1 ULB <<ಸರ್ವಶಕ್ತನಾದ ದೇವರು ಏಕೆ ದುಷ್ಟರಿಗೆ ದಂಡನೆಯ ಕಾಲಗಳನ್ನು ನೇಮಿಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ನ್ಯಾಯತೀರ್ಪಿನ ದಿನಗಳು ಏಕೆ ಗೋಚರವಾಗುವುದಿಲ್ಲ? BSB BSB: “Why does the Almighty not reserve times for judgment? Why may those who know Him never see His days?
2 ULB ಮೇರೆಗಳನ್ನು ದಾಟಿ ಆಶ್ರಯಿಸಿಕೊಳ್ಳುವವರು ಇದ್ದಾರೆ. ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ. BSB BSB: Men move boundary stones; they pasture stolen flocks.
3 ULB ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ. BSB BSB: They drive away the donkey of the fatherless and take the widow’s ox in pledge.
4 ULB ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ. BSB BSB: They push the needy off the road and force all the poor of the land into hiding.
5 ULB ಇಗೋ, ಅಡವಿಯಲ್ಲಿ ಕಾಡುಕತ್ತೆಗಳು ಹೇಗೋ ಹಾಗೆಯೇ, ಇವರು ತಮ್ಮ ಹೊಟ್ಟೇ ಪಾಡಿಗಾಗಿ ಹೊರಟು ಆಹಾರವನ್ನು ಆತುರವಾಗಿ ಹುಡುಕುವರು; ಅರಣ್ಯವೇ ಇವರ ಮಕ್ಕಳಿಗಾಗಿ ಆಹಾರವನ್ನು ಒದಗಿಸುವುದು. BSB BSB: Indeed, like wild donkeys in the desert, the poor go to work foraging for food; the wasteland is food for their children.
6 ULB ತಮ್ಮ ಹೊಟ್ಟೆಗಾಗಿ ಬಯಲಿನಲ್ಲಿ ಸೊಪ್ಪನ್ನು ಕೊಯ್ದುಕೊಳ್ಳುವರು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುವರು. BSB BSB: They gather fodder in the fields and glean the vineyards of the wicked.
7 ULB ಹೊದಿಕೆ ಇಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ. BSB BSB: Without clothing, they spend the night naked; they have no covering against the cold.
8 ULB ಮಲೆನಾಡಿನ ದೊಡ್ಡ ಮಳೆಯಿಂದ ನೆನೆದುಹೋಗಿ, ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುವರು. BSB BSB: Drenched by mountain rains, they huddle against the rocks for want of shelter.
9 ULB ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ. BSB BSB: The fatherless infant is snatched from the breast; the nursing child of the poor is seized for a debt.
10 ULB ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವಿನಿಂದಲೇ ಸಿವುಡುಗಳನ್ನು ಹೊರುವರು. BSB BSB: Without clothing, they wander about naked. They carry the sheaves, but still go hungry.
11 ULB ಯಜಮಾನರ ಪೌಳಿಗೋಡೆಗಳೊಳಗೇ ಇದ್ದುಕೊಂಡು ಎಣ್ಣೆಗಾಣವನ್ನು ತಿರುಗಿಸುವರು; ದಾಹಗೊಂಡೇ ಅವರ ತೊಟ್ಟಿಗಳಲ್ಲಿ ದ್ರಾಕ್ಷಿಯನ್ನು ತುಳಿಯುವರು. BSB BSB: They crush olives within their walls; they tread the winepresses, but go thirsty.
12 ULB ತುಂಬಿದ ಪಟ್ಟಣದೊಳಗಿಂದ ಜನರು ನರಳುವರು, ಗಾಯಪಟ್ಟವರು ಮೊರೆಯಿಡುವರು, ಆದರೆ ದೇವರಾದರೋ ಅವರ ಮೊರೆಗೆ ಕಿವಿಗೊಡನು. BSB BSB: From the city, men groan, and the souls of the wounded cry out, yet God charges no one with wrongdoing.
