1 ULB ಆಗ ಶೂಹ್ಯನಾದ ಬಿಲ್ದದನು ಪ್ರತ್ಯುತ್ತರವಾಗಿ ಹೀಗೆಂದನು, BSB BSB: Then Bildad the Shuhite replied:
2 ULB <<ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ? ಮೊದಲು ನೀನು ಆಲೋಚಿಸು, ಆ ಮೇಲೆ ಮಾತನಾಡೋಣ. BSB BSB: “How long until you end these speeches? Show some sense, and then we can talk.
3 ULB ಏಕೆ ನಮ್ಮನ್ನು ಮೃಗಗಳೆಂದು ಎಣಿಸಿದ್ದೀ? ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ? BSB BSB: Why are we regarded as cattle, as stupid in your sight?
4 ULB ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, ನಿನಗಾಗಿ ಲೋಕವೇ ಹಾಳಾಗಬೇಕೋ, ಬಂಡೆಯು ತನ್ನ ಸ್ಥಳದಿಂದ ಜರುಗಬೇಕೋ? BSB BSB: You who tear yourself in anger—should the earth be forsaken on your account, or the rocks be moved from their place?
5 ULB ಹೇಗಾದರೂ ದುಷ್ಟನ ದೀಪವು ಆರುವುದು, ಅವನ ಒಲೆಯು ಉರಿಯುವುದಿಲ್ಲ. BSB BSB: Indeed, the lamp of the wicked is extinguished; the flame of his fire does not glow.
6 ULB ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು, ಅವನ ಮೇಲಣ ತೂಗು ದೀವಿಗೆಯು ನಂದಿಹೋಗುವುದು. BSB BSB: The light in his tent grows dark, and the lamp beside him goes out.
7 ULB ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವುದು. BSB BSB: His vigorous stride is shortened, and his own schemes trip him up.
8 ULB ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು. BSB BSB: For his own feet lead him into a net, and he wanders into its mesh.
9 ULB ಬಲೆ ಅವನ ಹಿಮ್ಮಡಿಯನ್ನು ಸಿಕ್ಕಿಸಿ ಕಚ್ಚುವುದು, ಉರುಲು ಅವನನ್ನು ಹಿಡಿಯುವುದು. BSB BSB: A trap seizes his heel; a snare grips him.
10 ULB ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗಾಗಿ ಹೊಂಚಿಕೊಂಡಿರುವವು. BSB BSB: A noose is hidden in the ground, and a trap lies in his path.
11 ULB ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು. BSB BSB: Terrors frighten him on every side and harass his every step.
12 ULB ಅವನ ಬಲವು ಕುಂದಿಹೋಗುವುದು. ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವುದು. BSB BSB: His strength is depleted, and calamity is ready at his side.
13 ULB ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು, ಅವನ ಅಂಗಗಳನ್ನು ನುಂಗಿಬಿಡುವನು. BSB BSB: It devours patches of his skin; the firstborn of death devours his limbs.
14 ULB ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು, ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು. BSB BSB: He is torn from the shelter of his tent and is marched off to the king of terrors.
15 ULB ಅವನ ಸಂಬಂಧಿಕರಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವುದು. BSB BSB: Fire resides in his tent; burning sulfur rains down on his dwelling.
16 ULB ಅವನ ವಂಶವೃಕ್ಷದ ಬೇರುಗಳು ಒಣಗುವುದು, ಅದರ ರೆಂಬೆಯು ಮೇಲೆ ಬಾಡುವುದು. BSB BSB: The roots beneath him dry up, and the branches above him wither away.
17 ULB ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ. BSB BSB: The memory of him perishes from the earth, and he has no name in the land.
18 ULB ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು. BSB BSB: He is driven from light into darkness and is chased from the inhabited world.
19 ULB ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ. BSB BSB: He has no offspring or posterity among his people, no survivor where he once lived.
20 ULB ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು, ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು. BSB BSB: Those in the west are appalled at his fate, while those in the east tremble in horror.
21 ULB ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.>> BSB BSB: Surely such is the dwelling of the wicked and the place of one who does not know God.”
Select verses for actions: Enter goes to them and Escape comes back.