1 ULB ಆ ಮೇಲೆ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು, BSB BSB: Then Eliphaz the Temanite replied:
2 ULB <<ಮನುಷ್ಯ ಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೆ ಪ್ರಯೋಜನವಷ್ಟೆ. BSB BSB: “Can a man be of use to God? Can even a wise man benefit Him?
3 ULB ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ? BSB BSB: Does it delight the Almighty that you are righteous? Does He profit if your ways are blameless?
4 ULB ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ? BSB BSB: Is it for your reverence that He rebukes you and enters into judgment against you?
5 ULB ನಿನ್ನ ಕೆಟ್ಟತನವು ಬಹಳವಲ್ಲವೇ? ನಿನ್ನ ಪಾಪಗಳಿಗೆ ಮಿತಿಯೇ ಇಲ್ಲವಲ್ಲಾ? BSB BSB: Is not your wickedness great? Are not your iniquities endless?
6 ULB ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಯಾಳುಗಳನ್ನು ತೆಗೆದುಕೊಂಡಿದ್ದಿ, ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದಿ. BSB BSB: For you needlessly demanded security from your brothers and deprived the naked of their clothing.
7 ULB ಬಳಲಿದವನಿಗೆ ನೀರು ಕೊಡದೆ, ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ. BSB BSB: You gave no water to the weary and withheld food from the famished,
8 ULB ಬಲಿಷ್ಠನಾದರೆ ದೇಶವೇ ಅವನದು, ಅಲ್ಲಿ ಸನ್ಮಾನ ಯೋಗ್ಯನಾಗಿ ವಾಸಿಸತಕ್ಕವನು ಅವನೇ. BSB BSB: while the land belonged to a mighty man, and a man of honor lived on it.
9 ULB ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದಿ. BSB BSB: You sent widows away empty-handed, and the strength of the fatherless was crushed.
10 ULB ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ, ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ. BSB BSB: Therefore snares surround you, and sudden peril terrifies you;
11 ULB ಇದಲ್ಲದೆ ದಾರಿಕಾಣದಂತೆ ಕತ್ತಲೂ, ಮುಸುಕಿ ಜಲಪ್ರವಾಹವೂ ನಿನ್ನನ್ನು ಆವರಿಸುತ್ತವೆ. BSB BSB: it is so dark you cannot see, and a flood of water covers you.
12 ULB ದೇವರು ಉನ್ನತ ಆಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು! BSB BSB: Is not God as high as the heavens? Look at the highest stars, how lofty they are!
13 ULB ನೀನಾದರೋ, <ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ? BSB BSB: Yet you say: ‘What does God know? Does He judge through thick darkness?
14 ULB ದಟ್ಟವಾದ ಮೋಡಗಳು ಆತನಿಗೆ ಪರದೆಯ ಹಾಗಿರುವುದರಿಂದ ನೋಡಲಾರನು; ಆಕಾಶಮಂಡಲದ ಮೇಲೆ ನಡೆದಾಡುತ್ತಾನೆ> ಎಂದು ಹೇಳಿಕೊಂಡೆಯಲ್ಲವೇ. BSB BSB: Thick clouds veil Him so He does not see us as He traverses the vault of heaven.’
15 ULB ಕೆಟ್ಟವರು ಮೊದಲಿನಿಂದಲೂ, ನಡೆದ ದಾರಿಯನ್ನು ನೀನು ಹಿಡಿಯುವಿಯಾ? BSB BSB: Will you stay on the ancient path that wicked men have trod?
16 ULB ಅಕಾಲ ಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು. BSB BSB: They were snatched away before their time, and their foundations were swept away by a flood.
17 ULB ಅವರು ಆತನನ್ನು ಕುರಿತು, <ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು> ಎಂದು ಹೇಳಿಕೊಳ್ಳುತ್ತಿದ್ದರು. BSB BSB: They said to God, ‘Depart from us. What can the Almighty do to us?’
18 ULB ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ! BSB BSB: But it was He who filled their houses with good things; so I stay far from the counsel of the wicked.
19 ULB ನೀತಿವಂತರು ಇದನ್ನು ನೋಡಿ ಹಿಗ್ಗುವರು, ನಮ್ಮ ವಿರುದ್ಧವಾಗಿ ಎದ್ದವರು ಹಾಳಾಗಿಯೇ ಹೋದರು. BSB BSB: The righteous see it and are glad; the innocent mock them:
20 ULB <ಅವರ ಉಳಿದ ಸೊತ್ತನ್ನು ಬೆಂಕಿಯು ನಾಶಮಾಡಿತು> ಎಂದು, ನಿರ್ದೋಷಿಗಳು ದುಷ್ಟರನ್ನು ಅಣಕಿಸುವರು. BSB BSB: ‘Surely our foes are destroyed, and fire has consumed their excess.’
21 ULB ದೇವರ ಚಿತ್ತಕ್ಕೆ ಒಳಪಟ್ಟು ಸಮಾಧಾನ ಹೊಂದು, ಇದರಿಂದ ನಿನಗೆ ಶುಭವಾಗುವುದು. BSB BSB: Reconcile now and be at peace with Him; thereby good will come to you.
22 ULB ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ, ಆತನ ಮಾತುಗಳನ್ನು ಹೃದಯದಲ್ಲಿ ಇಟ್ಟುಕೋ. BSB BSB: Receive instruction from His mouth, and lay up His words in your heart.
23 ULB ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ. BSB BSB: If you return to the Almighty, you will be restored. If you remove injustice from your tents
24 ULB ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು. BSB BSB: and consign your gold to the dust and the gold of Ophir to the stones of the ravines,
25 ULB ಸರ್ವಶಕ್ತನಾದ ದೇವರು ನಿನಗೆ ಚಿನ್ನವಾಗಿಯೂ, ಬೆಳ್ಳಿಯ ರಾಶಿಗಳಾಗಿಯೂ ಇರುವನು. BSB BSB: then the Almighty will be your gold and the finest silver for you.
26 ULB ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ದೇವರ ಅಭಿಮುಖನಾಗಿರುವೆ. BSB BSB: Surely then you will delight in the Almighty and lift up your face to God.
27 ULB ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ. BSB BSB: You will pray to Him, and He will hear you, and you will fulfill your vows.
28 ULB ಯಾವುದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವುದು, ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು. BSB BSB: Your decisions will be carried out, and light will shine on your ways.
29 ULB ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು. BSB BSB: When men are brought low and you say, ‘Lift them up!’ then He will save the lowly.
30 ULB ನಿರ್ದೋಷಿಯನ್ನು ಆತನು ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವುದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವುದು.>> BSB BSB: He will deliver even one who is not innocent, rescuing him through the cleanness of your hands.”
Select verses for actions: Enter goes to them and Escape comes back.