1 ULB ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ! BSB BSB: Oh, that my head were a spring of water, and my eyes a fountain of tears! I would weep day and night over the slain daughter of my people.
2 ULB ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ. BSB BSB: If only I had a traveler’s lodge in the wilderness, I would abandon my people and depart from them, for they are all adulterers, a crowd of faithless people.
3 ULB ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ. BSB BSB: “They bend their tongues like bows; lies prevail over truth in the land. For they proceed from evil to evil, and they do not take Me into account,” declares the LORD.
4 ULB ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು. BSB BSB: “Let everyone guard against his neighbor; do not trust any brother, for every brother deals craftily, and every friend spreads slander.
5 ULB ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ. BSB BSB: Each one betrays his friend; no one tells the truth. They have taught their tongues to lie; they wear themselves out committing iniquity.
6 ULB ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ. BSB BSB: You dwell in the midst of deception; in their deceit they refuse to know Me,” declares the LORD.
7 ULB ಹೀಗಿರಲು ಸೇನಾಧೀಶ್ವರನಾದ ಯೆಹೋವನು, <<ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು. BSB BSB: Therefore this is what the LORD of Hosts says: “Behold, I will refine them and test them, for what else can I do because of the daughter of My people?
8 ULB ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ. BSB BSB: Their tongues are deadly arrows; they speak deception. With his mouth a man speaks peace to his neighbor, but in his heart he sets a trap for him.
9 ULB ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?>> ಎಂದು ನುಡಿಯುತ್ತಾನೆ. BSB BSB: Should I not punish them for these things? declares the LORD. Should I not avenge Myself on such a nation as this?”
10 ULB <<ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ. BSB BSB: I will take up a weeping and wailing for the mountains, a dirge over the wilderness pasture, for they have been scorched so no one passes through, and the lowing of cattle is not heard. Both the birds of the air and the beasts have fled; they have gone away.
11 ULB ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು>> ಎಂದು ಯೆಹೋವನು ಹೇಳಿದ್ದಾನಲ್ಲಾ. BSB BSB: “And I will make Jerusalem a heap of rubble, a haunt for jackals; and I will make the cities of Judah a desolation, without inhabitant.”
12 ULB ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು? BSB BSB: Who is the man wise enough to understand this? To whom has the mouth of the LORD spoken, that he may explain it? Why is the land destroyed and scorched like a desert, so no one can pass through it?
13 ULB ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, <<ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು. BSB BSB: And the LORD answered, “It is because they have forsaken My law, which I set before them; they have not walked in it or obeyed My voice.
14 ULB ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು. BSB BSB: Instead, they have followed the stubbornness of their hearts and gone after the Baals, as their fathers taught them.”
15 ULB ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು. BSB BSB: Therefore this is what the LORD of Hosts, the God of Israel, says: “Behold, I will feed this people wormwood and give them poisoned water to drink.
16 ULB ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು>> ಎಂದು ಹೇಳುತ್ತಾನೆ. BSB BSB: I will scatter them among the nations that neither they nor their fathers have known, and I will send a sword after them until I have finished them off.”
17 ULB ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, <<ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ. BSB BSB: This is what the LORD of Hosts says: “Take note, and summon the wailing women; send for the most skillful among them.
18 ULB ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ. BSB BSB: Let them come quickly and take up a lament over us, that our eyes may overflow with tears, and our eyelids may gush with water.
19 ULB <ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ>>> ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ. BSB BSB: For the sound of wailing is heard from Zion: ‘How devastated we are! How great is our shame! For we have abandoned the land because our dwellings have been torn down.’”
20 ULB ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ; BSB BSB: Now, O women, hear the word of the LORD. Open your ears to the word of His mouth. Teach your daughters to wail, and one another to lament.
21 ULB ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ. BSB BSB: For death has climbed in through our windows; it has entered our fortresses to cut off the children from the streets, the young men from the town squares.
22 ULB <<ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು>> ಎಂದು ನನಗೆ ಅಪ್ಪಣೆಯಾಯಿತು. BSB BSB: Declare that this is what the LORD says: “The corpses of men will fall like dung upon the open field, like newly cut grain behind the reaper, with no one to gather it.”
23 ULB ಯೆಹೋವನು ಹೀಗೆನ್ನುತ್ತಾನೆ, <<ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ. BSB BSB: This is what the LORD says: “Let not the wise man boast in his wisdom, nor the strong man in his strength, nor the wealthy man in his riches.
24 ULB ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ>> ಎಂದು ಯೆಹೋವನು ನುಡಿಯುತ್ತಾನೆ. BSB BSB: But let him who boasts boast in this, that he understands and knows Me, that I am the LORD, who exercises loving devotion, justice and righteousness on the earth—for I delight in these things,” declares the LORD.
25 ULB <<ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ. BSB BSB: “Behold, the days are coming,” declares the LORD, “when I will punish all who are circumcised only in the flesh—
26 ULB ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು>> ಎಂದು ಯೆಹೋವನು ನುಡಿಯುತ್ತಾನೆ. BSB BSB: Egypt, Judah, Edom, Ammon, Moab, and all the inhabitants of the desert who clip the hair of their temples. For all these nations are uncircumcised, and the whole house of Israel is uncircumcised in heart.”
Select verses for actions: Enter goes to them and Escape comes back.