1 ULB ಲಿವ್ಯಾತಾನ್ ಮೊಸಳೆಯನ್ನು ಮೀನು ಗಾಳದಿಂದ ಎಳೆಯುವಿಯೋ? ಹುರಿಯಿಂದ ಅದರ ನಾಲಿಗೆಯನ್ನು ಅದುಮಿ ಬಿಗಿಯುವಿಯೋ? BSB BSB: “Can you pull in Leviathan with a hook or tie down his tongue with a rope?
2 ULB ಅದರ ಮೂಗಿಗೆ ಗಾಳವನ್ನು ಇಡುವೆಯೋ? ಅದರ ದವಡೆಗೆ ಮುಳ್ಳನ್ನು ಚುಚ್ಚುವಿಯೋ? BSB BSB: Can you put a cord through his nose or pierce his jaw with a hook?
3 ULB ಅದು ನಿನ್ನ ಬಳಿ ವಿಜ್ಞಾಪಿಸುವುದೋ? ನಿನ್ನ ಸಂಗಡ ಸವಿಮಾತನಾಡೀತೇ? BSB BSB: Will he beg you for mercy or speak to you softly?
4 ULB ಅದನ್ನು ನೀನು ಸದಾ ಆಳಾಗಿ ಸೇರಿಸಿಕೊಳ್ಳುವಂತೆ, ನಿನ್ನೊಂದಿಗೆ ಒಪ್ಪಂದ ಮಾಡಿಕೊಳ್ಳುವುದೋ? BSB BSB: Will he make a covenant with you to take him as a slave for life?
5 ULB ಅದನ್ನು ಪಕ್ಷಿಯಂತೆ ಆಡಿಸುವೆಯಾ? ನಿನ್ನ ಹುಡುಗಿಯರ ವಿನೋದಕ್ಕಾಗಿ ಅದನ್ನು ಕಟ್ಟುವೆಯಾ? BSB BSB: Can you pet him like a bird or put him on a leash for your maidens?
6 ULB ಪಾಲುಗಾರರಾದ ಬೆಸ್ತರು ಅದನ್ನು ವ್ಯಾಪಾರಕ್ಕೆ ಇಡುವರೋ? ವರ್ತಕರಿಗೆ ಹಂಚಿ ಮಾರುವರೋ? BSB BSB: Will traders barter for him or divide him among the merchants?
7 ULB ಅದರ ಚರ್ಮವನ್ನೆಲ್ಲ ಕೊಂಡಿಗಳಿಂದಲೂ ಅಥವಾ ತಲೆಯನ್ನೆಲ್ಲ ಮೀನಿನ ಈಟಿಗಳಿಂದಲೂ ಚುಚ್ಚಬಲ್ಲೆಯಾ? BSB BSB: Can you fill his hide with harpoons or his head with fishing spears?
8 ULB ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ. BSB BSB: If you lay a hand on him, you will remember the battle and never repeat it!
9 ULB ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯಲು ಬಂದವನು ನೋಡಿದ ಮಾತ್ರಕ್ಕೆ ಬಿದ್ದು ಹೋಗುವನು. BSB BSB: Surely hope of overcoming him is false. Is not the sight of him overwhelming?
10 ULB ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ; ಹೀಗಿರಲು ನನ್ನ ಮುಂದೆ ನಿಲ್ಲಬಲ್ಲವರು ಯಾರು? BSB BSB: No one is so fierce as to rouse Leviathan. Then who is able to stand against Me?
11 ULB ನಾನು ಸಾಲ ತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ. BSB BSB: Who has given to Me that I should repay him? Everything under heaven is Mine.
12 ULB ನಾನು ಅದರ ಅಂಗಗಳನ್ನೂ ಶಕ್ತಿವಿಧಾನವನ್ನೂ ಸೊಗಸಾದ ಜೋಡಣೆಯನ್ನೂ ವರ್ಣಿಸದೆ ಸುಮ್ಮನಿರಲಾರೆನು. BSB BSB: I cannot keep silent about his limbs, his power and graceful form.
13 ULB ಅದರ ಹೊರಕವಚವನ್ನು ಯಾರು ತೆಗೆಯುವರು? ಜೋಡು ದವಡೆಗಳೊಳಗೆ ಪ್ರವೇಶಿಸುವವರು ಯಾರು? BSB BSB: Who can strip off his outer coat? Who can approach him with a bridle?
14 ULB ಮುಖದ ಕದಗಳನ್ನು ಯಾರು ತೆರೆದಾರು? ಭಯವು ಅದರ ಹಲ್ಲುಗಳನ್ನು ಆವರಿಸಿಕೊಂಡಿದೆ. BSB BSB: Who can open his jaws, ringed by his fearsome teeth?
15 ULB ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಆಸ್ಪದವಾಗಿದೆ. ಅವು ಬಿಗಿದು ಮುದ್ರಿಸಲ್ಪಟ್ಟಿವೆ. BSB BSB: His rows of scales are his pride, tightly sealed together.
16 ULB ಗಾಳಿಯು ಕೂಡ ನುಗ್ಗದಂತೆ ಅವು ಒಂದಕ್ಕೊಂದು ಹೊಂದಿಕೊಂಡಿವೆ. BSB BSB: One scale is so near to another that no air can pass between them.
17 ULB ಪರಸ್ಪರ ಅಂಟಿಕೊಂಡು ವಿಂಗಡಿಸದ ಹಾಗೆ ಹಿಡಿದುಕೊಂಡಿವೆ. BSB BSB: They are joined to one another; they clasp and cannot be separated.
