1 ULB ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಇಂತೆಂದನು, BSB BSB: Then Job answered:
2 ULB <<ನೀನು ಹೇಳಿದ್ದು ಸತ್ಯವೇ ಸರಿ. ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ? BSB BSB: “Yes, I know that it is so, but how can a mortal be righteous before God?
3 ULB ಆತನೊಂದಿಗೆ ವ್ಯಾಜ್ಯಮಾಡಬೇಕೆಂದು ಇಷ್ಟಪಟ್ಟರೂ, ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು. BSB BSB: If one wished to contend with God, he could not answer Him one time out of a thousand.
4 ULB ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ? BSB BSB: God is wise in heart and mighty in strength. Who has resisted Him and prospered?
5 ULB ಆತನು ಪರ್ವತಗಳನ್ನು ಅರಿಯದಂತೆ ಸರಿಸಿ ಕೋಪದಿಂದ ಅವುಗಳನ್ನು ಉರುಳಿಸುತ್ತಾನೆ. BSB BSB: He moves mountains without their knowledge and overturns them in His anger.
6 ULB ಭೂಲೋಕವನ್ನು ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ. BSB BSB: He shakes the earth from its place, so that its foundations tremble.
7 ULB ಹುಟ್ಟಬೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ. BSB BSB: He commands the sun not to shine; He seals off the stars.
8 ULB ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ. BSB BSB: He alone stretches out the heavens and treads on the waves of the sea.
9 ULB ನಕ್ಷತ್ರಮಂಡಲವನ್ನೂ, ಮೃಗಶಿರವನ್ನೂ, ಕೃತ್ತಿಕೆಯನ್ನೂ, ದಕ್ಷಿಣ ದಿಕ್ಕಿನ ನಕ್ಷತ್ರಗೃಹಗಳನ್ನೂ ನಿರ್ಮಿಸಿದವನು ಆತನೇ. BSB BSB: He is the Maker of the Bear and Orion, of the Pleiades and the constellations of the south.
10 ULB ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ. BSB BSB: He does great things beyond searching out, and wonders without number.
11 ULB ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣುವುದಿಲ್ಲ; ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವುದಿಲ್ಲ. BSB BSB: Were He to pass by me, I would not see Him; were He to move, I would not recognize Him.
12 ULB ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? <ನೀನು ಏನು ಮಾಡುತ್ತಿ?> ಎಂದು ಆತನನ್ನು ಕೇಳುವವರಾರು? BSB BSB: If He takes away, who can stop Him? Who dares to ask Him, ‘What are You doing?’
13 ULB ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ; ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲಾ. BSB BSB: God does not restrain His anger; the helpers of Rahab cower beneath Him.
14 ULB ನಾನಾದರೋ ದೇವರೊಂದಿಗೆ ವಾದಿಸಿ, ಆತನಿಗೆ ಉತ್ತರಕೊಡುವುದಕ್ಕೆ ಮತ್ತೂ ಅಶಕ್ತನು. BSB BSB: How then can I answer Him or choose my arguments against Him?
15 ULB ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು. BSB BSB: For even if I were right, I could not answer. I could only beg my Judge for mercy.
16 ULB ನಾನು ಕರೆದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ, ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ. BSB BSB: If I summoned Him and He answered me, I do not believe He would listen to my voice.
17 ULB ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ, ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ, BSB BSB: For He would crush me with a tempest and multiply my wounds without cause.
18 ULB ಉಸಿರಾಡಗೊಡಿಸದೆ ಕಹಿಯಾದ ಪದಾರ್ಥದಿಂದ ನನ್ನ ಹೊಟ್ಟೆಯನ್ನು ತುಂಬಿಸುತ್ತಾನೆ. BSB BSB: He does not let me catch my breath, but overwhelms me with bitterness.
19 ULB ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, <ಇಗೋ, ಇದ್ದೇನೆ> ಎನ್ನುವನು. ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, <ಕಾಲ ನಿಯಾಮಕರು ಯಾರು?> ಎನ್ನುವನು. BSB BSB: If it is a matter of strength, He is indeed mighty! If it is a matter of justice, who can summon Him?
