1 ULB ಆಗ ಎಲೀಹು ಮತ್ತೆ ಇಂತೆಂದನು, BSB BSB: Then Elihu continued:
2 ULB <<ವಿವೇಕಿಗಳೇ, ನನ್ನ ಮಾತುಗಳನ್ನು ಕೇಳಿರಿ, ಜ್ಞಾನಿಗಳೇ, ನನಗೆ ಕಿವಿಗೊಡಿರಿ! BSB BSB: “Hear my words, O wise men; give ear to me, O men of learning.
3 ULB ನಾಲಿಗೆಯು ಆಹಾರವನ್ನು ರುಚಿನೋಡುವಂತೆ, ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ. BSB BSB: For the ear tests words as the mouth tastes food.
4 ULB ನ್ಯಾಯವನ್ನೇ ಆರಿಸಿಕೊಳ್ಳೋಣ, ಒಳ್ಳೆಯದು ಇಂಥದೆಂದು ನಮ್ಮನಮ್ಮೊಳಗೆ ನಿಶ್ಚಯಿಸಿಕೊಳ್ಳೋಣ. BSB BSB: Let us choose for ourselves what is right; let us learn together what is good.
5 ULB ಯೋಬನು, <ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ. BSB BSB: For Job has declared, ‘I am righteous, yet God has deprived me of justice.
6 ULB ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರ ಎಂದು ಎನ್ನಿಸಿಕೊಂಡಿದ್ದೇನೆ. ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ> ಎಂದು ಹೇಳಿಕೊಂಡಿದ್ದಾನೆ. BSB BSB: Would I lie about my case? My wound is incurable, though I am without transgression.’
7 ULB ಯೋಬನಿಗೆ ಸಮಾನನು ಯಾರು? ದೇವದೂಷಣೆಯನ್ನು ನೀರಿನಂತೆ ಕುಡಿಯುತ್ತಾನಲ್ಲಾ. BSB BSB: What man is like Job, who drinks up derision like water?
8 ULB ಅವನು ಅಧರ್ಮಿಗಳ ಜೊತೆಯಲ್ಲಿ ಸಂಚರಿಸುತ್ತಾನೆ, ಕೆಟ್ಟವರ ಸಂಗಡ ನಡೆದಾಡುತ್ತಾನೆ. BSB BSB: He keeps company with evildoers and walks with wicked men.
9 ULB <ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ, ಅವನಿಗೆ ಯಾವ ಪ್ರಯೋಜನವೂ ಇಲ್ಲ> ಎಂದು ಹೇಳಿದ್ದಾನಷ್ಟೆ. BSB BSB: For he has said, ‘It profits a man nothing that he should delight in God.’
10 ULB ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ, ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ! BSB BSB: Therefore listen to me, O men of understanding. Far be it from God to do wrong, and from the Almighty to act unjustly.
11 ULB ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸುವಂತೆ ಮಾಡುವನು. BSB BSB: For according to a man’s deeds He repays him; according to a man’s ways He brings consequences.
12 ULB ಹೌದು, ದೇವರು ಕೆಟ್ಟದ್ದನ್ನು ನಡೆಸುವುದೇ ಇಲ್ಲ, ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವುದೇ ಇಲ್ಲ. BSB BSB: Indeed, it is true that God does not act wickedly, and the Almighty does not pervert justice.
13 ULB ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾರು? ಯಾರು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು? BSB BSB: Who gave Him charge over the earth? Who appointed Him over the whole world?
14 ULB ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ, ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವುದಾದರೆ, BSB BSB: If He were to set His heart to it and withdraw His Spirit and breath,
15 ULB ಸಮಸ್ತ ಜನರು ಒಟ್ಟಾಗಿ ಅಳಿದುಹೋಗುವರು, ಪುನಃ ಮನುಷ್ಯರು ಧೂಳೇ ಆಗುವರು. BSB BSB: all flesh would perish together and mankind would return to the dust.
16 ULB ನಿನಗೆ ವಿವೇಕವಿದ್ದರೆ ಇದನ್ನು ಕೇಳು, ನನ್ನ ಮಾತುಗಳ ಧ್ವನಿಗೆ ಕಿವಿಗೊಡು! BSB BSB: If you have understanding, hear this; listen to my words.
17 ULB ನ್ಯಾಯವನ್ನು ದ್ವೇಷಿಸುವವನು ಆಳ್ವಿಕೆ ಮಾಡಾನೇ? ಧರ್ಮಸ್ವರೂಪನೂ, ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವೆಯಾ? BSB BSB: Could one who hates justice govern? Will you condemn the just and mighty One,
18 ULB ಆತನು ರಾಜನಿಗೆ, <ನೀನು ಮೂರ್ಖ> ಪ್ರಭುಗಳಿಗೆ, <ನೀವು ಕೆಟ್ಟವರು> ಎಂದು ಹೇಳಬಲ್ಲನೇ? BSB BSB: who says to kings, ‘You are worthless!’ and to nobles, ‘You are wicked,’
19 ULB ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ. BSB BSB: who is not partial to princes and does not favor rich over poor? For they are all the work of His hands.
