1 ULB ಆ ಮೇಲೆ ಯೋಬನು ಮತ್ತೆ ಇಂತೆಂದನು, BSB BSB: Then Job replied:
2 ULB <<ಆಹಾ, ತ್ರಾಸಿನಲ್ಲಿ ನನ್ನ ವಿಪತ್ತನ್ನು ಇಟ್ಟು; ಅದರಿಂದ ನನ್ನ ಕರಕರೆಯ ಭಾರವನ್ನು ತೂಕ ಮಾಡುವುದಾದರೆ ಎಷ್ಟೋ ಒಳ್ಳೆಯದು. BSB BSB: “If only my grief could be weighed and placed with my calamity on the scales.
3 ULB ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವುದು ಎಂದು ದುಡುಕಿನಿಂದ ಮಾತನಾಡಿದ್ದೇನೆ. BSB BSB: For then it would outweigh the sand of the seas—no wonder my words have been rash.
4 ULB ಸರ್ವಶಕ್ತನಾದ ದೇವರ ಬಾಣಗಳು ನನ್ನಲ್ಲಿ ನಾಟಿರುತ್ತವೆ, ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರುದ್ಧವಾಗಿ ವ್ಯೂಹಕಟ್ಟಿವೆ. BSB BSB: For the arrows of the Almighty have pierced me; my spirit drinks in their poison; the terrors of God are arrayed against me.
5 ULB ಕಾಡುಕತ್ತೆಗೆ ಹುಲ್ಲಿರಲು ಅರಚೀತೇ? ಎತ್ತಿಗೆ ಮೇವಿರಲು ಕೂಗೀತೇ? BSB BSB: Does a wild donkey bray over fresh grass, or an ox low over its fodder?
6 ULB ಸಪ್ಪೆಯನ್ನು ಉಪ್ಪಿಲ್ಲದೆ ತಿನ್ನಬಹುದೇ? ಮೊಟ್ಟೆಯಲ್ಲಿರುವ ಲೋಳೆಯು ರುಚಿಯೇ? BSB BSB: Is tasteless food eaten without salt, or is there flavor in the white of an egg?
7 ULB ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು. BSB BSB: My soul refuses to touch them; they are loathsome food to me.
8 ULB ಅಯ್ಯೋ, ನನ್ನ ವಿಜ್ಞಾಪನೆಯು ನೆರವೇರುವುದಿಲ್ಲವೇ, ನಾನು ಬಯಸುವುದನ್ನು ದೇವರು ಕೊಡುವುದಿಲ್ಲವೇ? BSB BSB: If only my request were granted and God would fulfill my hope:
9 ULB ನಾನು ನಾಶವಾಗುವುದು ದೇವರಿಗೆ ಮೆಚ್ಚಿಕೆಯಾಗುವುದಾದರೆ, ತನ್ನ ಕೈ ಚಾಚಿ ನನ್ನನ್ನು ಸಂಹರಿಸಿದರೆ ಒಳ್ಳೆಯದು. BSB BSB: that God would be willing to crush me, to unleash His hand and cut me off!
10 ULB ಆಗ ನಾನು ಆದರಣೆ ಹೊಂದಿ ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು. ಪರಿಶುದ್ಧ ದೇವರ ಆಜ್ಞೆಗಳನ್ನು ನಾನು ತೊರೆದುಬಿಟ್ಟವನಲ್ಲ. BSB BSB: It still brings me comfort, and joy through unrelenting pain, that I have not denied the words of the Holy One.
11 ULB ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವುದೇಕೆ? BSB BSB: What strength do I have, that I should still hope? What is my future, that I should be patient?
12 ULB ನನ್ನ ಬಲವು ಕಲ್ಲಿನ ಬಲವೋ? ಅಥವಾ ನನ್ನ ಶರೀರವು ತಾಮ್ರದ್ದೋ? BSB BSB: Is my strength like that of stone, or my flesh made of bronze?
13 ULB ನನ್ನಲ್ಲಿ ಏನೂ ಸಹಾಯವಿಲ್ಲವಲ್ಲಾ, ನನ್ನ ಸಾಮರ್ಥ್ಯವು ತೊಲಗಿಹೋಗಿದೆ. BSB BSB: Is there any help within me now that success is driven from me?
14 ULB ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ; ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು. BSB BSB: A despairing man should have the kindness of his friend, even if he forsakes the fear of the Almighty.
15 ULB ನನ್ನ ಸಹೋದರರಾದರೋ ತೊರೆಯ ಹಾಗೂ, ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ. BSB BSB: But my brothers are as faithless as wadis, as seasonal streams that overflow,
16 ULB ಹಿಮವು ಅಡಗಿರುವ ಪ್ರವಾಹಗಳು, ಮಂಜುಗಡ್ಡೆಯಿಂದ ಕೂಡಿ ಕಪ್ಪಾಗಿರುವವು. BSB BSB: darkened because of the ice and the inflow of melting snow,
17 ULB ಬೇಸಿಗೆ ಬರುತ್ತಲೇ ಮಾಯವಾಗುವವು, ಸೆಕೆಯುಂಟಾದಾಗ ಅವು ಬತ್ತಿ ಕಾಣಿಸದೆ ಹೋಗುವವು. BSB BSB: but ceasing in the dry season and vanishing from their channels in the heat.
