1 ULB ಇಗೋ, ಇವುಗಳನ್ನೆಲ್ಲಾ ನನ್ನ ಕಣ್ಣು ಕಂಡಿದೆ, ಕಿವಿಯು ಕೇಳಿ ಗ್ರಹಿಸಿದೆ. BSB BSB: “Indeed, my eyes have seen all this; my ears have heard and understood.
2 ULB ನೀವು ತಿಳಿದಿರುವುದನ್ನು ನಾನೂ ತಿಳಿದಿದ್ದೇನೆ. ನಿಮಗಿಂತ ನಾನು ಕಡೆಯಲ್ಲ. BSB BSB: What you know, I also know; I am not inferior to you.
3 ULB ಆದರೆ ನಾನು ಸರ್ವಶಕ್ತನಾದ ದೇವರ ಸಂಗಡ ಮಾತನಾಡಬೇಕು, ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ. BSB BSB: Yet I desire to speak to the Almighty and argue my case before God.
4 ULB ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥ ವೈದ್ಯರೇ. BSB BSB: You, however, smear with lies; you are all worthless physicians.
5 ULB ನೀವು ಬಾಯಿಮುಚ್ಚಿ ಸುಮ್ಮನಾದರೆ ಎಷ್ಟೋ ಉತ್ತಮ! ಮೌನವೇ ನಿಮಗೆ ಜ್ಞಾನವು. BSB BSB: If only you would remain silent; for that would be your wisdom!
6 ULB ದಯಮಾಡಿ ನನ್ನ ಆಕ್ಷೇಪಣೆಯನ್ನು ಕೇಳಿರಿ, ನನ್ನ ತುಟಿಗಳ ವಾದಕ್ಕೆ ಕಿವಿಗೊಡಿರಿ. BSB BSB: Hear now my argument, and listen to the plea of my lips.
7 ULB ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ? BSB BSB: Will you speak wickedly on God’s behalf or speak deceitfully for Him?
8 ULB ಆತನಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? ದೇವರಿಗಾಗಿ ವಾದಿಸುವಿರಾ? BSB BSB: Would you show Him partiality or argue in His defense?
9 ULB ಆತನು ನಿಮ್ಮನ್ನು ಶೋಧಿಸಿದರೆ ನಿಮಗೆ ಒಳ್ಳೆಯದಾಗುವುದೋ? ಮನುಷ್ಯನನ್ನು ಮೋಸಗೊಳಿಸುವಂತೆ ಆತನನ್ನೂ ಮೋಸಗೊಳಿಸುವಿರೋ? BSB BSB: Would it be well when He examined you? Could you deceive Him as you would deceive a man?
10 ULB ನೀವು ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು. BSB BSB: Surely He would rebuke you if you secretly showed partiality.
11 ULB ಆತನ ಶ್ರೇಷ್ಠತೆಯು ನಿಮ್ಮನ್ನು ಹೆದರಿಸುವುದಿಲ್ಲವೋ? ಆತನ ಭಯವು ನಿಮ್ಮ ಮೇಲೆ ಬೀಳುವುದಿಲ್ಲವೋ? BSB BSB: Would His majesty not terrify you? Would the dread of Him not fall upon you?
12 ULB ನಿಮ್ಮ ಸ್ಮೃತಿಗಳು ಬೂದಿಗೆ ಸಮಾನವಾದ ಉದಾಹರಣೆ; ನಿಮ್ಮ ಕೋಟೆಯು ಬರೀ ಮಣ್ಣಿನದೇ. BSB BSB: Your maxims are proverbs of ashes; your defenses are defenses of clay.
13 ULB ಸುಮ್ಮನಿರಿ, ನನ್ನನ್ನು ಬಿಡಿರಿ, ನಾನು ಮಾತನಾಡಬೇಕು, ನನಗೇನಾದರೂ ಆಗಲಿ. BSB BSB: Be silent, and I will speak. Then let come to me what may.
14 ULB ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು. BSB BSB: Why do I put myself at risk and take my life in my own hands?
