1 ULB ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು. BSB BSB: Six days before the Passover, Jesus came to Bethany, the hometown of Lazarus, whom He had raised from the dead.
2 ULB ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು. BSB BSB: So they hosted a dinner for Jesus there. Martha served, and Lazarus was among those reclining at the table with Him.
3 ULB ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಚ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು. BSB BSB: Then Mary took about a pint of expensive perfume, made of pure nard, and she anointed Jesus’ feet and wiped them with her hair. And the house was filled with the fragrance of the perfume.
4 ULB ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು, BSB BSB: But one of His disciples, Judas Iscariot, who was going to betray Him, asked,
5 ULB <<ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?>> ಎಂದನು. BSB BSB: “Why wasn’t this perfume sold for three hundred denarii and the money given to the poor?”
6 ULB ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು. BSB BSB: Judas did not say this because he cared about the poor, but because he was a thief. As keeper of the money bag, he used to take from what was put into it.
7 ULB ಆಗ ಯೇಸುವು, <<ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ. BSB BSB: “Leave her alone,” Jesus replied. “She has kept this perfume in preparation for the day of My burial.
8 ULB ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ>> ಎಂದನು. BSB BSB: The poor you will always have with you, but you will not always have Me.”
9 ULB ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು. BSB BSB: Meanwhile a large crowd of Jews learned that Jesus was there. And they came not only because of Him, but also to see Lazarus, whom He had raised from the dead.
10 ULB ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು. BSB BSB: So the chief priests made plans to kill Lazarus as well,
11 ULB ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. BSB BSB: for on account of him many of the Jews were deserting them and believing in Jesus.
12 ULB ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ BSB BSB: The next day the great crowd that had come to the feast heard that Jesus was coming to Jerusalem.
13 ULB ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, <<ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ>> ಎಂದು ಆರ್ಭಟಿಸಿದರು. BSB BSB: They took palm branches and went out to meet Him, shouting: “Hosanna!” “Blessed is He who comes in the name of the Lord!” “Blessed is the King of Israel!”
14 ULB ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು. BSB BSB: Finding a young donkey, Jesus sat on it, as it is written:
15 ULB ಹೀಗೆ, <<ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ>> ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. BSB BSB: “Do not be afraid, O Daughter of Zion. See, your King is coming, seated on the colt of a donkey.”
16 ULB ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು. BSB BSB: At first His disciples did not understand these things, but after Jesus was glorified they remembered what had been done to Him, and they realized that these very things had also been written about Him.
17 ULB ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು. BSB BSB: Meanwhile, many people who had been with Jesus when He called Lazarus from the tomb and raised him from the dead continued to testify.
18 ULB ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು. BSB BSB: That is also why the crowd went out to meet Him, because they heard that He had performed this sign.
19 ULB ಹೀಗಿರಲಾಗಿ ಫರಿಸಾಯರು, <<ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ>> ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. BSB BSB: Then the Pharisees said to one another, “You can see that this is doing you no good. Look how the whole world has gone after Him!”
20 ULB ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು. BSB BSB: Now there were some Greeks among those who went up to worship at the feast.
21 ULB ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, <<ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು>> ಅವನನ್ನು ಬೇಡಿಕೊಂಡರು. BSB BSB: They came to Philip, who was from Bethsaida in Galilee, and requested of him, “Sir, we want to see Jesus.”
22 ULB ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು. BSB BSB: Philip relayed this appeal to Andrew, and both of them went and told Jesus.
23 ULB ಆಗ ಯೇಸು ಅವರಿಗೆ, <<ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ. BSB BSB: But Jesus replied, “The hour has come for the Son of Man to be glorified.
24 ULB ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು BSB BSB: Truly, truly, I tell you, unless a kernel of wheat falls to the ground and dies, it remains only a seed. But if it dies, it bears much fruit.
26 ULB ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು. BSB BSB: If anyone serves Me, he must follow Me; and where I am, My servant will be as well. If anyone serves Me, the Father will honor him.
27 ULB ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? <ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.> ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ? BSB BSB: Now My soul is troubled, and what shall I say? ‘Father, save Me from this hour’? No, it is for this purpose that I have come to this hour.
