1 ULB ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ; ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಗಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು. BSB BSB: “But now they mock me, men younger than I am, whose fathers I would have refused to put with my sheep dogs.
2 ULB ಅವರ ಕೈ ಬಲದಿಂದ ನನಗೆ ಏನಾದೀತು? ಅವರ ಪುಷ್ಟಿಯು ಕುಗ್ಗಿಹೋಗಿದೆಯಷ್ಟೆ. BSB BSB: What use to me was the strength of their hands, since their vigor had left them?
3 ULB ಅವರು ಕೊರತೆಯಿಂದಲೂ, ಹಸಿವಿನಿಂದಲೂ ಸೊರಗಿ, ನಿನ್ನೆಯವರೆಗೂ ಹಾಳುಬೀಳಾದ ಒಣ ನೆಲವನ್ನು ನೆಕ್ಕುವರು. BSB BSB: Gaunt from poverty and hunger, they gnawed the dry land, and the desolate wasteland by night.
4 ULB ಪೊದೆಗಳಲ್ಲಿ ಉಪ್ಪಿನ ಸೊಪ್ಪನ್ನು ಕಿತ್ತು, ತಿಂದು ಜಾಲಿಯ ಬೇರುಗಳನ್ನೂ ಆಹಾರಮಾಡಿಕೊಳ್ಳುವರು. BSB BSB: They plucked mallow among the shrubs, and the roots of the broom tree were their food.
5 ULB ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು, ಕಳ್ಳನನ್ನು ಓಡಿಸುವ ಹಾಗೆ ಕೂಗಾಡಿ ಓಡಿಸುವರು. BSB BSB: They were banished from among men, shouted at like thieves,
6 ULB ಅವರು ಭಯಂಕರವಾದ ತಗ್ಗುಗಳ ಸಂದುಗಳಲ್ಲಿ ವಾಸಿಸತಕ್ಕವರು, ಭೂಮಿಯಲ್ಲಿಯೂ, ಬಂಡೆಗಳಲ್ಲಿಯೂ ಇರುವ ಗುಹೆಗಳೇ ಅವರ ಮನೆಗಳು. BSB BSB: so that they lived on the slopes of the wadis, among the rocks and in holes in the ground.
7 ULB ಪೊದೆಗಳ ಮಧ್ಯದಲ್ಲಿ ಅರಚುವರು ಕತ್ತೆಗಳಂತೆ, ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುವರು. BSB BSB: They cried out among the shrubs and huddled beneath the nettles.
8 ULB ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ ಹೊರಹಾಕಲ್ಪಟ್ಟಿದ್ದರೆ. BSB BSB: A senseless and nameless brood, they were driven off the land.
9 ULB ಈಗಲಾದರೋ ನನ್ನ ಮೇಲೆ ಗೇಲಿಮಾಡುವ ಹಾಡುಗಳನ್ನು ಕಟ್ಟುವರು. ಮತ್ತು ಅವರ ಕಟ್ಟುಕಥೆಗಳಿಗೆ ಆಸ್ಪದವಾಗಿದ್ದೇನೆ. BSB BSB: And now they mock me in song; I have become a byword among them.
10 ULB ನನಗೆ ಅಸಹ್ಯಪಟ್ಟು ದೂರ ನಿಂತು, ನನ್ನ ಮೇಲೆ ಉಗುಳುವುದಕ್ಕೂ ಹಿಂದೆಗೆಯರು. BSB BSB: They abhor me and keep far from me; they do not hesitate to spit in my face.
11 ULB ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವುದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ. BSB BSB: Because God has unstrung my bow and afflicted me, they have cast off restraint in my presence.
12 ULB ಆ ಕಲಹಗಾರರು ನನ್ನ ಬಲಗಡೆ ಎದ್ದು, ನನ್ನ ಕಾಲುಗಳನ್ನು ಹಿಂದಕ್ಕೆ ತಳ್ಳುತ್ತಾ ನನ್ನ ನಾಶಕ್ಕಾಗಿ ಹೊಂಚು ಹಾಕಿದ್ದಾರೆ. BSB BSB: The rabble arises at my right; they lay snares for my feet and build siege ramps against me.
13 ULB ಅವರು ನನ್ನ ದಾರಿಯನ್ನು ಕಡಿದು, ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ. BSB BSB: They tear up my path; they profit from my destruction, with no one to restrain them.
14 ULB ಕೋಟೆ ಬಿರುಕುಗಳಲ್ಲಿ ನುಗ್ಗಿ, ಹಾಳುಬೀಳಿನಲ್ಲಿ ನಿಂತಿರುವ ನನ್ನ ಮೇಲೆ ಹೊರಳುತ್ತಾರೆ. BSB BSB: They advance as through a wide breach; through the ruins they keep rolling in.
15 ULB ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು; ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು. BSB BSB: Terrors are turned loose against me; they drive away my dignity as by the wind, and my prosperity has passed like a cloud.
