1 ULB ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ. BSB BSB: Blow the ram’s horn in Zion; sound the alarm on My holy mountain! Let all who dwell in the land tremble, for the Day of the LORD is coming; indeed, it is near—
2 ULB ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ. BSB BSB: a day of darkness and gloom, a day of clouds and blackness. Like the dawn overspreading the mountains a great and strong army appears, such as never was of old, nor will ever be in ages to come.
3 ULB ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು. BSB BSB: Before them a fire devours, and behind them a flame scorches. The land before them is like the Garden of Eden, but behind them, it is like a desert wasteland—surely nothing will escape them.
4 ULB ಆ ಸೈನ್ಯಗಳ ಆಕಾರವು ಕುದುರೆಗಳ ಆಕಾರದ ಹಾಗೆ ಕಾಣಿಸುತ್ತದೆ; ಅವು ಸವಾರರಂತೆ ಓಡುತ್ತವೆ. BSB BSB: Their appearance is like that of horses, and they gallop like swift steeds.
5 ULB ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ. BSB BSB: With a sound like that of chariots they bound over the mountaintops, like the crackling of fire consuming stubble, like a mighty army deployed for battle.
6 ULB ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ. BSB BSB: Nations writhe in horror before them; every face turns pale.
7 ULB ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆ ಏರುತ್ತವೆ; BSB BSB: They charge like mighty men; they scale the walls like men of war. Each one marches in formation, not swerving from the course.
8 ULB ನೂಕುನುಗ್ಗಲ್ಲಿಲ್ಲದೆ ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ; ಆಯುಧಗಳ ನಡುವೆ ನುಗ್ಗುತ್ತವೆ. BSB BSB: They do not jostle one another; each proceeds in his path. They burst through the defenses, never breaking ranks.
9 ULB ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಿಂದ ಕಳ್ಳರಂತೆ ಪ್ರವೇಶಿಸುತ್ತವೆ. BSB BSB: They storm the city; they run along the wall; they climb into houses, entering through windows like thieves.
10 ULB ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ. BSB BSB: Before them the earth quakes; the heavens tremble. The sun and moon grow dark, and the stars lose their brightness.
11 ULB ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು? BSB BSB: The LORD raises His voice in the presence of His army. Indeed, His camp is very large, for mighty are those who obey His command. For the Day of the LORD is great and very dreadful. Who can endure it?
12 ULB ಯೆಹೋವನು ಹೀಗೆ ಹೇಳುತ್ತಾನೆ, <<ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.>> BSB BSB: “Yet even now,” declares the LORD, “return to Me with all your heart, with fasting, weeping, and mourning.”
13 ULB ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು. BSB BSB: So rend your hearts and not your garments, and return to the LORD your God. For He is gracious and compassionate, slow to anger, abounding in loving devotion. And He relents from sending disaster.
14 ULB ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು. BSB BSB: Who knows? He may turn and relent and leave a blessing behind Him—grain and drink offerings for the LORD your God.
15 ULB ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ, ಉಪವಾಸ ದಿನವನ್ನು ಗೊತ್ತುಮಾಡಿರಿ, ಪವಿತ್ರ ಸಭೆಯನ್ನು ಕರೆಯಿರಿ. BSB BSB: Blow the ram’s horn in Zion, consecrate a fast, proclaim a sacred assembly.
16 ULB ಜನರನ್ನು ಒಟ್ಟುಗೂಡಿಸಿರಿ, ಪವಿತ್ರ ಸಭೆಯನ್ನು ಏರ್ಪಡಿಸಿರಿ. ಹಿರಿಯರನ್ನು ಕೂಡಿಸಿರಿ, ಮಕ್ಕಳನ್ನು ಸೇರಿಸಿರಿ, ಮೊಲೆಕೂಸುಗಳನ್ನು ಸೇರಿಸಿರಿ. ಮದುಮಗನು ತನ್ನ ಕೊಠಡಿಯಿಂದ ಹೊರಟುಬರಲಿ, ವಧುವು ತನ್ನ ಕಲ್ಯಾಣಗೃಹದಿಂದ ಹೊರಟುಬರಲಿ. BSB BSB: Gather the people, sanctify the congregation, assemble the aged, gather the children, even those nursing at the breast. Let the bridegroom leave his room, and the bride her chamber.
17 ULB ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, <<ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. <ಅವರ ದೇವರು ಎಲ್ಲಿ?> ಎಂದು ಅವರು ಏಕೆ ನಿಂದಿಸಬೇಕು.>> BSB BSB: Let the priests who minister before the LORD weep between the portico and the altar, saying, “Spare Your people, O LORD, and do not make Your heritage a reproach, an object of scorn among the nations. Why should they say among the peoples, ‘Where is their God?’”
18 ULB ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ, BSB BSB: Then the LORD became jealous for His land, and He spared His people.
19 ULB ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: <<ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ. BSB BSB: And the LORD answered His people: “Behold, I will send you grain, new wine, and oil, and by them you will be satisfied. I will never again make you a reproach among the nations.
20 ULB ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ. BSB BSB: The northern army I will drive away from you, banishing it to a barren and desolate land, its front ranks into the Eastern Sea, and its rear guard into the Western Sea. And its stench will rise; its foul odor will ascend. For He has done great things.
21 ULB ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು, ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ. BSB BSB: Do not be afraid, O land; rejoice and be glad, for the LORD has done great things.
22 ULB ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು. BSB BSB: Do not be afraid, O beasts of the field, for the open pastures have turned green, the trees bear their fruit, and the fig tree and vine yield their best.
23 ULB ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು. BSB BSB: Be glad, O children of Zion, and rejoice in the LORD your God, for He has given you the autumn rains for your vindication. He sends you showers, both autumn and spring rains, as before.
24 ULB ಕಣಜಗಳಲ್ಲಿ ಗೋದಿಯು ರಾಶಿರಾಶಿಯಾಗಿರುವುದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು. BSB BSB: The threshing floors will be full of grain, and the vats will overflow with new wine and oil.
25 ULB ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು. BSB BSB: I will repay you for the years eaten by locusts—the swarming locust, the young locust, the destroying locust, and the devouring locust—My great army that I sent against you.
26 ULB ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು. BSB BSB: You will have plenty to eat, until you are satisfied. You will praise the name of the LORD your God, who has worked wonders for you. My people will never again be put to shame.
27 ULB ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು. BSB BSB: Then you will know that I am present in Israel and that I am the LORD your God, and there is no other. My people will never again be put to shame.
28 ULB ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು. BSB BSB: And afterward, I will pour out My Spirit on all people. Your sons and daughters will prophesy, your old men will dream dreams, your young men will see visions.
29 ULB ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು. BSB BSB: Even on My menservants and maidservants, I will pour out My Spirit in those days.
30 ULB ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು. BSB BSB: I will show wonders in the heavens and on the earth, blood and fire and columns of smoke.
31 ULB ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. BSB BSB: The sun will be turned to darkness and the moon to blood before the coming of the great and awesome Day of the LORD.
32 ULB ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.>> BSB BSB: And everyone who calls on the name of the LORD will be saved; for on Mount Zion and in Jerusalem there will be deliverance, as the LORD has promised, among the remnant called by the LORD.