1 ULB ಅದಿರಲಿ, ಯೋಬನೇ, ನನ್ನ ಮಾತನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು. BSB BSB: “But now, O Job, hear my speech, and listen to all my words.
2 ULB ಇಗೋ, ನನ್ನ ಬಾಯನ್ನು ತೆರೆದಿದ್ದೇನೆ, ನನ್ನ ನಾಲಿಗೆಯು ಬಾಯಿಯೊಳಗಿಂದ ಮಾತನಾಡುತ್ತಿದೆ. BSB BSB: Behold, I will open my mouth; my address is on the tip of my tongue.
3 ULB ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು. BSB BSB: My words are from an upright heart, and my lips speak sincerely what I know.
4 ULB ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನಾದ ದೇವರ ಶ್ವಾಸದಿಂದುಂಟಾಗಿದೆ. BSB BSB: The Spirit of God has made me, and the breath of the Almighty gives me life.
5 ULB ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, ನನ್ನೆದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ. BSB BSB: Refute me if you can; prepare your case and confront me.
6 ULB ನೋಡು, ನಾನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ. ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟಿದ್ದೇನೆ. BSB BSB: I am just like you before God; I was also formed from clay.
7 ULB ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು, ನನ್ನ ಒತ್ತಾಯವು ನಿನಗೆ ಹೊರೆಯಾಗಿರದು. BSB BSB: Surely no fear of me should terrify you; nor will my hand be heavy upon you.
8 ULB ನಿನ್ನ ನುಡಿಯ ಧ್ವನಿಯನ್ನು ಕೇಳಿದ್ದೇನೆ, ನನ್ನ ಕಿವಿಗೆ ಬಿದ್ದ ಈ ಮಾತುಗಳನ್ನು ಆಡಿದ್ದಿ, BSB BSB: Surely you have spoken in my hearing, and I have heard these very words:
9 ULB <ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ. BSB BSB: ‘I am pure, without transgression; I am clean, with no iniquity in me.
10 ULB ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು, ನನ್ನನ್ನು ಶತ್ರುವೆಂದು ಎಣಿಸಿಕೊಂಡಿದ್ದಾನೆ. BSB BSB: Yet God finds occasions against me; He counts me as His enemy.
11 ULB ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿ, ನನ್ನ ಮಾರ್ಗಗಳನ್ನೆಲ್ಲಾ ಕಂಡುಕೊಂಡಿದ್ದಾನೆ> ಎಂದು ಹೇಳಿದೆಯಲ್ಲಾ. BSB BSB: He puts my feet in the stocks; He watches over all my paths.’
12 ULB ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ. BSB BSB: Behold, you are not right in this matter. I will answer you, for God is greater than man.
13 ULB ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ? BSB BSB: Why do you complain to Him that He answers nothing a man asks?
14 ULB ದೇವರು ಮಾತನಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, ಮನುಷ್ಯನಾದರೋ ಲಕ್ಷಿಸುವುದಿಲ್ಲ. BSB BSB: For God speaks in one way and in another, yet no one notices.
15 ULB ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ, BSB BSB: In a dream, in a vision in the night, when deep sleep falls upon men as they slumber on their beds,
16 ULB ಅವರ ಕಿವಿಗಳನ್ನು ತೆರೆದು, ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆ ಹಾಕುವನು. BSB BSB: He opens their ears and terrifies them with warnings
17 ULB ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, ಮಾನವನಿಗೆ ಗರ್ವವನ್ನು ಮರೆಮಾಡುವನು. BSB BSB: to turn a man from wrongdoing and keep him from pride,
18 ULB ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು, ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದ ಹಾಗೆ ನಿಲ್ಲಿಸುವನು. BSB BSB: to preserve his soul from the Pit and his life from perishing by the sword.
19 ULB ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ, ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು. BSB BSB: A man is also chastened on his bed with pain and constant distress in his bones,
20 ULB ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವುದು, ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವುದು. BSB BSB: so that he detests his bread, and his soul loathes his favorite food.
21 ULB ಅವನ ಮಾಂಸವು ಕ್ಷಯಿಸಿ ಕಾಣದೆ ಹೋಗುವುದು, ಕಾಣದಿದ್ದ ಅವನ ಎಲುಬುಗಳು ಬಯಲಾಗುವವು. BSB BSB: His flesh wastes away from sight, and his hidden bones protrude.
22 ULB ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವುದು. BSB BSB: He draws near to the Pit, and his life to the messengers of death.
23 ULB ಮನುಷ್ಯನ ಕರ್ತವ್ಯವನ್ನು ತೋರಿಸತಕ್ಕ ಸಹಸ್ರ ದೇವದೂತರಲ್ಲಿ ಒಬ್ಬನು ಅವನಿಗೆ ಮಧ್ಯಸ್ಥನಾಗಿ ಬೇಡುವುದರಿಂದ, BSB BSB: Yet if there is a messenger on his side, one mediator in a thousand, to tell a man what is right for him,
24 ULB ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, <ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು> ಎಂದು ಅಪ್ಪಣೆಕೊಟ್ಟರೆ, BSB BSB: to be gracious to him and say, ‘Spare him from going down to the Pit; I have found his ransom,’
25 ULB ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವುದು. ಅವನು ಪುನಃ ಎಳೆತನದ ಚೈತನ್ಯವನ್ನು ಅನುಭವಿಸುವನು. BSB BSB: then his flesh is refreshed like a child’s; he returns to the days of his youth.
26 ULB ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ, ಆತನ ದರ್ಶನ ಮಾಡಿ ಉತ್ಸಾಹದಿಂದ ಧ್ವನಿಗೈದು, ತಿರುಗಿ ಆತನಿಂದ ನೀತಿವಂತನೆಂದು ಎನ್ನಿಸಿಕೊಳ್ಳುವನು. BSB BSB: He prays to God and finds favor; he sees God’s face and shouts for joy, and God restores His righteousness to that man.
27 ULB ಅವನು ಮನುಷ್ಯರ ಮುಂದೆ ನಿಂತು, <ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ. BSB BSB: Then he sings before men with these words: ‘I have sinned and perverted what was right; yet I did not get what I deserved.
28 ULB ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು> ಎಂದು ಕೀರ್ತನೆ ಹಾಡುವನು. BSB BSB: He redeemed my soul from going down to the Pit, and I will live to see the light.’
29 ULB ದೇವರು ಎರಡು ಸಾರಿ, ಹೌದು ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು. BSB BSB: Behold, all these things God does to a man, two or even three times,
30 ULB ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ, ಜೀವಲೋಕದ ಬೆಳಕನ್ನು ಅನುಭವಿಸುವಂತೆ ಮಾಡುವನು BSB BSB: to bring back his soul from the Pit, that he may be enlightened with the light of life.
31 ULB ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, ನಾನೇ ಮಾತನಾಡುವೆನು. BSB BSB: Pay attention, Job, and listen to me; be silent, and I will speak.
32 ULB ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, ಮಾತನಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ. BSB BSB: But if you have something to say, answer me; speak up, for I would like to vindicate you.
33 ULB ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.>> BSB BSB: But if not, then listen to me; be quiet, and I will teach you wisdom.”
Select verses for actions: Enter goes to them and Escape comes back.