20 ULB ಕ್ಷಣ ಮಾತ್ರದೊಳಗೆ ಸಾಯುವರು; ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು. BSB BSB: They die in an instant, in the middle of the night. The people convulse and pass away; the mighty are removed without human hand.
21 ULB ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು, ಅವನ ಹೆಜ್ಜೆಗಳನ್ನೆಲ್ಲಾ ನೋಡುವನು. BSB BSB: For His eyes are on the ways of a man, and He sees his every step.
22 ULB ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, ಅನುಕೂಲವಾದ ಯಾವ ಕತ್ತಲೂ, ಯಾವ ಗಾಢಾಂಧಕಾರವೂ ಇರುವುದಿಲ್ಲ. BSB BSB: There is no darkness or deep shadow where the workers of iniquity can hide.
23 ULB ದೇವರು ಮನುಷ್ಯನ ಮೇಲೆ ಹೆಚ್ಚು ಗಮನವಿಡುವುದೂ, ಮನುಷ್ಯನೂ ಆತನ ನ್ಯಾಯವಿಚಾರಣೆಗೆ ಬರುವುದೂ, ಅವಶ್ಯವಿಲ್ಲ. BSB BSB: For God need not examine a man further or have him approach for judgment.
24 ULB ಯಾವ ವಿಮರ್ಶಕರೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು, ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು. BSB BSB: He shatters the mighty without inquiry and sets up others in their place.
25 ULB ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು. BSB BSB: Therefore, He recognizes their deeds; He overthrows them in the night and they are crushed.
26 ULB ಅಪರಾಧಿಗಳಿಗೋ ಎಂಬಂತೆ ಬಹಿರಂಗವಾಗಿ ಅವರಿಗೆ ಪೆಟ್ಟುಹಾಕುವನು. BSB BSB: He strikes them for their wickedness in full view,
27 ULB ಅವರು ಆತನನ್ನು ಹಿಂಬಾಲಿಸದೆ, ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯಮಾಡಿದ್ದರಷ್ಟೆ. BSB BSB: because they turned aside from Him and had no regard for any of His ways.
28 ULB ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲಿಸಿದನು. BSB BSB: They caused the cry of the poor to come before Him, and He heard the outcry of the afflicted.
29 ULB ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ. BSB BSB: But when He remains silent, who can condemn Him? When He hides His face, who can see Him? Yet He watches over both man and nation,
30 ULB ಭ್ರಷ್ಟನು ಆಳಬಾರದು, ಯಾರೂ ಜನರಿಗೆ ಉರುಲಾಗಕೂಡದು ಎಂಬುದೇ ಆತನ ಉದ್ದೇಶ. BSB BSB: that godless men should not rule or lay snares for the people.
31 ULB ಮನುಷ್ಯನು ದೇವರನ್ನು ಕುರಿತು, <ನಾನು ಕೆಟ್ಟದ್ದನ್ನು ಮಾಡದಿದ್ದರೂ ದಂಡನೆಯನ್ನು ಸಹಿಸಿಕೊಂಡಿದ್ದೇನೆ, BSB BSB: Suppose someone says to God, ‘I have endured my punishment; I will offend no more.
32 ULB ನಾನು ಕಾಣದಿರುವುದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮೇಲೆ ಮಾಡುವುದಿಲ್ಲ> ಎಂದು ಹೇಳುವುದಕ್ಕಾದೀತೇ? BSB BSB: Teach me what I cannot see; if I have done wrong, I will not do it again.’
33 ULB ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವುದೇಕೆ? ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ? ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು. ನಿನಗೆ ತಿಳಿದದ್ದನ್ನು ತಿಳಿಸು. BSB BSB: Should God repay you on your own terms when you have disavowed Him? You must choose, not I; so tell me what you know.
34 ULB ಬುದ್ಧಿವಂತರೂ, ನನ್ನ ಕಡೆಗೆ ಕಿವಿಗೊಡುವ ಪ್ರತಿಯೊಬ್ಬ ಜ್ಞಾನಿಯೂ ನಿನ್ನ ವಿಷಯವಾಗಿ, BSB BSB: Men of understanding will declare to me, and the wise men who hear me will say:
35 ULB <ಯೋಬನು ತಿಳಿವಳಿಕೆಯಿಲ್ಲದೆ ನುಡಿಯುತ್ತಾನೆ, ಅವನ ಮಾತುಗಳಲ್ಲಿ ಬುದ್ಧಿಯಿಲ್ಲ.> BSB BSB: ‘Job speaks without knowledge; his words lack insight.’
36 ULB ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ. BSB BSB: If only Job were tried to the utmost for answering like a wicked man.
37 ULB ಅವನು ಅಪರಾಧವನ್ನಲ್ಲದೆ ದೈವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು, ದೇವರಿಗೆ ವಿರುದ್ಧವಾಗಿ ಅಧಿಕ ಮಾತುಗಳನ್ನು ಆಡುತ್ತಾನೆ>> ಎಂದು ನನಗೆ ಹೇಳುವರು. BSB BSB: For he adds rebellion to his sin; he claps his hands among us and multiplies his words against God.”
Select verses for actions: Enter goes to them and Escape comes back.