28 ULB ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ>> ಎಂದನು. ಅದಕ್ಕೆ, <<ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು>> ಎಂಬ ಸ್ವರವು ಪರಲೋಕದಿಂದ ಬಂದಿತು. BSB BSB: Father, glorify Your name!” Then a voice came from heaven: “I have glorified it, and I will glorify it again.”
29 ULB ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, <<ಗುಡುಗಿತು>> ಎಂದರು. ಇನ್ನು ಕೆಲವರು <<ದೇವದೂತನು ಈತನ ಸಂಗಡ ಮಾತನಾಡಿದನು>> ಎಂದರು. BSB BSB: The crowd standing there heard it and said that it had thundered. Others said that an angel had spoken to Him.
30 ULB ಯೇಸು ಅವರಿಗೆ, <<ಈ ಸ್ವರವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು. BSB BSB: In response, Jesus said, “This voice was not for My benefit, but yours.
31 ULB ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು BSB BSB: Now judgment is upon this world; now the prince of this world will be cast out.
32 ULB ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು>> ಎಂದು ಹೇಳಿದನು. BSB BSB: And I, when I am lifted up from the earth, will draw everyone to Myself.”
33 ULB ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು. BSB BSB: He said this to indicate the kind of death He was going to die.
34 ULB ಅದಕ್ಕೆ ಆ ಜನರು, <<ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?>> ಎಂದರು. BSB BSB: The crowd replied, “We have heard from the Law that the Christ will remain forever. So how can You say that the Son of Man must be lifted up? Who is this Son of Man?”
35 ULB ಆಗ ಯೇಸು ಅವರಿಗೆ, <<ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು. BSB BSB: Then Jesus told them, “For a little while longer, the Light will be among you. Walk while you have the Light, so that darkness will not overtake you. The one who walks in the darkness does not know where he is going.
36 ULB ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ>> ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು. BSB BSB: While you have the Light, believe in the Light, so that you may become sons of light.” After Jesus had spoken these things, He went away and was hidden from them.
37 ULB ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ. BSB BSB: Although Jesus had performed so many signs in their presence, they still did not believe in Him.
38 ULB ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನಂದರೆ, <<ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?>> ಎಂಬುದೇ. BSB BSB: This was to fulfill the word of Isaiah the prophet: “Lord, who has believed our message? And to whom has the arm of the Lord been revealed?”
39 ULB ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನಂದರೆ, BSB BSB: For this reason they were unable to believe. For again, Isaiah says:
40 ULB <<ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು>> ಎಂಬುದೇ. BSB BSB: “He has blinded their eyes and hardened their hearts, so that they cannot see with their eyes, and understand with their hearts, and turn, and I would heal them.”
41 ULB ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು. BSB BSB: Isaiah said these things because he saw Jesus’ glory and spoke about Him.
42 ULB ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ. BSB BSB: Nevertheless, many of the leaders believed in Him. But because of the Pharisees they did not confess Him, for fear that they would be put out of the synagogue.
43 ULB ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು. BSB BSB: For they loved praise from men more than praise from God.
44 ULB ಯೇಸು ಕೂಗಿ ಹೇಳಿದ ಮಾತೇನಂದರೆ, <<ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ. BSB BSB: Then Jesus cried out, “Whoever believes in Me does not believe in Me alone, but in the One who sent Me.
45 ULB ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ. BSB BSB: And whoever sees Me sees the One who sent Me.
46 ULB ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ. BSB BSB: I have come into the world as a light, so that no one who believes in Me should remain in darkness.
47 ULB ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ. BSB BSB: As for anyone who hears My words and does not keep them, I do not judge him. For I have not come to judge the world, but to save the world.
48 ULB ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವವನು ಒಬ್ಬನಿದ್ದಾನೆ. ಅದು ನಾನು ಆಡುವ ಮಾತುಗಳೇ ಕಡೆಯ ದಿನದಲ್ಲಿ ಅವನಿಗೆ ತೀರ್ಪಾಗಿರುವುದು. BSB BSB: There is a judge for the one who rejects Me and does not receive My words: The word that I have spoken will judge him on the last day.
49 ULB ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು,ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ. BSB BSB: I have not spoken on My own, but the Father who sent Me has commanded Me what to say and how to say it.
50 ULB ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ>> ಎಂದನು. BSB BSB: And I know that His command leads to eternal life. So I speak exactly what the Father has told Me to say.”
Select verses for actions: Enter goes to them and Escape comes back.