1 ULB ಆಗ ಯೋಬನು ಇಂತೆಂದನು, BSB BSB: Then Job answered:
2 ULB <<ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ. ನಿಮ್ಮಿಂದ ನನಗಾಗಬೇಕಾದ ಆದರಣೆಯು ಇಷ್ಟೇ. BSB BSB: “Listen carefully to my words; let this be your consolation to me.
3 ULB ತಾಳ್ಮೆಯಿಂದಿರಿ, ನಾನೂ ಮಾತನಾಡುವೆನು, ಆಮೇಲೆ ಹಾಸ್ಯಮಾಡಿದರೂ ಮಾಡಿರಿ. BSB BSB: Bear with me while I speak; then, after I have spoken, you may go on mocking.
4 ULB ನಾನೇನು ಮನುಷ್ಯನ ವಿಷಯದಲ್ಲಿ ಗುಣುಗುಟ್ಟುತ್ತಿರುವೆನೆ? ನಾನೇಕೆ ಬೇಸರಗೊಳ್ಳಬಾರದು? BSB BSB: Is my complaint against a man? Then why should I not be impatient?
5 ULB ನನ್ನ ಕಡೆಗೆ ಗಮನಿಸಿ, ನಿಮ್ಮ ಬಾಯಿಯ ಮೇಲೆ ಕೈಯಿಟ್ಟು ಬೆರಗಾಗಿ, BSB BSB: Look at me and be appalled; put your hand over your mouth.
6 ULB ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ, ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ. BSB BSB: When I remember, terror takes hold, and my body trembles in horror.
7 ULB ದುಷ್ಟರು ಬಾಳಿ ವೃದ್ಧರಾಗುವುದಕ್ಕೂ, ಬಲಿಷ್ಠರಾಗಿ ಪ್ರಬಲಿಸುವುದಕ್ಕೂ ಕಾರಣವೇನು? BSB BSB: Why do the wicked live on, growing old and increasing in power?
8 ULB ಅವರ ಸಂತಾನದವರು ಅವರೊಂದಿಗಿರುತ್ತಾ ಅವರ ಮುಂದೆಯೇ ಸುಸ್ಥಿರವಾಗಿರುವರು, ಅವರ ಮಕ್ಕಳು ಅವರ ಕಣ್ಣೆದುರಿನಲ್ಲಿ ಅಚಲವಾಗಿ ನಿಲ್ಲುವರು. BSB BSB: Their descendants are established around them, and their offspring before their eyes.
9 ULB ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದ ಇರುವವು; ದೇವರ ದಂಡವು ಅವರ ಮೇಲೆ ಬೀಳದು. BSB BSB: Their homes are safe from fear; no rod of punishment from God is upon them.
10 ULB ಅವರ ಗೂಳಿಯು ಬೇಸರಗೊಳ್ಳದೆ ಸಂತತಿಯನ್ನು ಹುಟ್ಟಿಸುತ್ತದೆ; ಅವರ ಹಸುವು ಕಂದುಹಾಕದೆ ಈಯುವುದು. BSB BSB: Their bulls breed without fail; their cows bear calves and do not miscarry.
11 ULB ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು, ಅವರ ಮಕ್ಕಳು ಕುಣಿದಾಡುವರು. BSB BSB: They send forth their little ones like a flock; their children skip about,
12 ULB ಅವರು ದಮ್ಮಡಿ ಕಿನ್ನರಿಗಳೊಡನೆ ಸ್ವರವೆತ್ತಿ, ಕೊಳಲಿನ ಧ್ವನಿಗೆ ಉಲ್ಲಾಸಪಡುವರು. BSB BSB: singing to the tambourine and lyre and making merry at the sound of the flute.
13 ULB ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು. BSB BSB: They spend their days in prosperity and go down to Sheol in peace.
14 ULB ಆದರೆ ಇವರೇ ದೇವರನ್ನು ಕುರಿತು, <ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ BSB BSB: Yet they say to God: ‘Leave us alone! For we have no desire to know Your ways.
15 ULB ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?> ಎಂದೂ ಹೇಳುತ್ತಿದ್ದರು. BSB BSB: Who is the Almighty, that we should serve Him, and what would we gain if we pray to Him?’
16 ULB ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವುದಿಲ್ಲ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ! BSB BSB: Still, their prosperity is not in their own hands, so I stay far from the counsel of the wicked.
17 ULB ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಾರಿ? BSB BSB: How often is the lamp of the wicked put out? Does disaster come upon them? Does God, in His anger, apportion destruction?
