1 ULB ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ. BSB BSB: “Is not man consigned to labor on earth? Are not his days like those of a hired hand?
2 ULB ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ. BSB BSB: Like a slave he longs for shade; like a hireling he waits for his wages.
3 ULB ಬೇಸರಿಕೆಯ ಮಾಸಗಳೂ, ಆಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ. BSB BSB: So I am allotted months of futility, and nights of misery are appointed to me.
4 ULB ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೋ ಅಂದುಕೊಳ್ಳುವೆನು; ರಾತ್ರಿಯು ಬೆಳೆಯುತ್ತಾ ಹೋಗುತ್ತದೆ. ಉದಯದವರೆಗೂ ಹೊರಹೊರಳಿ ಸಾಕಾಗುತ್ತದೆ. BSB BSB: When I lie down I think: ‘When will I get up?’ But the night drags on, and I toss and turn until dawn.
5 ULB ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ. (ಬಿರಿದ) ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ. BSB BSB: My flesh is clothed with worms and encrusted with dirt; my skin is cracked and festering.
6 ULB ನನ್ನ ದಿನಗಳು ಮಗ್ಗದ ಲಾಳಿಗಿಂತ ವೇಗವಾಗಿ, ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ. BSB BSB: My days are swifter than a weaver’s shuttle; they come to an end without hope.
7 ULB ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ. BSB BSB: Remember that my life is but a breath. My eyes will never again see happiness.
8 ULB ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವುದಿಲ್ಲ, ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವುದಿಲ್ಲ. BSB BSB: The eye that beholds me will no longer see me. You will look for me, but I will be no more.
9 ULB ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ. BSB BSB: As a cloud vanishes and is gone, so he who goes down to Sheol does not come back up.
10 ULB ಅವನು ತನ್ನ ಮನೆಗೆ ಪುನಃ ಸೇರುವುದಿಲ್ಲ, ಇನ್ನು ಮೇಲೆ ಅವನ ನಿವಾಸಕ್ಕೆ ಅವನ ಪರಿಚಯ ಇರುವುದಿಲ್ಲ. BSB BSB: He never returns to his house; his place remembers him no more.
11 ULB ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು. BSB BSB: Therefore I will not restrain my mouth; I will speak in the anguish of my spirit; I will complain in the bitterness of my soul.
12 ULB ನೀನು ನನ್ನ ಮೇಲೆ ಕಾವಲಿಡುವುದೇಕೆ? ನಾನೇನು ಸಮುದ್ರವೋ, ಸಾಗರವೆಂಬ ಘಟಸರ್ಪವೋ? BSB BSB: Am I the sea, or the monster of the deep, that You must keep me under guard?
13 ULB ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು, ನನ್ನ ಮಂಚವು ನನ್ನ ಬಾಧೆಯನ್ನು ಹೊರುವುದು ಅಂದುಕೊಳ್ಳುವಾಗ BSB BSB: When I think my bed will comfort me and my couch will ease my complaint,
14 ULB ನೀನು ಸ್ವಪ್ನಗಳಿಂದ ನನ್ನನ್ನು ಬೆದರಿಸಿ, ದರ್ಶನಗಳ ಮೂಲಕ ಭಯಪಡಿಸುವಿ. BSB BSB: then You frighten me with dreams and terrify me with visions,
15 ULB ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ. BSB BSB: so that I would prefer strangling and death over my life in this body.
16 ULB ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ. BSB BSB: I loathe my life! I would not live forever. Leave me alone, for my days are but a breath.
17 ULB ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು? BSB BSB: What is man that You should exalt him, that You should set Your heart upon him,
18 ULB ದಿನಂಪ್ರತಿ ಅವನ ಮೇಲೆ ಲಕ್ಷ್ಯವಿಟ್ಟು, ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವುದೇಕೆ? BSB BSB: that You attend to him every morning, and test him every moment?
19 ULB ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವುದಿಲ್ಲವೇ? BSB BSB: Will You never look away from me, or leave me alone to swallow my spittle?
20 ULB ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ. BSB BSB: If I have sinned, what have I done to You, O watcher of mankind? Why have You made me Your target, so that I am a burden to You?
21 ULB ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು. BSB BSB: Why do You not pardon my transgression and take away my iniquity? For soon I will lie down in the dust; You will seek me, but I will be no more.”
Select verses for actions: Enter goes to them and Escape comes back.