1 ULB ತರುವಾಯ ಯೋಬನು ಪ್ರಸ್ತಾಪವನ್ನೆತ್ತಿ ಇಂತೆಂದನು, BSB BSB: And Job continued his discourse:
2 ULB <<ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ! BSB BSB: “How I long for the months gone by, for the days when God watched over me,
3 ULB ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು. BSB BSB: when His lamp shone above my head, and by His light I walked through the darkness,
4 ULB ಆ ದಿನಗಳು ನನ್ನ ಜೀವಮಾನದ ಸುಗ್ಗೀಕಾಲವು, ದೇವರ ಸ್ನೇಹವು ನನ್ನ ಗುಡಾರವನ್ನು ಆವರಿಸಿಕೊಂಡಿತ್ತು. BSB BSB: when I was in my prime, when the friendship of God rested on my tent,
5 ULB ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು, ನನ್ನ ಮಕ್ಕಳು ನನ್ನ ಸುತ್ತಲಿದ್ದರು. BSB BSB: when the Almighty was still with me and my children were around me,
6 ULB ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು. BSB BSB: when my steps were bathed in cream and the rock poured out for me streams of oil!
7 ULB ಊರ ಮುಂದಿನ ಚಾವಡಿಗೆ ಹೋದಾಗಲೂ, ಚೌಕದಲ್ಲಿ ಆಸನವನ್ನು ಹಾಕಿಸಿಕೊಂಡಾಗಲೂ BSB BSB: When I went out to the city gate and took my seat in the public square,
8 ULB ಯೌವನಸ್ಥರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು, ವೃದ್ಧರು ಎದ್ದು ನಿಂತರು. BSB BSB: the young men saw me and withdrew, and the old men rose to their feet.
9 ULB ಪ್ರಭುಗಳು ಮೌನವಾಗಿ ಬಾಯ ಮೇಲೆ ಕೈಯಿಟ್ಟುಕೊಂಡರು. BSB BSB: The princes refrained from speaking and covered their mouths with their hands.
10 ULB ಮುಖಂಡರ ನಾಲಿಗೆಯು ಸೇದಿಹೋಗಿ ಧ್ವನಿಯಡಗಿತು. BSB BSB: The voices of the nobles were hushed, and their tongues stuck to the roofs of their mouths.
11 ULB ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿ ಕೊಟ್ಟಿತು. BSB BSB: For those who heard me called me blessed, and those who saw me commended me,
12 ULB ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು. BSB BSB: because I rescued the poor who cried out and the fatherless who had no helper.
13 ULB ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು, ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು. BSB BSB: The dying man blessed me, and I made the widow’s heart sing for joy.
14 ULB ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು. BSB BSB: I put on righteousness, and it clothed me; justice was my robe and my turban.
15 ULB ನಾನು ಕುರುಡನಿಗೆ ಕಣ್ಣಾಗಿಯೂ, ಕುಂಟನಿಗೆ ಕಾಲಾಗಿಯೂ ಇದ್ದೆನು. BSB BSB: I served as eyes to the blind and as feet to the lame.
16 ULB ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು. BSB BSB: I was a father to the needy, and I took up the case of the stranger.
17 ULB ಅನ್ಯಾಯಗಾರನ ಕೋರೆಗಳನ್ನು ಮುರಿದು, ಅವನ ಹಲ್ಲುಗಳಿಂದ ಬೇಟೆಯನ್ನು ಕಿತ್ತು ತರುತ್ತಿದ್ದೆನು. BSB BSB: I shattered the fangs of the unjust and snatched the prey from his teeth.
18 ULB ಆಗ ನಾನು ಹೇಳಿದ್ದೇನೆಂದರೆ, <ನನ್ನ ಗೂಡಿನಲ್ಲಿಯೇ ನಾನು ಸಾಯುವೆನು, ನನ್ನ ದಿನಗಳು ಮರಳಿನಂತೆ ಅಸಂಖ್ಯವಾಗಿರುವವು. BSB BSB: So I thought: ‘I will die in my nest and multiply my days as the sand.
19 ULB ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುವವು, ರಾತ್ರಿಯಲ್ಲಿ ಇಬ್ಬನಿಯು ನನ್ನ ರೆಂಬೆಗಳ ಮೇಲೆ ಬಿದ್ದಿರುವುದು. BSB BSB: My roots will spread out to the waters, and the dew will rest nightly on my branches.
20 ULB ನನ್ನ ಮಾನವು ಹೊಸದಾಗುತ್ತಲೂ, ನನ್ನ ಬಿಲ್ಲು ಕೈಯಲ್ಲಿ ಬಲಗೊಳ್ಳುತ್ತಲೂ ಇರುವವು> ಎಂಬುದೇ. BSB BSB: My glory is ever new within me, and my bow is renewed in my hand.’
21 ULB ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು, ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು. BSB BSB: Men listened to me with expectation, waiting silently for my counsel.
22 ULB ನಾನು ಮಾತನಾಡಿದ ಮೇಲೆ ಮತ್ತೆ ಅವರು ಮಾತನಾಡುತ್ತಿರಲಿಲ್ಲ, ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು, BSB BSB: After my words, they spoke no more; my speech settled on them like dew.
23 ULB ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ, ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು. BSB BSB: They waited for me as for rain and drank in my words like spring showers.
24 ULB ನಾನು ಅವರನ್ನು ನೋಡಿ ನಗಲು ಅವರು ಧೈರ್ಯಗೆಟ್ಟರು, ನನ್ನ ಮುಖಕಾಂತಿಯನ್ನೋ ಅವರು ಎಂದೂ ಕುಂದಿಸಲಿಲ್ಲ. BSB BSB: If I smiled at them, they did not believe it; the light of my countenance was precious.
25 ULB ನಾನು ಅವರಿಗೆ ತಕ್ಕ ಮಾರ್ಗವನ್ನು ಆರಿಸಿಕೊಟ್ಟು, ತನ್ನ ಸೈನ್ಯಗಳ ಮಧ್ಯದಲ್ಲಿ ಕುಳಿತಿರುವ ರಾಜನಂತೆಯೂ, ದುಃಖಿತರನ್ನು ಸಂತೈಸುವ ಮುಖಂಡನಾಗಿ ಆಸೀನನಾಗಿದ್ದೆನು.>> BSB BSB: I chose their course and presided as chief. So I dwelt as a king among his troops, as a comforter of the mourners.
Select verses for actions: Enter goes to them and Escape comes back.