1 ULB ಆಮೇಲೆ ಎಲೀಹು ಮತ್ತೆ ಹೀಗೆಂದನು, BSB BSB: And Elihu continued:
2 ULB <<ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, ದೇವರ ಪರವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವು ಉಂಟು. BSB BSB: “Bear with me a little longer, and I will show you that there is more to be said on God’s behalf.
3 ULB ದೂರದಿಂದ ಸಂಪಾದಿಸಿದ ನನ್ನ ತಿಳಿವಳಿಕೆಯ ಪ್ರಕಾರ, ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು. BSB BSB: I get my knowledge from afar, and I will ascribe justice to my Maker.
4 ULB ನನ್ನ ಮಾತುಗಳು ಸುಳ್ಳಲ್ಲವೆಂಬುದು ನಿಶ್ಚಯ, ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ. BSB BSB: For truly my words are free of falsehood; one perfect in knowledge is with you.
5 ULB ಇಗೋ, ದೇವರು ಮಹಾಶಕ್ತನಾಗಿದ್ದರೂ ಯಾರನ್ನೂ ತಿರಸ್ಕರಿಸುವುದಿಲ್ಲ, ಆತನ ಬುದ್ಧಿ ಸಾಮರ್ಥ್ಯವು ಅಪಾರವಾಗಿದೆ. BSB BSB: Indeed, God is mighty, but He despises no one; He is mighty in strength of understanding.
6 ULB ಆತನು ದುಷ್ಟರ ಪ್ರಾಣವನ್ನು ಉಳಿಸುವುದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು. BSB BSB: He does not keep the wicked alive, but He grants justice to the afflicted.
7 ULB ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ, ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕುಳಿತುಕೊಳ್ಳುವ, ಉನ್ನತಪದವಿಗೆ ಅವರನ್ನು ತರುವನು. BSB BSB: He does not take His eyes off the righteous, but He enthrones them with kings and exalts them forever.
8 ULB ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ, BSB BSB: And if men are bound with chains, caught in cords of affliction,
9 ULB ಆತನು ಅವರ ದುಷ್ಕೃತ್ಯವನ್ನೂ, ಸೊಕ್ಕಿನ ದ್ರೋಹಗಳನ್ನೂ ಅವರಿಗೆ ತೋರಿಸುವನು. BSB BSB: then He tells them their deeds and how arrogantly they have transgressed.
10 ULB ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಗಳನ್ನು ತೆರೆದು, ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು. BSB BSB: He opens their ears to correction and commands that they turn from iniquity.
11 ULB ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ, ತಮ್ಮ ದಿನಗಳನ್ನು ಸುಖದಲ್ಲಿಯೂ, ವರ್ಷಗಳನ್ನು ಸಂತೋಷದಲ್ಲಿಯೂ ಕಳೆಯುವರು. BSB BSB: If they obey and serve Him, then they end their days in prosperity and their years in happiness.
12 ULB ಕೇಳದಿದ್ದರೆ ದೈವಾಸ್ತ್ರದಿಂದ ಅಳಿದುಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು. BSB BSB: But if they do not obey, then they perish by the sword and die without knowledge.
13 ULB ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ ಆತನಿಗೆ ಮೊರೆಯಿಡುವುದಿಲ್ಲ. BSB BSB: The godless in heart harbor resentment; even when He binds them, they do not cry for help.
14 ULB ಯೌವನದಲ್ಲೇ ಸಾಯುವರು. ಅವರ ಜೀವವು ಪುರಷಗಾಮಿಗಳ ಜೀವದಂತೆ ಕ್ಷಯಿಸುವುದು. BSB BSB: They die in their youth, among the male shrine prostitutes.
15 ULB ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು. BSB BSB: God rescues the afflicted by their affliction and opens their ears in oppression.
16 ULB ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ, ಇಕ್ಕಟ್ಟಿಲ್ಲದ ವಿಶಾಲ ಸ್ಥಳಕ್ಕೆ ಬರಮಾಡಬೇಕೆಂದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬುದು ಆತನ ಉದ್ದೇಶವಾಗಿದೆ. BSB BSB: Indeed, He drew you from the jaws of distress to a spacious and broad place, to a table full of richness.
17 ULB ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ, ನ್ಯಾಯವಿಚಾರಣೆಗೂ, ನ್ಯಾಯತೀರ್ಪಿಗೂ ಒಳಗಾಗಿದ್ದಿ. BSB BSB: But now you are laden with the judgment due the wicked; judgment and justice have seized you.
