1 ULB ಇಗೋ ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ, ನಾನು ಯೆಹೂದದ ಮತ್ತು ಯೆರೂಸಲೇಮಿನ ಸಂಪತ್ತನ್ನು ಪುನಃಸ್ಥಾಪಿಸುವಾಗ, BSB BSB: “Yes, in those days and at that time, when I restore Judah and Jerusalem from captivity,
2 ULB ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು. BSB BSB: I will gather all the nations and bring them down to the Valley of Jehoshaphat. There I will enter into judgment against them concerning My people, My inheritance, Israel, whom they have scattered among the nations as they divided up My land.
3 ULB ಹೌದು ನನ್ನ ಜನರಿಗಾಗಿ ಚೀಟುಹಾಕಿ, ವೇಶ್ಯ ವೃತ್ತಿಗೆ ತಮ್ಮ ಗಂಡು ಮಕ್ಕಳನ್ನು ಮಾರಾಟ ಮಾಡಿ, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕೆ ಬದಲು ಮಾಡಿದ್ದಾರೆ. BSB BSB: They cast lots for My people; they bartered a boy for a prostitute and sold a girl for wine to drink.
4 ULB ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು. BSB BSB: Now what do you have against Me, O Tyre, Sidon, and all the regions of Philistia? Are you rendering against Me a recompense? If you retaliate against Me, I will swiftly and speedily return your recompense upon your heads.
5 ULB ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, ನನ್ನ ಅಮೂಲ್ಯವಾದ ವಸ್ತ್ರಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ. BSB BSB: For you took My silver and gold and carried off My finest treasures to your temples.
6 ULB ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ. ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ. BSB BSB: You sold the people of Judah and Jerusalem to the Greeks, to send them far from their homeland.
7 ULB ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟು ಬರುವಂತೆ ನಾನು ಅವರನ್ನು ಹುರಿದುಂಬಿಸಿ, ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು. BSB BSB: Behold, I will rouse them from the places to which you sold them; I will return your recompense upon your heads.
8 ULB ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು, ಯೆಹೂದ್ಯರಿಗೆ ಮಾರುವೆನು. ಅವರು ಆ ಮಕ್ಕಳನ್ನು ದೂರದ ಜನಾಂಗವಾದ, ಶೆಬದವರಿಗೆ ಮಾರಿಬಿಡುವರು. ಯೆಹೋವನೇ ಇದನ್ನು ನುಡಿದಿದ್ದಾನೆ. BSB BSB: I will sell your sons and daughters into the hands of the people of Judah, and they will sell them to the Sabeans—to a distant nation.” Indeed, the LORD has spoken.
9 ULB ಎಲ್ಲಾ ಜನರಿಗೆ ಹೀಗೆ ಪ್ರಕಟಿಸಿರಿ: ಜನಾಂಗಗಳೇ ಯುದ್ಧಸನ್ನದ್ಧರಾಗಿರಿ, ಶೂರರನ್ನು ಎಚ್ಚರಪಡಿಸಿರಿ, ಶೂರರು ಒಟ್ಟುಗೂಡಲಿ, ಶೂರರೆಲ್ಲರೂ ಯುದ್ಧಕ್ಕೆ ಹೊರಡಲಿ. BSB BSB: Proclaim this among the nations: “Prepare for war; rouse the mighty men; let all the men of war advance and attack!
10 ULB ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನಾಗಿ ಮಾಡಿರಿ. ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ. ಬಲಹೀನನು, <<ನಾನು ಶೂರನು>> ಎಂದು ಹೇಳಲಿ. BSB BSB: Beat your plowshares into swords and your pruning hooks into spears. Let the weak say, ‘I am strong!’
11 ULB ಸುತ್ತಮುತ್ತಲಿನ ಜನಾಂಗಗಳೇ, ತ್ವರೆಯಾಗಿ ಕೂಡಿಬನ್ನಿರಿ, ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. ಯೆಹೋವನೇ, ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು. BSB BSB: Come quickly, all you surrounding nations, and gather yourselves. Bring down Your mighty ones, O LORD.
12 ULB ಜನಾಂಗಗಳು ಎಚ್ಚೆತ್ತುಕೊಂಡು, ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. ಅಲ್ಲಿ ನಾನು ಸುತ್ತಣ ಜನಾಂಗಗಳಿಗೆಲ್ಲಾ, ನ್ಯಾಯತೀರಿಸಲು ಆಸೀನನಾಗುವೆನು. BSB BSB: Let the nations be roused and advance to the Valley of Jehoshaphat, for there I will sit down to judge all the nations on every side.
13 ULB ಯೆಹೋವನ ಸೈನ್ಯದವರೇ, ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ. ಬನ್ನಿರಿ, ದ್ರಾಕ್ಷಿಯನ್ನು ತುಳಿಯಿರಿ, ದ್ರಾಕ್ಷಿಯ ಅಲೆಯು ತುಂಬಿದೆ. ತೊಟ್ಟಿಗಳು ತುಂಬಿ ತುಳುಕುತ್ತಿವೆ. ಜನಾಂಗಗಳ ದುಷ್ಟತನವು ವಿಪರೀತವಾಗಿದೆ. BSB BSB: Swing the sickle, for the harvest is ripe. Come, trample the grapes, for the winepress is full; the wine vats overflow because their wickedness is great.
14 ULB ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ. BSB BSB: Multitudes, multitudes in the valley of decision! For the Day of the LORD is near in the valley of decision.
15 ULB ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ. BSB BSB: The sun and moon will grow dark, and the stars will no longer shine.
16 ULB ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು. BSB BSB: The LORD will roar from Zion and raise His voice from Jerusalem; heaven and earth will tremble. But the LORD will be a refuge for His people, a stronghold for the people of Israel.
17 ULB ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ. BSB BSB: Then you will know that I am the LORD your God, who dwells in Zion, My holy mountain. Jerusalem will be holy, never again to be overrun by foreigners.
18 ULB ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು. BSB BSB: And in that day the mountains will drip with sweet wine, and the hills will flow with milk. All the streams of Judah will run with water, and a spring will flow from the house of the LORD to water the Valley of Acacias.
19 ULB ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ. BSB BSB: Egypt will become desolate, and Edom a desert wasteland, because of the violence done to the people of Judah, in whose land they shed innocent blood.
20 ULB ಆದರೆ ಯೆಹೂದವು ಸದಾ ಜನಭರಿತವಾಗಿರುವುದು, ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು. BSB BSB: But Judah will be inhabited forever, and Jerusalem from generation to generation.
21 ULB ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಯೆಹೋವನು ಚೀಯೋನಿನಲ್ಲಿ ವಾಸವಾಗಿರುತ್ತಾನೆ. BSB BSB: For I will avenge their blood, which I have not yet avenged.” For the LORD dwells in Zion.