16 ULB ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ. BSB BSB: And now my soul is poured out within me; days of affliction grip me.
17 ULB ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ. BSB BSB: Night pierces my bones, and my gnawing pains never rest.
18 ULB ನನ್ನ ಬಟ್ಟೆಯು ರೋಗದ ಅಧಿಕ ಬಲದಿಂದ ಕೆಟ್ಟುಹೋಗಿ; ಅಂಗಿಯ ಕೊರಳ ಪಟ್ಟಿಯ ಹಾಗೆ ನನ್ನನ್ನು ಸುತ್ತಿಕೊಂಡಿದೆ. BSB BSB: With great force He grasps my garment; He seizes me by the collar of my tunic.
19 ULB ಆತನು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾನೆ, ಧೂಳುಬೂದಿಗಳಿಗೆ ಸಮಾನನಾಗಿದ್ದೇನೆ. BSB BSB: He throws me into the mud, and I have become like dust and ashes.
20 ULB ಓ ದೇವರೇ ನಾನು ನಿನಗೆ ಮೊರೆಯಿಟ್ಟರೂ ನೀನು ಉತ್ತರಕೊಡುವುದಿಲ್ಲ, ಎದ್ದು ನಿಂತರೂ ನನ್ನನ್ನು ಸುಮ್ಮನೆ ನೋಡುತ್ತಿರುವಿ. BSB BSB: I cry out to You for help, but You do not answer; when I stand up, You merely look at me.
21 ULB ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದಿ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತಿ. BSB BSB: You have ruthlessly turned on me; You oppose me with Your strong hand.
22 ULB ನನ್ನನ್ನು ಬಿರುಗಾಳಿಗೆ ಎತ್ತಿ ತೂರಿಬಿಟ್ಟು, ಅದರ ಆರ್ಭಟದಲ್ಲಿ ಮಾಯಮಾಡುತ್ತಿ. BSB BSB: You snatch me up into the wind and drive me before it; You toss me about in the storm.
23 ULB ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ. BSB BSB: Yes, I know that You will bring me down to death, to the place appointed for all the living.
24 ULB ಆದರೂ ನಾಶಕ್ಕೆ ಒಳಗಾದವನು ಕೈಚಾಚುವುದಿಲ್ಲವೋ? ಆಪತ್ತಿಗೆ ಒಳಪಟ್ಟವನು ಕೂಗಿಕೊಳ್ಳುವುದಿಲ್ಲವೋ? BSB BSB: Yet no one stretches out his hand against a ruined man when he cries for help in his distress.
25 ULB ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ? ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೇನಷ್ಟೆ. BSB BSB: Have I not wept for those in trouble? Has my soul not grieved for the needy?
26 ULB ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, ಬೆಳಕನ್ನು ಎದುರು ನೋಡುತ್ತಿರುವಾಗ ಕತ್ತಲಾಯಿತು. BSB BSB: But when I hoped for good, evil came; when I looked for light, darkness fell.
27 ULB ನನ್ನ ಹೃದಯವು ಕುದಿಯುತ್ತಿದೆ, ಅದಕ್ಕೆ ಶಾಂತಿಯಿಲ್ಲ; ಬಾಧೆಯ ದಿನಗಳು ನನಗೆ ಒದಗಿವೆ. BSB BSB: I am churning within and cannot rest; days of affliction confront me.
28 ULB ಸಂತೈಸುವ ಸೂರ್ಯನಿಲ್ಲದೆ; ಮಂಕುಬಡಿದಂತೆ ಅಲೆಯುತ್ತಾ ಸಭೆಯ ಮಧ್ಯನಿಂತು ಅಂಗಲಾಡುತ್ತಿದ್ದೇನೆ. ಸಂಘದಲ್ಲಿ ನಿಂತು ಅಂಗಲಾಚಿಕೊಳ್ಳುತ್ತೇನೆ. BSB BSB: I go about blackened, but not by the sun. I stand up in the assembly and cry for help.
29 ULB ನಾನು ನರಿಗಳ ತಮ್ಮನೂ, ಉಷ್ಟ್ರಪಕ್ಷಿಗಳ ಗೆಳೆಯನೂ ಆಗಿದ್ದೇನೆ. BSB BSB: I have become a brother of jackals, a companion of ostriches.
30 ULB ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ. BSB BSB: My skin grows black and peels, and my bones burn with fever.
31 ULB ಇದರಿಂದ ನನ್ನ ಕಿನ್ನರಿಯಲ್ಲಿ ಗೋಳಾಟವೂ, ನನ್ನ ಕೊಳಲಿನಲ್ಲಿ ಅಳುವ ಧ್ವನಿಯೂ ಕೇಳಿಸುತ್ತವೆ. BSB BSB: My harp is tuned to mourning and my flute to the sound of weeping.
Select verses for actions: Enter goes to them and Escape comes back.