20 ULB ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು. BSB BSB: Even if I were righteous, my mouth would condemn me; if I were blameless, it would declare me guilty.
21 ULB ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; ನನ್ನ ಪ್ರಾಣವನ್ನು ತಿರಸ್ಕರಿಸುತ್ತೇನೆ. BSB BSB: Though I am blameless, I have no concern for myself; I despise my own life.
22 ULB ಎಲ್ಲಾ ಒಂದೇ. ಆದಕಾರಣ <ನಾನು, ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ> ಎಂದು ಹೇಳುತ್ತಾನೆ. BSB BSB: It is all the same, and so I say, ‘He destroys both the blameless and the wicked.’
23 ULB ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು, ನಿರ್ಮಲಚಿತ್ತರು ಮನಗುಂದುವುದನ್ನು ಆತನು ನೋಡಿ ಹಾಸ್ಯಮಾಡುವನು. BSB BSB: When the scourge brings sudden death, He mocks the despair of the innocent.
24 ULB ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು? BSB BSB: The earth is given into the hand of the wicked; He blindfolds its judges. If it is not He, then who is it?
25 ULB ನನ್ನ ದಿನಗಳು ಓಟಗಾರನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ. BSB BSB: My days are swifter than a runner; they flee without seeing good.
26 ULB ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ, ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ. BSB BSB: They sweep by like boats of papyrus, like an eagle swooping down on its prey.
27 ULB ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು, ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷಿಸುವೆನೆಂದು ಮನಸ್ಸು ಮಾಡಿದರೆ, BSB BSB: If I were to say, ‘I will forget my complaint and change my expression and smile,’
28 ULB ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದು ಎಣಿಸುವುದಿಲ್ಲವೆಂದು ತಿಳಿದುಕೊಳ್ಳುತ್ತೇನೆ. BSB BSB: I would still dread all my sufferings; I know that You will not acquit me.
29 ULB ನಾನು ಅಪರಾಧಿಯೆಂದು ನಿರ್ಣಯಿಸಲ್ಪಡಬೇಕಷ್ಟೆ. ನಾನು ವ್ಯರ್ಥವಾಗಿ ಪ್ರಯಾಸಪಡುವುದೇಕೆ? BSB BSB: Since I am already found guilty, why should I labor in vain?
30 ULB ನಾನು ಹಿಮದಿಂದ ಸ್ನಾನಮಾಡಿದರೂ, ಚೌಳಿನಿಂದ ನನ್ನ ಕೈಗಳನ್ನು ತೊಳಕೊಂಡರೂ, BSB BSB: If I should wash myself with snow and cleanse my hands with lye,
31 ULB ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ, ನನ್ನ ಬಟ್ಟೆಗಳಿಗೆ ನಾನು ಅಸಹ್ಯನಾಗುವಂತೆ ಮಾಡುವಿ. BSB BSB: then You would plunge me into the pit, and even my own clothes would despise me.
32 ULB ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ? BSB BSB: For He is not a man like me, that I can answer Him, that we can take each other to court.
33 ULB ನಮ್ಮಿಬ್ಬರ ಮೇಲೆ ಕೈಯಿಡುವವನಾಗಿಯೂ, ಮಧ್ಯಸ್ಥನಾಗಿಯೂ ಇರುವ ನ್ಯಾಯಾಧಿಪತಿಯು ಯಾರೂ ಇಲ್ಲ. BSB BSB: Nor is there a mediator between us, to lay his hand upon us both.
34 ULB ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ, ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ. BSB BSB: Let Him remove His rod from me, so that His terror will no longer frighten me.
35 ULB ಹೀಗಿದ್ದರೆ ನಾನು ಭಯಪಡದೆ ಮಾತನಾಡುವೆನು; ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.>> BSB BSB: Then I would speak without fear of Him. But as it is, I am on my own.
Select verses for actions: Enter goes to them and Escape comes back.