1 ULB ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು, BSB BSB: Then Job answered:
2 ULB <<ಹೌದು, ನೀವೇ ಮನುಷ್ಯರು; ಜ್ಞಾನವು ನಿಮ್ಮೊಡನೆಯೇ ಸಾಯುವುದು, ನಿಜ. BSB BSB: “Truly then you are the people with whom wisdom itself will die!
3 ULB ನಿಮ್ಮ ಹಾಗೆ ನನಗೂ ಬುದ್ಧಿಯುಂಟು, ನಿಮಗಿಂತ ನಾನು ಕಡೆಯಲ್ಲ. ಇಂಥವು ಯಾರಿಗೆ ತಾನೇ ಗೊತ್ತಿಲ್ಲ. BSB BSB: But I also have a mind; I am not inferior to you. Who does not know such things as these?
4 ULB ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ. BSB BSB: I am a laughingstock to my friends, though I called on God, and He answered. The righteous and upright man is a laughingstock.
5 ULB ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬುದು ನೆಮ್ಮದಿಯಿಂದಿರುವವನ ಯೋಚನೆ; ಜಾರಿ ಬಿದ್ದವರಿಗೆ ಅಪಮಾನವು ಕಾದಿರುತ್ತದೆ. BSB BSB: The one at ease scorns misfortune as the fate of those whose feet are slipping.
6 ULB ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು, ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು. BSB BSB: The tents of robbers are safe, and those who provoke God are secure—those who carry their god in their hands.
7 ULB ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ ಮಾಡುವವು; ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು; BSB BSB: But ask the animals, and they will instruct you; ask the birds of the air, and they will tell you.
8 ULB ಭೂಮಿಯನ್ನು ಮಾತನಾಡಿಸು, ನಿನಗೆ ಬೋಧಿಸುವುದು; ಸಮುದ್ರದ ಮೀನುಗಳು ನಿನಗೆ ಹೇಳುವವು. BSB BSB: Or speak to the earth, and it will teach you; let the fish of the sea inform you.
9 ULB ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವುದಿಲ್ಲ? BSB BSB: Which of all these does not know that the hand of the LORD has done this?
10 ULB ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು. BSB BSB: The life of every living thing is in His hand, as well as the breath of all mankind.
11 ULB ಬಾಯಿಯು ಆಹಾರವನ್ನು ರುಚಿ ನೋಡುವ ಪ್ರಕಾರ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ. BSB BSB: Does not the ear test words as the tongue tastes its food?
12 ULB ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದಿರ್ಘಾಷ್ಯರಲ್ಲಿ ವಿವೇಕವಿದೆ. BSB BSB: Wisdom is found with the elderly, and understanding comes with long life.
13 ULB ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಆಲೋಚನೆಯೂ, ವಿವೇಕವೂ ಆತನವೇ. BSB BSB: Wisdom and strength belong to God; counsel and understanding are His.
14 ULB ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು. BSB BSB: What He tears down cannot be rebuilt; the man He imprisons cannot be released.
15 ULB ನೋಡಿರಿ, ಆತನು ನೀರುಗಳನ್ನು ತಡೆದರೆ ಬೆಳೆಗಳು, ಭೂಮಿ ಒಣಗಿಹೋಗುತ್ತದೆ; ನೀರನ್ನು ಬಿಟ್ಟರೆ ಭೂಮಿಯನ್ನು ಆವರಿಸುತ್ತದೆ. BSB BSB: If He holds back the waters, they dry up, and if He releases them, they overwhelm the land.
16 ULB ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು. BSB BSB: True wisdom and power belong to Him. The deceived and the deceiver are His.
17 ULB ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು. BSB BSB: He leads counselors away barefoot and makes fools of judges.
18 ULB ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು ಅವರ ಸೊಂಟಕ್ಕೆ ನಡುಕಟ್ಟನ್ನು ಬಿಗಿಯುವನು. BSB BSB: He loosens the bonds placed by kings and fastens a belt around their waists.
19 ULB ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು. BSB BSB: He leads priests away barefoot and overthrows the established.
20 ULB ಆಲೋಚನಾಕರ್ತರ ವಾಕ್ಚಾತುರ್ಯವನ್ನು ಕುಗ್ಗಿಸುತ್ತಾನೆ, ಹಿರಿಯರ ವಿವೇಕವನ್ನು ತೆಗೆದುಹಾಕುವನು. BSB BSB: He deprives the trusted of speech and takes away the discernment of elders.
21 ULB ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು. BSB BSB: He pours out contempt on nobles and disarms the mighty.
22 ULB ಅಗಾಧ ವಿಷಯಗಳನ್ನು ಕತ್ತಲೊಳಗಿಂದ ಬಯಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು. BSB BSB: He reveals the deep things of darkness and brings deep shadows into light.
23 ULB ಜನಾಂಗಗಳನ್ನು ವೃದ್ಧಿಗೊಳಿಸಿ ನಾಶಪಡಿಸುವನು, ಅವುಗಳನ್ನು ವಿಸ್ತರಿಸಿ ಗಡೀಪಾರುಮಾಡುವನು. BSB BSB: He makes nations great and destroys them; He enlarges nations, then disperses them.
24 ULB ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು. BSB BSB: He deprives the earth’s leaders of reason and makes them wander in a trackless wasteland.
25 ULB ಅವರು ಬೆಳಕಿಲ್ಲದ ಕತ್ತಲಲ್ಲಿ ತಡಕಾಡುವರು; ಅವರನ್ನು ಅಮಲೇರಿದವರಂತೆ ಓಲಾಡಿಸಿ ತಡವರಿಸುವಂತೆ ಮಾಡುವನು.>> BSB BSB: They grope in the darkness without light; He makes them stagger like drunkards.
Select verses for actions: Enter goes to them and Escape comes back.