1 ULB <<ಬೆಳ್ಳಿ ಸಿಕ್ಕುವ ಗಣಿಯೂ, ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ. BSB BSB: “Surely there is a mine for silver and a place where gold is refined.
2 ULB ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು. BSB BSB: Iron is taken from the earth, and copper is smelted from ore.
3 ULB ಮನುಷ್ಯರು ಕತ್ತಲನ್ನು ನಿವಾರಿಸಿ ಕಾರ್ಗತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ ಮರೆಯಾಗಿರುವ ಕಲ್ಲುಗಳನ್ನು ಕಟ್ಟಕಡೆಯ ವರೆಗೆ ಹುಡುಕುವರು. BSB BSB: Man puts an end to the darkness; he probes the farthest recesses for ore in deepest darkness.
4 ULB ಗಣಿಯನ್ನು ತೋಡಿ ತೋಡಿ ಭೂಮಿಯೊಳಗೆ ಬಹುದೂರ ಜನರು ವಾಸಸ್ಥಳಗಳಿಂದ ದೂರವಾಗುವರು, ಭೂಮಿಯ ಮೇಲೆ ನಡೆದಾಡುವವರಿಗೆ ಕಾಣದೆ, ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ಅಲೆದಾಡುವರು. BSB BSB: Far from human habitation he cuts a shaft in places forgotten by the foot of man. Far from men he dangles and sways.
5 ULB ಭೂಮಿಯು ಅನ್ನವನ್ನು ಕೊಡುವುದು, ಅದರ ಕೆಳಭಾಗವು ಬೆಂಕಿ ಬಿದ್ದಂತೆ ಹಾಳಾಗಿರುವುದು. BSB BSB: Food may come from the earth, but from below it is transformed as by fire.
6 ULB ಅದರ ಕಲ್ಲುಗಳಲ್ಲಿ ಇಂದ್ರನೀಲ ಮಣಿಗಳು ಸಿಕ್ಕುವವು, ಅದರಲ್ಲಿ ಚಿನ್ನದ ಪುಡಿಯೂ ಇರುವುದು. BSB BSB: Its rocks are the source of sapphires, containing flecks of gold.
7 ULB ಆ ದಾರಿಯು ಯಾವ ಹದ್ದಿಗೂ ತಿಳಿಯದು, ಗಿಡಗದ ಕಣ್ಣಿಗೂ ಬಿದ್ದಿಲ್ಲ. BSB BSB: No bird of prey knows that path; no falcon’s eye has seen it.
8 ULB ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ, ಸಿಂಹವು ಆ ಮಾರ್ಗವನ್ನು ತುಳಿದಿಲ್ಲ. BSB BSB: Proud beasts have never trodden it; no lion has ever prowled over it.
9 ULB ಮನುಷ್ಯನು ಕಗ್ಗಲ್ಲಿನ ಮೇಲೆ ಕೈಮಾಡಿ ಬೆಟ್ಟಗಳನ್ನು ಬುಡದ ತನಕ ಕೆಡವಿಬಿಡುವನು. BSB BSB: The miner strikes the flint; he overturns mountains at their base.
10 ULB ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುವನು; ಅವನ ಕಣ್ಣು ಅಮೂಲ್ಯ ಪದಾರ್ಥಗಳನ್ನೆಲ್ಲಾ ಕಾಣುವುದು. BSB BSB: He hews out channels in the rocks, and his eyes spot every treasure.
11 ULB ನೀರಿನ ಒರತೆಗಳನ್ನು ಹುಡುಕಿ ಹೊರತರುತ್ತಾನೆ, ಮರೆಯಾಗಿದ್ದ ವಸ್ತುವನ್ನು ಬೆಳಕಿಗೆ ತರುವನು. BSB BSB: He stops up the sources of the streams to bring what is hidden to light.
12 ULB ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ? BSB BSB: But where can wisdom be found, and where does understanding dwell?
13 ULB ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಭೂಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು. BSB BSB: No man can know its value, nor is it found in the land of the living.
14 ULB ಭೂಮಿಯ ಕೆಳಗಣ ಸಾಗರವು ನನ್ನಲ್ಲಿ ಇಲ್ಲ ಎನ್ನುವುದು, ಸಮುದ್ರವು, ತನ್ನ ಹತ್ತಿರ ಇಲ್ಲ ಎಂದು ಹೇಳುವುದು. BSB BSB: The ocean depths say, ‘It is not in me,’ while the sea declares, ‘It is not with me.’
15 ULB ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವುದು ಅಸಾಧ್ಯ, ಅದರ ಬೆಲೆಗೆ ಬೆಳ್ಳಿಯನ್ನು ತೂಗುವುದು ಅಶಕ್ಯ. BSB BSB: It cannot be bought with gold, nor can its price be weighed out in silver.
16 ULB ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು. BSB BSB: It cannot be valued in the gold of Ophir, in precious onyx or sapphire.
17 ULB ಬಂಗಾರವಾಗಲಿ, ಸ್ಫಟಿಕವಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲಾಗಿಕೊಡುವುದು ಸಾಧ್ಯವೋ? BSB BSB: Neither gold nor crystal can compare to it, nor jewels of fine gold be exchanged for it.
18 ULB ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ! BSB BSB: Coral and quartz are unworthy of mention; the price of wisdom is beyond rubies.
19 ULB ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಿಲ್ಲ, ಶುದ್ಧ ಕನಕದೊಡನೆ ಅದನ್ನು ತೂಗಲಾಗದು. BSB BSB: Topaz from Cush cannot compare to it, nor can it be valued in pure gold.
20 ULB ಹೀಗಿರಲು ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಯಾವ ಸ್ಥಳದಲ್ಲಿ ದೊರಕೀತು? BSB BSB: From where, then, does wisdom come, and where does understanding dwell?
21 ULB ಅದು ಎಲ್ಲಾ ಜೀವಿಗಳ ದೃಷ್ಟಿಗೆ ಅಗೋಚರವಾಗಿದೆ, ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ. BSB BSB: It is hidden from the eyes of every living thing and concealed from the birds of the air.
22 ULB ನಾಶನವೂ, ಮೃತ್ಯುವೂ, <ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆ> ಎಂದು ಹೇಳುವವು. BSB BSB: Abaddon and Death say, ‘We have heard a rumor about it.’
23 ULB ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಆತನೊಬ್ಬನಿಗೇ ಗೊತ್ತು. BSB BSB: But God understands its way, and He knows its place.
24 ULB ಆತನೊಬ್ಬನೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ. BSB BSB: For He looks to the ends of the earth and sees everything under the heavens.
25 ULB ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿದನು. BSB BSB: When God fixed the weight of the wind and measured out the waters,
26 ULB ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ, BSB BSB: when He set a limit for the rain and a path for the thunderbolt,
27 ULB ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆಮಾಡಿದನು. BSB BSB: then He looked at wisdom and appraised it; He established it and searched it out.
28 ULB ಆಮೇಲೆ ಮನುಷ್ಯರಿಗೆ, <ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ>>> ಎಂದು ಹೇಳಿದನು. BSB BSB: And He said to man, ‘Behold, the fear of the Lord, that is wisdom, and to turn away from evil is understanding.’”
Select verses for actions: Enter goes to them and Escape comes back.