18 ULB ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣಮಾಡುವ ವರ್ತಕರ ಗುಂಪುಗಳು ಓರೆಯಾಗಿ, ಮರುಭೂಮಿಗೆ ತಿರುಗಿ ನಾಶವಾಗುತ್ತವೆ. BSB BSB: Caravans turn aside from their routes; they go into the wasteland and perish.
19 ULB ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು. BSB BSB: The caravans of Tema look for water; the travelers of Sheba hope to find it.
20 ULB ಅಲ್ಲಿಗೆ ಸೇರಿ ಆಶಾಭಂಗಪಟ್ಟರು, ನಂಬಿದಷ್ಟೂ ನಿರೀಕ್ಷೆಗೆಟ್ಟರು. BSB BSB: They are confounded because they had hoped; their arrival brings disappointment.
21 ULB ಈಗ ನೀವು ಹಾಗೆಯೇ ಇದ್ದೀರಿ. (ನನ್ನ) ವಿಪತ್ತನ್ನು ಕಂಡ ಕೂಡಲೆ ಹೆದರಿದಿರಿ. BSB BSB: For now you are of no help; you see terror, and you are afraid.
22 ULB ನನ್ನ ಬಿನ್ನಹವೇನು? <ನನಗೆ ದಾನಮಾಡಿರಿ> ಎಂದು ಬಿನ್ನವಿಸಿದೆನೋ? ನಿಮ್ಮ ಆಸ್ತಿಯಿಂದ, <ನನಗಾಗಿ ಲಂಚಕೊಡಿರಿ> ಎಂದೆನೋ? BSB BSB: Have I ever said, ‘Give me something; offer me a bribe from your wealth;
23 ULB ವಿರೋಧಿಯ ಕೈಯಿಂದ, <ನನ್ನನ್ನು ರಕ್ಷಿಸಿರಿ> ಎಂದು ಕೇಳಿಕೊಂಡೆನೋ? ಬಲಾತ್ಕರಿಸುವವರಿಂದ, <ನನ್ನನ್ನು ವಿಮೋಚಿಸಿರಿ> ಎಂದು ಬೇಡಿಕೊಂಡೆನೋ? BSB BSB: deliver me from the hand of the enemy; redeem me from the grasp of the ruthless’?
24 ULB ನನಗೆ ಉಪದೇಶಮಾಡಿ ನನ್ನ ತಪ್ಪನ್ನು ನನಗೆ ತಿಳಿಯಪಡಿಸಿರಿ, ನಾನು ಮೌನದಿಂದಿರುವೆನು. BSB BSB: Teach me, and I will be silent. Help me understand how I have erred.
25 ULB ನೀತಿಯ ನುಡಿಗಳು ಎಷ್ಟೋ ಖಂಡಿತವಾಗಿವೆ, ಆದರೆ ನಿಮ್ಮ ಖಂಡನೆಯು ನಿರಾರ್ಥಕ? BSB BSB: How painful are honest words! But what does your argument prove?
26 ULB ಬರೀ ಮಾತುಗಳಿಂದ ಖಂಡಿಸಬೇಕೆನ್ನುವಿರೋ? ದೆಸೆಗೆಟ್ಟವನ ಮಾತುಗಳು ಗಾಳಿಗೆ ಹೋಗತಕ್ಕವುಗಳಲ್ಲವೇ? BSB BSB: Do you intend to correct my words, and treat as wind my cry of despair?
27 ULB ನೀವು ಚೀಟಿಹಾಕಿ ಅನಾಥನನ್ನು ಕೊಂಡುಕೊಳ್ಳುವವರು; ನಿಮ್ಮ ಸ್ನೇಹಿತನನ್ನು ಮಾರಿಬಿಡುತ್ತೀರಿ. BSB BSB: You would even cast lots for an orphan and barter away your friend.
28 ULB ಆದುದರಿಂದ ಈಗ ದಯಮಾಡಿ ನನ್ನನ್ನು ನೋಡಿರಿ, ನಿಮ್ಮ ಮುಖದೆದುರಿಗೆ ನಾನು ಸುಳ್ಳಾಡುವೆನೋ? BSB BSB: But now, please look at me. Would I lie to your face?
29 ULB ದಯವಿಟ್ಟು ನನ್ನ ವಿಚಾರಣೆಗೆ ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆ ಮಾಡಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು. BSB BSB: Reconsider; do not be unjust. Reconsider, for my righteousness is at stake.
30 ULB ರುಚಿಗೆ ನನ್ನ ನಾಲಿಗೆಯು ತಪ್ಪುಮಾಡುತ್ತದೋ? ಸತ್ಯಾಸತ್ಯಗಳ, ನ್ಯಾಯಾನ್ಯಾಯಗಳನ್ನು ವಿವೇಚಿಸುವ ಸಾಮರ್ಥ್ಯ ನನಗಿಲ್ಲವೇ? BSB BSB: Is there iniquity on my tongue? Can my mouth not discern malice?
Select verses for actions: Enter goes to them and Escape comes back.