1 ULB ಆಗ ಯೋಬನು ಪುನಃ ಇಂತೆಂದನು, BSB BSB: Then Job answered:
2 ULB <<ಎಷ್ಟರವರೆಗೆ ನನ್ನ ಆತ್ಮವನ್ನು ನೋಯಿಸಿ, ಮಾತುಗಳಿಂದ ನನ್ನನ್ನು ಜಜ್ಜುತ್ತಿರುವಿರಿ? BSB BSB: “How long will you torment me and crush me with your words?
3 ULB ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ. BSB BSB: Ten times now you have reproached me; you shamelessly mistreat me.
4 ULB ನಾನು ನಿಜವಾಗಿ ತಪ್ಪುಮಾಡಿದ್ದರೆ ಆ ತಪ್ಪು ನನ್ನದೇ. BSB BSB: Even if I have truly gone astray, my error concerns me alone.
5 ULB ನನ್ನ ವಿರುದ್ಧವಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಂಡು ನನಗಾದ ಅವಮಾನವನ್ನು ನ್ಯಾಯವೆಂದು ಸ್ಥಾಪಿಸುವುದಕ್ಕೆ ನಿಜವಾಗಿ ಇಷ್ಟಪಡುವಿರೋ? BSB BSB: If indeed you would exalt yourselves above me and use my disgrace against me,
6 ULB ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ. BSB BSB: then understand that it is God who has wronged me and drawn His net around me.
7 ULB ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ, ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ, ನ್ಯಾಯವು ನೆರವೇರದು. BSB BSB: Though I cry out, ‘Violence!’ I get no response; though I call for help, there is no justice.
8 ULB ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ, ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾನೆ. BSB BSB: He has blocked my way so I cannot pass; He has veiled my paths with darkness.
9 ULB ನನ್ನ ಘನತೆಯನ್ನು ಸುಲಿದುಬಿಟ್ಟು, ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾನೆ. BSB BSB: He has stripped me of my honor and removed the crown from my head.
10 ULB ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ. BSB BSB: He tears me down on every side until I am gone; He uproots my hope like a tree.
11 ULB ನನ್ನ ಮೇಲೆ ತನ್ನ ಕೋಪಾಗ್ನಿಯನ್ನು ಧಗಧಗಿಸಿ; ಉರಿಯುವಂತೆ ಮಾಡಿ ನನ್ನನ್ನು ವೈರಿಯೆಂದೆಣಿಸಿದ್ದಾನೆ. BSB BSB: His anger burns against me, and He counts me among His enemies.
12 ULB ಆತನ ದಂಡುಗಳು ಒಟ್ಟಿಗೆ ಮುಂದುವರೆದು ನನ್ನ ವಿರುದ್ಧವಾಗಿ ದಿಬ್ಬಹಾಕಿ, ನನ್ನ ಗುಡಾರದ ಸುತ್ತಲೂ ಇಳಿದಿವೆ. BSB BSB: His troops advance together; they construct a ramp against me and encamp around my tent.
13 ULB ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ. BSB BSB: He has removed my brothers from me; my acquaintances have abandoned me.
14 ULB ನನ್ನ ಬಂಧುಗಳು ನನ್ನನ್ನು ಬಿಟ್ಟುಬಿಟ್ಟಿದ್ದಾರೆ, ನನಗೆ ಪರಿಚಯವಿದ್ದವರು ನನ್ನನ್ನು ಮರೆತಿದ್ದಾರೆ. BSB BSB: My kinsmen have failed me, and my friends have forgotten me.
15 ULB ನನ್ನ ಪರಿಜನರೂ, ದಾಸಿಯರೂ ನನ್ನನ್ನು ಅನ್ಯನೆಂದೆಣಿಸುತ್ತಾರೆ, ಅವರ ದೃಷ್ಟಿಗೆ ಪರದೇಶಿಯಾಗಿದ್ದಾನೆ. BSB BSB: My guests and maidservants count me as a stranger; I am a foreigner in their sight.
16 ULB ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವುದಿಲ್ಲ, ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು. BSB BSB: I call for my servant, but he does not answer, though I implore him with my own mouth.
17 ULB ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಒಡಹುಟ್ಟಿದವರಿಗೂ ಹೇಸಿಕೆಯಾಗಿದ್ದೇನೆ. BSB BSB: My breath is repulsive to my wife, and I am loathsome to my own family.
18 ULB ಚಿಕ್ಕವರೂ ಕೂಡ ನನ್ನನ್ನು ಹೀನೈಸುತ್ತಾರೆ, ನಾನು ಏಳಲು ಪ್ರಯಾಸಪಡುತ್ತಿರುವಾಗ ಅವರ ಹರಟೆಗೆ ಗುರಿಯಾಗುತ್ತೇನೆ. BSB BSB: Even little boys scorn me; when I appear, they deride me.
19 ULB ನನ್ನ ಆಪ್ತಮಿತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ. BSB BSB: All my best friends despise me, and those I love have turned against me.
20 ULB ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ. BSB BSB: My skin and flesh cling to my bones; I have escaped by the skin of my teeth.
21 ULB ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ. BSB BSB: Have pity on me, my friends, have pity, for the hand of God has struck me.
22 ULB ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ಹಿಂಸಿಸಿ ನಿಮಗೆ ಸಾಕಾಗಲಿಲ್ಲವೋ? BSB BSB: Why do you persecute me as God does? Will you never get enough of my flesh?
23 ULB ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು! ಪುಸ್ತಕದಲ್ಲಿ ದಾಖಲಿಸಿದರೆ ಎಷ್ಟೋ ಒಳ್ಳೆಯದು! BSB BSB: I wish that my words were recorded and inscribed in a book,
24 ULB ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸ ಎರೆದು, ಶಾಶ್ವತ ಶಾಸನವಾಗಿ ಮಾಡಿದರೆ ನನಗೆ ಎಷ್ಟೋ ಉಪಕಾರ! BSB BSB: by an iron stylus on lead, or chiseled in stone forever.
25 ULB ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು. BSB BSB: But I know that my Redeemer lives, and in the end He will stand upon the earth.
26 ULB ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು. BSB BSB: Even after my skin has been destroyed, yet in my flesh I will see God.
27 ULB ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ. BSB BSB: I will see Him for myself; my eyes will behold Him, and not as a stranger. How my heart yearns within me!
28 ULB ಅವನಿಗೆ, <ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ> ಎಂದು ನೀವು ಆಡಿಕೊಂಡ ಕಾರಣ, BSB BSB: If you say, ‘Let us persecute him, since the root of the matter lies with him,’
29 ULB ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.>> BSB BSB: then you should fear the sword yourselves, because wrath brings punishment by the sword, so that you may know there is a judgment.”
Select verses for actions: Enter goes to them and Escape comes back.