18 ULB ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸಾರಿ? ಎಷ್ಟು ಸಾರಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು? BSB BSB: Are they like straw before the wind, like chaff swept away by a storm?
19 ULB <ದೇವರು ದುಷ್ಟನ ಪಾಪ ಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ> ಎನ್ನುತ್ತೀರೋ, ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೆ ಕೊಟ್ಟುಬಿಡಲಿ. BSB BSB: It is said that God lays up one’s punishment for his children. Let God repay the man himself, so he will know it.
20 ULB ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ. BSB BSB: Let his eyes see his own destruction; let him drink for himself the wrath of the Almighty.
21 ULB ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು? BSB BSB: For what does he care about his household after him, when the number of his months has run out?
22 ULB ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ? BSB BSB: Can anyone teach knowledge to God, since He judges those on high?
23 ULB ಒಬ್ಬನು ಸಮೃದ್ಧನಾಗಿ, ತುಂಬಾ ಸುಖದಿಂದಲೂ, ನೆಮ್ಮದಿಯಿಂದಲೂ ಇರುವಾಗ ಸಾಯುವನು. BSB BSB: One man dies full of vigor, completely secure and at ease.
24 ULB ಅವನ ತೊಟ್ಟಿಗಳಲ್ಲಿ ಹಾಲು ತುಂಬಿರುವುದು, ಅವನ ಎಲಬುಗಳು ಮಜ್ಜೆಯಿಂದ ಸಾರವಾಗಿರುವುದು. BSB BSB: His body is well nourished, and his bones are rich with marrow.
25 ULB ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ, ಮನೋವ್ಯಥೆಪಡುತ್ತಾ ಸಾಯುವನು. BSB BSB: Yet another man dies in the bitterness of his soul, having never tasted prosperity.
26 ULB ಇಬ್ಬರೂ ಧೂಳಿನಲ್ಲಿ ಮಲಗುವರು, ಹುಳುಗಳು ಅವರನ್ನು ಮುತ್ತಿಕೊಳ್ಳುವವು. BSB BSB: But together they lie down in the dust, and worms cover them both.
27 ULB ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ, ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ತಿಳಿದುಕೊಂಡಿದ್ದೇನೆ. BSB BSB: Behold, I know your thoughts full well, the schemes by which you would wrong me.
28 ULB <ಪ್ರಧಾನನ ಮನೆ ಏನಾಯಿತು? ದುಷ್ಟರು ವಾಸಿಸಿದ ಗುಡಾರವೆಲ್ಲಿ?> ಎನ್ನುತ್ತೀರಷ್ಟೆ. BSB BSB: For you say, ‘Where now is the nobleman’s house, and where are the tents in which the wicked dwell?’
29 ULB ನೀವು ಮಾರ್ಗಸ್ಥರನ್ನು ವಿಚಾರಿಸಲಿಲ್ಲವೋ? ಅವರು ಕೊಟ್ಟ ದೃಷ್ಟಾಂತಗಳಿಂದ, BSB BSB: Have you never asked those who travel the roads? Do you not accept their reports?
30 ULB ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ? BSB BSB: Indeed, the evil man is spared from the day of calamity, delivered from the day of wrath.
31 ULB ನೀನು ದುರ್ಮಾರ್ಗಿ ಎಂದು ಅವನಿಗೆ ಮುಖಾಮುಖಿಯಾಗಿ ಯಾರು ತಾನೇ ಹೇಳುವರು? ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರು ಯಾರು? BSB BSB: Who denounces his behavior to his face? Who repays him for what he has done?
32 ULB ಅವನನ್ನು ಮೆರವಣಿಗೆಯಿಂದ ಸಮಾಧಿಗೆ ತೆಗೆದುಕೊಂಡು ಹೋಗುವರು; ಅವನ ಗೋರಿಗೆ ಕಾವಲಿಡುವರು. BSB BSB: He is carried to the grave, and watch is kept over his tomb.
33 ULB ಆ ಕಣಿವೆಯ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು. BSB BSB: The clods of the valley are sweet to him; everyone follows behind him, and those before him are without number.
34 ULB ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ! ನಿಮ್ಮ ಉತ್ತರಗಳಲ್ಲಿ ಉಳಿದಿರುವುದು ಮಿತ್ರ ದ್ರೋಹವೇ.>> BSB BSB: So how can you comfort me with empty words? For your answers remain full of falsehood.”
Select verses for actions: Enter goes to them and Escape comes back.