18 ULB ಅದರ ಸೀನಿನ ತುಂತುರುಗಳು ತಳತಳಿಸುವವು, ಕಣ್ಣು ಅರುಣನೇತ್ರಕ್ಕೆ ಸಮಾನವಾಗಿದೆ. BSB BSB: His snorting flashes with light, and his eyes are like the rays of dawn.
19 ULB ಬಾಯೊಳಗಿಂದ ಕೊಳ್ಳಿಗಳು ಹೊರಡುವವು, ಬೆಂಕಿಕಿಡಿಗಳು ಹಾರುವವು. BSB BSB: Firebrands stream from his mouth; fiery sparks shoot forth!
20 ULB ಆಪುಹುಲ್ಲಿಗೆ ಬೆಂಕಿಯಿಟ್ಟು ಊದಿ ಕಾಯಿಸಿದ ಕೊಪ್ಪರಿಗೆಯಿಂದಲೋ ಎಂಬಂತೆ ಮೂಗಿನೊಳಗಿಂದ ಹೊಗೆ ಹಾಯುವುದು. BSB BSB: Smoke billows from his nostrils as from a boiling pot over burning reeds.
21 ULB ಅದರ ಉಸಿರೇ ಇದ್ದಲನ್ನು ಹೊತ್ತಿಸುವುದು, ಜ್ವಾಲೆಯು ಬಾಯಿಂದೇಳುವುದು. BSB BSB: His breath sets coals ablaze, and flames pour from his mouth.
22 ULB ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವುದು. BSB BSB: Strength resides in his neck, and dismay leaps before him.
23 ULB ಅದರ ಮಾಂಸದ ಖಂಡಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ. BSB BSB: The folds of his flesh are tightly joined; they are firm and immovable.
24 ULB ಅದರ ಹೃದಯವು ಬಂಡೆಯ ಹಾಗೂ ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ. BSB BSB: His chest is as hard as a rock, as hard as a lower millstone!
25 ULB ಅದು ಎದ್ದರೆ ಶೂರರು ಕೂಡ ಅಂಜಿ ಹೊಡೆತಗಳಿಂದ ಭಯಭ್ರಾಂತರಾಗುವರು. BSB BSB: When Leviathan rises up, the mighty are terrified; they withdraw before his thrashing.
26 ULB ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು; ಬಾಣ ಭರ್ಜಿ ಈಟಿ ಇವುಗಳೂ ವ್ಯರ್ಥವೇ. BSB BSB: The sword that reaches him has no effect, nor does the spear or dart or arrow.
27 ULB ಅದು ಕಬ್ಬಿಣವನ್ನು ಒಣಹುಲ್ಲನ್ನಾಗಿಯೂ ತಾಮ್ರವನ್ನು ಕೊಳೆತ ಮರವನ್ನಾಗಿಯೂ ಭಾವಿಸುವುದು. BSB BSB: He regards iron as straw and bronze as rotten wood.
28 ULB ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಅದಕ್ಕೆ ಹೊಟ್ಟಿನಂತಿರುವವು. BSB BSB: No arrow can make him flee; slingstones become like chaff to him.
29 ULB ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವುದು; ಬಿರ್ರನೆ ಬರುವ ಈಟಿಗೆ ನಗುವುದು. BSB BSB: A club is regarded as straw, and he laughs at the sound of the lance.
30 ULB ಅದರ ಕೆಳಭಾಗವು ಚೂಪಾದ ಬೋಕಿಗಳಾಗಿದೆ, ಅದು ಕೆಸರಿನ ಮೇಲೆ ಹಲಗೆಯ ಹಾಗೆ ನೀಡಿಕೊಂಡಿರುವುದು. BSB BSB: His undersides are jagged potsherds, spreading out the mud like a threshing sledge.
31 ULB ಜಲನಿಧಿಯನ್ನು ಹಂಡೆಯ ನೀರಿನ ಹಾಗೆ ಕುದಿಸುವುದು; ಸಮುದ್ರವನ್ನು ಕಲಕಿದ ತೈಲಪಾತ್ರೆಯಂತೆ ಮಾಡುವುದು. BSB BSB: He makes the depths seethe like a cauldron; he makes the sea like a jar of ointment.
32 ULB ಸಾಗರಕ್ಕೆ ನರೆ ಬಂತೋ ಎಂಬಂತೆ ತಾನು ಬಂದ ದಾರಿಯನ್ನು ಶುಭ್ರಗೊಳಿಸುವುದು. BSB BSB: He leaves a glistening wake behind him; one would think the deep had white hair!
33 ULB ಇದಕ್ಕೆ ಸಮಾನವಾದದ್ದು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ, ಭಯವಿಲ್ಲದೆ ಇರುವುದಕ್ಕಾಗಿ ಸೃಷ್ಟಿಸಲ್ಪಟ್ಟಿದೆ. BSB BSB: Nothing on earth is his equal—a creature devoid of fear!
34 ULB ಇದು ಪ್ರತಿಯೊಂದು ದೊಡ್ಡ ಪ್ರಾಣಿಯನ್ನೂ ದಿಟ್ಟಿಸಿ ನೋಡುವುದು, ಸೊಕ್ಕಿದ ಮೃಗಗಳಿಗೆಲ್ಲಾ ರಾಜನಾಗಿರುವುದು. BSB BSB: He looks down on all the haughty; he is king over all the proud.”
Select verses for actions: Enter goes to them and Escape comes back.