1 ULB ಆ ಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ, BSB BSB: After this, Job opened his mouth and cursed the day of his birth.
2 ULB ಯೋಬನು ಇಂತೆಂದನು, BSB BSB: And this is what he said:
3 ULB <<ನಾನು ಹುಟ್ಟಿದ ದಿನವು ಹಾಳಾಗಿ ಹೋಗಲಿ, <ಗರ್ಭದಲ್ಲಿ ಪುರುಷಾಂಕುರವಾಯಿತು> ಎಂದು ನುಡಿದ ರಾತ್ರಿಯು ನಾಶವಾಗಲಿ BSB BSB: “May the day of my birth perish, and the night it was said, ‘A boy is conceived.’
4 ULB ಆ ದಿನವು ಕತ್ತಲೆಯಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ. BSB BSB: If only that day had turned to darkness! May God above disregard it; may no light shine upon it.
5 ULB ಕತ್ತಲೆಯೂ, ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ. BSB BSB: May darkness and gloom reclaim it, and a cloud settle over it; may the blackness of the day overwhelm it.
6 ULB ಕಾರ್ಗತ್ತಲು ಆ ರಾತ್ರಿಯನ್ನು ಹಿಡಿದುಕೊಳ್ಳಲಿ, ಅದು ಮಾಸಗಳ ಲೆಕ್ಕದಲ್ಲಿ ಸೇರದೆ ಸಂವತ್ಸರದ ದಿನಗಳಲ್ಲಿ ಹರ್ಷಿಸದೆ ಇರಲಿ. BSB BSB: If only darkness had taken that night away! May it not appear among the days of the year; may it never be entered in any of the months.
7 ULB ಆಹಾ, ರಾತ್ರಿಯು ಬಂಜೆಯಾಗಿ ಅದರಲ್ಲಿ ಉತ್ಸಾಹಧ್ವನಿಯು ಉಂಟಾಗದಿರಲಿ. BSB BSB: Behold, may that night be barren; may no joyful voice come into it.
8 ULB ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ, ದಿನಗಳನ್ನು ಶಪಿಸುವುದರಲ್ಲಿಯೂ ಜಾಣರಾದ (ಮಾಂತ್ರಿಕರು) ಅದಕ್ಕೆ ಶಾಪಕೊಡಲಿ. BSB BSB: May it be cursed by those who curse the day—those prepared to rouse Leviathan.
9 ULB ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ಮಿಣುಕದೆ ಹೋಗಲಿ. ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ. ಅರುಣೋದಯವೆಂಬ ರೆಪ್ಪೆ ತೆರೆಯುವುದನ್ನು ಅದು ಕಾಣದಿರಲಿ. BSB BSB: May its morning stars grow dark; may it wait in vain for daylight; may it not see the breaking of dawn.
10 ULB ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ, ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲವಲ್ಲಾ. BSB BSB: For that night did not shut the doors of the womb to hide the sorrow from my eyes.
11 ULB ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ? BSB BSB: Why did I not perish at birth; why did I not die as I came from the womb?
12 ULB ತಾಯಿಯ ಮಡಿಲು ನನ್ನನ್ನು ಹೊತ್ತದ್ದೇಕೆ? ತಾಯಿಯ ಮೊಲೆಗಳು ನನಗೆ ಕುಡಿಯ ಕೊಟ್ಟದ್ದೇಕೆ? BSB BSB: Why were there knees to receive me, and breasts that I should be nursed?
13 ULB ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು. BSB BSB: For now I would be lying down in peace; I would be asleep and at rest
14 ULB ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮ್ಮ ಸಮಾಧಿಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ, ಮಂತ್ರಿಗಳೊಡನೆಯೂ ನಾನಿರುತ್ತಿದ್ದೆ. BSB BSB: with kings and counselors of the earth, who built for themselves cities now in ruins,
15 ULB ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು. BSB BSB: or with princes who had gold, who filled their houses with silver.
16 ULB ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದು, ಹೂಳಿಟ್ಟ ಪಿಂಡದಂತೆ, ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಜನ್ಮವಿಲ್ಲದವನಾಗಿ ಇರುತ್ತಿದ್ದೆನು. BSB BSB: Or why was I not hidden like a stillborn child, like an infant who never sees daylight?
17 ULB ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವುದು, ದಣಿದವರು ದಣಿವಾರಿಸಿಕೊಳ್ಳುವರು. BSB BSB: There the wicked cease from raging, and there the weary find rest.
18 ULB ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ, ಗುಂಪುಗುಂಪಾಗಿ ವಿಶ್ರಮಿಸಿಕೊಳ್ಳುವರು. BSB BSB: The captives enjoy their ease; they do not hear the voice of the oppressor.
19 ULB ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲಾ. ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ. BSB BSB: Both small and great are there, and the slave is freed from his master.
20 ULB ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ? BSB BSB: Why is light given to the miserable, and life to the bitter of soul,
21 ULB ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು. BSB BSB: who long for death that does not come, and search for it like hidden treasure,
22 ULB ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ. BSB BSB: who rejoice and greatly exult when they reach the grave?
23 ULB ದೇವರು ನನ್ನ ಸುತ್ತಲೂ ಬೇಲಿ ಹಾಕಿ, ದಾರಿಕಟ್ಟಿದ ಮೇಲೆ ಅವನಿಗೆ ಏಕೆ ಬೆಳಕನ್ನು ಕೊಡುತ್ತಾನೆ? BSB BSB: Why is life given to a man whose way is hidden, whom God has hedged in?
24 ULB ನಿಟ್ಟುಸಿರೇ ನನ್ನೆದುರಿಗೆ ಬರುವ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ. BSB BSB: I sigh when food is put before me, and my groans pour out like water.
25 ULB ನನಗೆ ಭಯವು ಹುಟ್ಟಿದೊಡನೆಯೇ ಆಪತ್ತು ಸಂಭವಿಸುವುದು. ನಾನು ಯಾವುದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವುದು. BSB BSB: For the thing I feared has overtaken me, and what I dreaded has befallen me.
26 ULB ನನಗೆ ಯಾವ ಶಾಂತಿಯೂ, ವಿಶ್ರಾಂತಿಯೂ, ಉಪಶಮನವೂ ಇರುವುದಿಲ್ಲ, ಯಾವಾಗಲೂ ಕಳವಳವೇ.>> BSB BSB: I am not at ease or quiet; I have no rest, for trouble has come.”
Select verses for actions: Enter goes to them and Escape comes back.