and frankincense for the house of the LORD.
6 ULB ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದು ಅವರನ್ನು ಎದರುಗೊಂಡು, <<ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಬನ್ನಿರಿ>> ಎಂದು ಹೇಳಿದನು. BSB BSB: And Ishmael son of Nethaniah went out from Mizpah to meet them, weeping as he went. When Ishmael encountered the men, he said, “Come to Gedaliah son of Ahikam.”
7 ULB ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಮತ್ತು ಅವನ ಸಂಗಡಿಗರೂ ಅವರನ್ನು ಕೊಲ್ಲಿಸಿ ಬಾವಿಯಲ್ಲಿ ಹಾಕಿದರು. BSB BSB: And when they came into the city, Ishmael son of Nethaniah and the men with him slaughtered them and threw them into a cistern.
8 ULB ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, <<ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ>> ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು. BSB BSB: But ten of the men among them said to Ishmael, “Do not kill us, for we have hidden treasure in the field—wheat, barley, oil, and honey!” So he refrained from killing them with the others.
9 ULB ಇಷ್ಮಾಯೇಲನು ತಾನು ಗೆದಲ್ಯನ ಸಂಗಡ ಕೊಂದ ಇತರರ ಶವಗಳನ್ನು ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು. BSB BSB: Now the cistern into which Ishmael had thrown all the bodies of the men he had struck down along with Gedaliah was a large one that King Asa had made for fear of Baasha king of Israel. Ishmael son of Nethaniah filled it with the slain.
10 ULB ಆ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮಿಚ್ಪದ ಉಳಿದ ಜನರನ್ನು ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು. BSB BSB: Then Ishmael took captive all the remnant of the people of Mizpah—the daughters of the king along with all the others who remained in Mizpah—over whom Nebuzaradan captain of the guard had appointed Gedaliah son of Ahikam. Ishmael son of Nethaniah took them captive and set off to cross over to the Ammonites.
11 ULB ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ ಎಲ್ಲಾ ಕೆಡುಕನ್ನು ಕೇಳಿ, BSB BSB: When Johanan son of Kareah and all the commanders of the armies with him heard of all the crimes that Ishmael son of Nethaniah had committed,
12 ULB ತಮ್ಮ ಸೈನಿಕರನ್ನೆಲ್ಲಾ ಕರೆದುಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು, ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು. BSB BSB: they took all their men and went to fight Ishmael son of Nethaniah. And they found him near the great pool in Gibeon.
13 ULB ಆಗ ಇಷ್ಮಾಯೇಲನ ಸಂಗಡ ಇದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು. BSB BSB: When all the people with Ishmael saw Johanan son of Kareah and all the commanders of the army with him, they rejoiced,
14 ULB ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲ ಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು. BSB BSB: and all the people whom Ishmael had taken captive at Mizpah turned and went over to Johanan son of Kareah.
15 ULB ನೆತನ್ಯನ ಮಗನಾದ ಇಷ್ಮಾಯೇಲನೋ ಎಂಟು ಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮೊರೆಹೊಕ್ಕನು. BSB BSB: But Ishmael son of Nethaniah and eight of his men escaped from Johanan and went to the Ammonites.
16 ULB ಆಗ ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಮಸ್ತ ಸೇನಾಧಿಪತಿಗಳೂ ತಾವು ನೆತನ್ಯನ ಮಗನಾದ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಭಟರು, ಹೆಂಗಸರು, ಮಕ್ಕಳು, ಕಂಚುಕಿಗಳು, ಅಂತು ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದ ಮೇಲೆ ಮಿಚ್ಪದಿಂದ ಒಯ್ದ ಉಳಿದ ಜನರನ್ನೆಲ್ಲಾ ಕರೆದುಕೊಂಡು ಹೋದರು. BSB BSB: Then Johanan son of Kareah and all the commanders of the armies with him took the whole remnant of the people from Mizpah whom he had recovered from Ishmael son of Nethaniah after Ishmael had killed Gedaliah son of Ahikam: the soldiers, women, children, and court officials he had brought back from Gibeon.
17 ULB ಅವರು ಕಸ್ದೀಯರ ಭಯದಿಂದ ಐಗುಪ್ತಕ್ಕೆ ವಲಸೆಹೋಗಬೇಕೆಂದು ಬೇತ್ಲೆಹೇಮಿನ ಸಮೀಪವಾಗಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು. BSB BSB: And they went and stayed in Geruth Chimham, near Bethlehem, in order to proceed into Egypt
18 ULB ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇಮಿಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಕಸ್ದೀಯರಿಗೆ ಅಂಜಿದರು. BSB BSB: to escape the Chaldeans. For they were afraid of the Chaldeans because Ishmael son of Nethaniah had struck down Gedaliah son of Ahikam, whom the king of Babylon had appointed over the land.
Select verses for actions: Enter goes to them and Escape comes back.