15 ULB ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು. BSB BSB: Though He slay me, I will hope in Him. I will still defend my ways to His face.
16 ULB ಭ್ರಷ್ಟನು ಆತನ ಮುಂದೆ ಬರುವುದಿಲ್ಲವೆಂಬುದೇ, ನಾನು ರಕ್ಷಣೆಯನ್ನು ಹೊಂದುವೆನೆಂಬುವುದಕ್ಕೆ ಆಧಾರವಾಗಿದೆ. BSB BSB: Moreover, this will be my salvation, for no godless man can appear before Him.
17 ULB ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ, ನನ್ನ ಅರಿಕೆಗೆ ಕಿವಿಗೊಡಿರಿ. BSB BSB: Listen carefully to my words; let my declaration ring in your ears.
18 ULB ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬುದಾಗಿ ನಿರ್ಣಯವಾಗುವುದೆಂದು ನನಗೆ ಗೊತ್ತೇ ಇದೆ. BSB BSB: See now, I have prepared my case; I know that I will be vindicated.
19 ULB ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ, ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಂಡು, ಮೌನನಾಗಿ ಪ್ರಾಣಬಿಡುವೆನು. BSB BSB: Can anyone indict me? If so, I will be silent and die.
20 ULB ಈ ನನ್ನೆರಡು ಕೋರಿಕೆಗಳನ್ನು ಈಡೇರಿಸು. ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳುವುದಿಲ್ಲ. BSB BSB: Only grant these two things to me, so that I need not hide from You:
21 ULB ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ಭಯವು ನನ್ನನ್ನು ಹೆದರಿಸದಿರಲಿ. BSB BSB: Withdraw Your hand from me, and do not let Your terror frighten me.
22 ULB ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತನಾಡುವೆ, ನೀನು ಉತ್ತರಕೊಡು. BSB BSB: Then call me, and I will answer, or let me speak, and You can reply.
23 ULB ನನ್ನ ಪಾಪದೋಷಗಳೆಷ್ಟು? ನನ್ನ ಪಾಪವನ್ನೂ, ದ್ರೋಹವನ್ನೂ ನನಗೆ ತಿಳಿಯಪಡಿಸು. BSB BSB: How many are my iniquities and sins? Reveal to me my transgression and sin.
24 ULB ಏಕೆ ನಿನ್ನ ಮುಖವನ್ನು ಮರೆಮಾಡುತ್ತಿ? ನನ್ನನ್ನು ಶತ್ರುವೆಂದೆಣಿಸಿರುವುದೇಕೆ? BSB BSB: Why do You hide Your face and consider me as Your enemy?
25 ULB ಹಾರಿಹೋಗುವ ಎಲೆಯನ್ನು ನಡುಗಿಸುವಿಯಾ? ಒಣಗಿದ ಹೊಟ್ಟನ್ನು ಅಟ್ಟಿಬಿಡುವಿಯಾ? BSB BSB: Would You frighten a windblown leaf? Would You chase after dry chaff?
26 ULB ನನ್ನ ವಿಷಯವಾಗಿ ಕಠಿಣವಾದ ತೀರ್ಪುಗಳನ್ನು ಬರೆದು, ನನ್ನ ಯೌವನದ ಪಾಪಗಳ ಬಾಧ್ಯತೆಯನ್ನು ನನಗೆ ಕೊಟ್ಟಿದ್ದಿ. BSB BSB: For You record bitter accusations against me and bequeath to me the iniquities of my youth.
27 ULB ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿದ್ದಿ; ನನ್ನ ದಾರಿಗಳನ್ನೆಲ್ಲಾ ಮನದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದಿ. BSB BSB: You put my feet in the stocks and stand watch over all my paths; You set a limit for the soles of my feet.
28 ULB ಕೊಳೆಯುವ ಪದಾರ್ಥದಂತೆಯೂ, ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ. BSB BSB: So man wastes away like something rotten, like a moth-eaten garment.
Select verses for actions: Enter goes to them and Escape comes back.