1 ULB ಇದಲ್ಲದೆ ಯೆಹೋವನು ಯೋಬನಿಗೆ, BSB BSB: And the LORD said to Job:
2 ULB <<ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ>> ಎಂದು ಹೇಳಿದನು. BSB BSB: “Will the faultfinder contend with the Almighty? Let him who argues with God give an answer.”
3 ULB ಆಗ ಯೋಬನು ಯೆಹೋವನಿಗೆ ಉತ್ತರವಾಗಿ, BSB BSB: Then Job answered the LORD:
4 ULB <<ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು. BSB BSB: “Behold, I am insignificant. How can I reply to You? I place my hand over my mouth.
5 ULB ಒಂದು ಸಾರಿ ಮಾತನಾಡಿದ್ದೇನೆ, ಪ್ರತಿವಾದ ಮಾಡಲಾರೆನು; ಎರಡು ಸಲ ಹೌದು, ಇನ್ನೇನೂ ನುಡಿಯಲಾರೆನು>> ಎಂದು ಹೇಳಿದನು. BSB BSB: I have spoken once, but I have no answer—twice, but I have nothing to add.”
6 ULB ಆ ಮೇಲೆ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು, BSB BSB: Then the LORD answered Job out of the whirlwind and said:
7 ULB <<ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು. BSB BSB: “Now brace yourself like a man; I will question you, and you shall inform Me.
8 ULB ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ? BSB BSB: Would you really annul My justice? Would you condemn Me to justify yourself?
9 ULB ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ? BSB BSB: Do you have an arm like God’s? Can you thunder with a voice like His?
10 ULB ನಿನ್ನನ್ನು ನೀನೇ ಮಹಿಮೆ ಘನತೆಗಳಿಂದ ಭೂಷಿಸಿಕೊಂಡು ಪ್ರಭಾವ ಮಹತ್ವಗಳನ್ನು ಧರಿಸಿಕೋ. BSB BSB: Then adorn yourself with majesty and splendor, and clothe yourself with honor and glory.
11 ULB ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು. BSB BSB: Unleash the fury of your wrath; look on every proud man and bring him low.
12 ULB ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ, ದುಷ್ಟರನ್ನು ತಟ್ಟನೆ ಕೆಡವಿಬಿಡು. BSB BSB: Look on every proud man and humble him; trample the wicked where they stand.
13 ULB ಅವರನ್ನು ಒಟ್ಟಿಗೆ ಧೂಳಿನಲ್ಲಿ ಅಡಗಿಸಿ, ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕು ಹಾಕು. BSB BSB: Bury them together in the dust; imprison them in the grave.
14 ULB ಹೀಗಾದರೆ ನಿನ್ನ ಬಲಭುಜವು ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ನಿನ್ನನ್ನು ಹೊಗಳುವೆನು. BSB BSB: Then I will confess to you that your own right hand can save you.
15 ULB ನಿನ್ನಂತೆ ನನ್ನ ಸೃಷ್ಟಿಯಾಗಿರುವ ನೀರಾನೆಯನ್ನು ನೋಡು; ಎತ್ತಿನ ಹಾಗೆ ಹುಲ್ಲನ್ನು ಮೇಯುವುದು. BSB BSB: Look at Behemoth, which I made along with you. He feeds on grass like an ox.
16 ULB ಇಗೋ, ಅದರ ಬಲವು ಸೊಂಟದಲ್ಲಿಯೂ, ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ. BSB BSB: See the strength of his loins and the power in the muscles of his belly.
17 ULB ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವುದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ. BSB BSB: His tail sways like a cedar; the sinews of his thighs are tightly knit.
18 ULB ಅದರ ಮೂಳೆಗಳು ತಾಮ್ರದ ನಳಗಳಂತೆಯೂ, ಅದರ ಎಲುಬುಗಳು ಕಬ್ಬಿಣದ ಹಾರೆಗಳಂತೆಯೂ ಇರುವವು. BSB BSB: His bones are tubes of bronze; his limbs are rods of iron.
19 ULB ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು. ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ. BSB BSB: He is the foremost of God’s works; only his Maker can draw the sword against him.
20 ULB ಗುಡ್ಡಗಳು ಅದಕ್ಕೆ ಮೇವನ್ನು ಕೊಡುವವು; ಕಾಡುಮೃಗಗಳೆಲ್ಲಾ ಅಲ್ಲಿ ಆಡುತ್ತಿರುವವು; BSB BSB: The hills yield him their produce, while all the beasts of the field play nearby.
21 ULB ತಾವರೆಯ ಗಿಡಗಳ ಕೆಳಗೂ, ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ಮಲಗಿಕೊಳ್ಳುವುದು. BSB BSB: He lies under the lotus plants, hidden among the reeds of the marsh.
22 ULB ತಾವರೆ ಗಿಡಗಳು ತಮ್ಮ ನೆರಳನ್ನು ಅದರ ಮೇಲೆ ಹರಡುವವು, ನದಿಯ ನೀರವಂಜಿಗಳು ಅದನ್ನು ಸುತ್ತಿಕೊಂಡಿರುವವು. BSB BSB: The lotus plants conceal him in their shade; the willows of the brook surround him.
23 ULB ಓಹೋ, ಹೊಳೆಯು ಉಕ್ಕಿ ಬಂದರೂ ಅದು ಹೆದರುವುದಿಲ್ಲ. ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು. BSB BSB: Though the river rages, Behemoth is unafraid; he remains secure, though the Jordan surges to his mouth.
24 ULB ಯಾರಾದರೂ ಕಣ್ಣೆದುರಿಗೆ ಬಂದು ಅದನ್ನು ಹಿಡಿದಾನೇ? ಗಾಳದಿಂದ ಅದರ ಮೂಗನ್ನು ಚುಚ್ಚಬಲ್ಲನೇ?>> ಎಂದನು. BSB BSB: Can anyone capture him as he looks on, or pierce his nose with a snare?
Select verses for actions: Enter goes to them and Escape comes back.