18 ULB ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ! BSB BSB: Be careful that no one lures you with riches; do not let a large bribe lead you astray.
19 ULB ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ, ಧನಸಾಮರ್ಥ್ಯವೂ ನಿನಗೆ ಈಡಾಗುವುದೇ? BSB BSB: Can your wealth or all your mighty effort keep you from distress?
20 ULB ಜನಾಂಗಗಳು ತಟ್ಟನೆ ನಿರ್ಮೂಲವಾಗುವಾಗ ಅವರ ವಿರುದ್ಧ ಪಾಪಮಾಡದಂತೆ, ರಾತ್ರಿಯನ್ನು ಬಯಸಬೇಡ. BSB BSB: Do not long for the night, when people vanish from their homes.
21 ULB ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಡಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದಿ. BSB BSB: Be careful not to turn to iniquity, for this you have preferred to affliction.
22 ULB ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತ ಕಾರ್ಯಗಳನ್ನು ನಡೆಸುವನು, ಆತನಂತಹ ಉಪದೇಶಕನು ಯಾರು? BSB BSB: Behold, God is exalted in His power. Who is a teacher like Him?
23 ULB ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? <ನೀನು ಅನ್ಯಾಯವನ್ನು ನಡೆಸಿದಿ> ಎಂದು ಯಾರು ಹೇಳಬಲ್ಲರು? BSB BSB: Who has appointed His way for Him, or told Him, ‘You have done wrong’?
24 ULB ಮನುಷ್ಯರು ಕೀರ್ತಿಸುವ, ಆತನ ಕೆಲಸವನ್ನು ಹೊಗಳಲು ಮರೆಯಬೇಡ. BSB BSB: Remember to magnify His work, which men have praised in song.
25 ULB ಎಲ್ಲಾ ಮನುಷ್ಯರೂ ಅದನ್ನು ಕಂಡಿದ್ದಾರೆ; ಆದರೆ ನರನು ದೂರದಿಂದ ನೋಡುತ್ತಾನಷ್ಟೆ. BSB BSB: All mankind has seen it; men behold it from afar.
26 ULB ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರ್ಷಗಳು ಅಸಂಖ್ಯಾತವಾಗಿವೆ. BSB BSB: Indeed, God is great—beyond our knowledge; the number of His years is unsearchable.
27 ULB ನೀರಿನ ಹನಿಗಳನ್ನು ಎಳೆದುಕೊಳ್ಳುವನು, ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು. BSB BSB: For He draws up drops of water which distill the rain from the mist,
28 ULB ಮೋಡಗಳು ಅದನ್ನು ಸುರಿಸಿ ಸಮೃದ್ಧಿಯಾಗಿ ಜನರ ಮೇಲೆ ಚಿಮುಕಿಸುವುದು. BSB BSB: which the clouds pour out and shower abundantly on mankind.
29 ULB ಆಹಾ, ಮೇಘಗಳ ಹರಡುವಿಕೆಯನ್ನೂ, ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಯಾರು ಗ್ರಹಿಸಬಲ್ಲರು? BSB BSB: Furthermore, who can understand how the clouds spread out, how the thunder roars from His pavilion?
30 ULB ಇಗೋ, ತನ್ನ ಪ್ರಕಾಶವನ್ನು ಸುತ್ತಲು ಹರಡಿಕೊಂಡು, ಅದನ್ನು ಜಲಸಮೂಹಗಳಿಂದ ಮುಚ್ಚಿಕೊಳ್ಳುವನು. BSB BSB: See how He scatters His lightning around Him and covers the depths of the sea.
31 ULB ಮೋಡಗಳ ಮುಖಾಂತರವಾಗಿಯೇ ಜನಾಂಗಗಳಿಗೆ ನ್ಯಾಯವನ್ನು ವಿಧಿಸಿ, ಆಹಾರವನ್ನು ಧಾರಾಳವಾಗಿ ದಯಪಾಲಿಸುವನಷ್ಟೆ. BSB BSB: For by these He judges the nations and provides food in abundance.
32 ULB ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆದು ಗುರಿಮುಟ್ಟುಲು ಬಿಡುವನು. BSB BSB: He fills His hands with lightning and commands it to strike its mark.
33 ULB ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವುದು, ದನಕರುಗಳೂ ಸಹ ಆತನ ಆಗಮನವನ್ನು ತಿಳಿಯುವವು.>> BSB BSB: The thunder declares His presence; even the cattle regard the rising storm.
Select verses for actions: Enter goes to them and Escape comes back.