13 ULB ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, ಅದರ ಹಾದಿಗಳಲ್ಲಿ ಇರುವುದಿಲ್ಲ. BSB BSB: Then there are those who rebel against the light, not knowing its ways or staying on its paths.
14 ULB ಕೊಲೆಪಾತಕನು ಮುಂಜಾನೆ ಎದ್ದು, ದಿಕ್ಕಿಲ್ಲದ ಬಡವರನ್ನು ಕೊಂದು, ರಾತ್ರಿಯಲ್ಲಿ ಕಳ್ಳನಂತಿರುವನು. BSB BSB: When daylight is gone, the murderer rises to kill the poor and needy; in the night he is like a thief.
15 ULB ಜಾರನು ತಾನು, ಯಾರ ಕಣ್ಣಿಗೂ ಬೀಳಬಾರದು ಎಂದು, ಸಂಜೆಯನ್ನು ಎದುರು ನೋಡುತ್ತಿದ್ದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು. BSB BSB: The eye of the adulterer watches for twilight. Thinking, ‘No eye will see me,’ he covers his face.
16 ULB ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ; ಹಗಲಿನಲ್ಲಿ ಅಡಗಿಕೊಂಡಿದ್ದು; ಬೆಳಕನ್ನು ತಿಳಿಯದೆ ಇರುವರು. BSB BSB: In the dark they dig through houses; by day they shut themselves in, never to experience the light.
17 ULB ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ. BSB BSB: For to them, deep darkness is their morning; surely they are friends with the terrors of darkness!
18 ULB (ನೀವು ಹೇಳುವುದೇನೆಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವುದು. ದ್ರಾಕ್ಷಿತೋಟಗಳ ಕಡೆಗೆ ತಿರುಗಲಾರನು. BSB BSB: They are but foam on the surface of the water; their portion of the land is cursed, so that no one turns toward their vineyards.
19 ULB ಬರಗಾಲವೂ, ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ, ಪಾತಾಳವು ಪಾಪಿಗಳನ್ನು ಎಳೆದುಕೊಳ್ಳುವುದು. BSB BSB: As drought and heat consume the melting snow, so Sheol steals those who have sinned.
20 ULB ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವುದು; ಹುಳವು ಅವನ ಹೆಣವನ್ನು ಸವಿದು ತಿನ್ನುವುದು; ಇನ್ನು ಮೇಲೆ ಯಾರಿಗೂ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವುದು. BSB BSB: The womb forgets them; the worm feeds on them; they are remembered no more. So injustice is broken like a tree.
21 ULB ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ). BSB BSB: They prey on the barren and childless, and show no kindness to the widow.
22 ULB ದೇವರಂತು ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ, ಅವರು ತಮ್ಮ ಜೀವವು ಇನ್ನು ಉಳಿಯುವುದಿಲ್ಲವೆಂದು ನಂಬಿದ್ದರೂ ಉದ್ಧಾರವಾಗುವರು. BSB BSB: Yet by His power, God drags away the mighty; though rising up, they have no assurance of life.
23 ULB ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು. BSB BSB: He gives them a sense of security, but His eyes are on their ways.
24 ULB ಅವರು ಉನ್ನತಿಗೆ ಬರುವರು; ಸ್ವಲ್ಪ ಕಾಲದ ಮೇಲೆ ಅವರು ಎಲ್ಲಿಯೋ? ಸರ್ವ ಮನುಷ್ಯರೊಂದಿಗೆ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಕೆಳಕ್ಕೆ ಬಿದ್ದು ಕೂಡಿಸಲ್ಪಡುವರು. BSB BSB: They are exalted for a moment, then they are gone; they are brought low and gathered up like all others; they are cut off like heads of grain.
25 ULB ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ; ನಿಮ್ಮಲ್ಲಿ ಯಾರು ಸ್ಥಾಪಿಸಬಲ್ಲರು?.>> BSB BSB: If this is not so, then who can prove me a liar and reduce my words to nothing?”
Select verses for actions: Enter goes to them and Escape comes back.