1 ULB ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು, BSB BSB: Then Eliphaz the Temanite replied:
2 ULB <<ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು, ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ? BSB BSB: “Does a wise man answer with empty counsel or fill his belly with the hot east wind?
3 ULB ಪ್ರಯೋಜನವಿಲ್ಲದ ನುಡಿಯಿಂದಲೂ, ಫಲವಿಲ್ಲದ ವಾಕ್ಯಗಳಿಂದಲೂ ತರ್ಕಿಸುವುದು ಯುಕ್ತವೋ? BSB BSB: Should he argue with useless words or speeches that serve no purpose?
4 ULB ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡುತ್ತಿರುವೆ, ನೀನು ನನ್ನನ್ನು ಪಾತಾಳಕ್ಕೆ ತಳ್ಳಿ ನನ್ನ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ. BSB BSB: But you even undermine the fear of God and hinder meditation before Him.
5 ULB ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ. BSB BSB: For your iniquity instructs your mouth, and you choose the language of the crafty.
6 ULB ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಮಾತುಗಳು ಕೂಡ ನಿನಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ, ನಿನ್ನನ್ನು ಅಪರಾಧಿಯನ್ನಾಗಿಸುತ್ತದೆ. BSB BSB: Your own mouth, not mine, condemns you; your own lips testify against you.
7 ULB ನೀನು ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚೆ ಹುಟ್ಟಿದವನೋ? BSB BSB: Were you the first man ever born? Were you brought forth before the hills?
8 ULB ದೇವರ ಆಲೋಚನಾ ಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದ್ದೀಯಾ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ? BSB BSB: Do you listen in on the council of God or limit wisdom to yourself?
9 ULB ನಮಗೆ ತಿಳಿಯದಿರುವ ಯಾವ ವಿಷಯ ಗೊತ್ತಿದೆ? ನಮ್ಮಲ್ಲಿಲ್ಲದ ಯಾವ ಸಂಗತಿಯನ್ನು ಗ್ರಹಿಸಿದ್ದೀ? BSB BSB: What do you know that we do not? What do you understand that is not clear to us?
10 ULB ತಲೆನರೆತು ನಿನ್ನ ತಂದೆಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ. BSB BSB: Both the gray-haired and the aged are on our side—men much older than your father.
11 ULB ದೇವರ ಆದರಣೆಗಳೂ, ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲುವುದಿಲ್ಲವೇ? BSB BSB: Are the consolations of God not enough for you, even words spoken gently to you?
12 ULB ನಿನ್ನ ಹೃದಯವು ಏಕೆ ನಿನ್ನನ್ನು ಸೆಳೆದುಕೊಂಡು ಹೋಗುವುದು? ನಿನ್ನ ಕಣ್ಣುಗಳು ಕಿಡಿಕಿಡಿಯಾಗುವುದೇಕೆ? BSB BSB: Why has your heart carried you away, and why do your eyes flash,
13 ULB ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ! BSB BSB: so that you turn your spirit against God and pour such words from your mouth?
14 ULB ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ? BSB BSB: What is man, that he should be pure, or one born of woman, that he should be righteous?
15 ULB ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು. BSB BSB: If God puts no trust in His holy ones, if even the heavens are not pure in His eyes,
16 ULB ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ! BSB BSB: how much less man, who is vile and corrupt, who drinks injustice like water?
17 ULB ಕೇಳು, ನಾನು ಒಂದು ಸಂಗತಿಯನ್ನು ತಿಳಿಸುವೆನು, ಕಂಡದ್ದನ್ನೇ ವಿವರಿಸುವೆನು. BSB BSB: Listen to me and I will inform you. I will describe what I have seen,
18 ULB ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ ನಾಡನ್ನು ಹಾದುಹೋಗುವಂತಿರಲಿಲ್ಲ. BSB BSB: what was declared by wise men and was not concealed from their fathers,
19 ULB ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದದನ್ನು ಮರೆಮಾಡದೆ ಪ್ರಕಟಿಸಿದ್ದಾರೆ. BSB BSB: to whom alone the land was given when no foreigner passed among them.
20 ULB ಹಿಂಸಕನಿಗೆ ಎಷ್ಟು ವರ್ಷಗಳು ನೇಮಕವಾಗಿವೆಯೋ, ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು. BSB BSB: A wicked man writhes in pain all his days; only a few years are reserved for the ruthless.
21 ULB ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು. BSB BSB: Sounds of terror fill his ears; in his prosperity the destroyer attacks him.
22 ULB ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ. BSB BSB: He despairs of his return from darkness; he is marked for the sword.
23 ULB <ರೊಟ್ಟಿ ಎಲ್ಲಿ?> ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು. BSB BSB: He wanders about as food for vultures; he knows the day of darkness is at hand.
24 ULB ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು. BSB BSB: Distress and anguish terrify him, overwhelming him like a king poised to attack.
25 ULB ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಾದ ದೇವರ ಎದುರು ನಿಂತು ಶೂರನಂತೆ ಮೆರೆದನಲ್ಲಾ. BSB BSB: For he has stretched out his hand against God and has vaunted himself against the Almighty,
26 ULB ದೊಡ್ಡ ಬಲವುಳ್ಳ ಗುರಾಣಿಯನ್ನು ಹಿಡಿದು ತಲೆ ನಿಮಿರಿಸಿ ಆತನ ಮೇಲೆ ಬೀಳಬೇಕೆಂದು ಓಡಿದನು. BSB BSB: rushing headlong at Him with a thick, studded shield.
27 ULB ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದನು. BSB BSB: Though his face is covered with fat and his waistline bulges with flesh,
28 ULB ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು, <ದಿಬ್ಬಗಳಾಗಿ ಹೋಗಲಿ ಯಾರೂ ವಾಸಿಸದಿರಲಿ> ಎಂದು ಶಾಪಹೊಂದಿದ ಮನೆಗಳೊಳಗೆ ವಾಸವಾಗಿದ್ದನು. BSB BSB: he will dwell in ruined cities, in abandoned houses destined to become rubble.
29 ULB ಇಂಥವನು ಐಶ್ವರ್ಯವಂತನಾಗುವುದಿಲ್ಲ, ಅವನ ಆಸ್ತಿಯು ಸ್ಥಿರವಾಗಿ ನಿಲ್ಲದು. ಅವನ ಪ್ರತಿ ಫಲವು ಭಾರದಿಂದ ಭೂಮಿಯ ಕಡೆಗೆ ಬಾಗುವುದಿಲ್ಲ. BSB BSB: He will no longer be rich; his wealth will not endure. His possessions will not overspread the land.
30 ULB ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು. BSB BSB: He will not escape from the darkness; the flame will wither his shoots, and the breath of God’s mouth will carry him away.
31 ULB ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ, BSB BSB: Let him not deceive himself with trust in emptiness, for emptiness will be his reward.
32 ULB ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು. ಅವನ ಕೊಂಬೆಯು ಹಸುರಾಗಿರುವುದಿಲ್ಲ, BSB BSB: It will be paid in full before his time, and his branch will not flourish.
33 ULB ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯ ಬಳ್ಳಿಯಂತೆ ಇರುವನು, ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು. BSB BSB: He will be like a vine stripped of its unripe grapes, like an olive tree that sheds its blossoms.
34 ULB ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು. BSB BSB: For the company of the godless will be barren, and fire will consume the tents of bribery.
35 ULB ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.>> BSB BSB: They conceive trouble and give birth to evil; their womb is pregnant with deceit.”
Select verses for actions: Enter goes to them and Escape comes back.