1 ULB ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು. BSB BSB: It was now just before the Passover Feast, and Jesus knew that His hour had come to leave this world and return to the Father. Having loved His own who were in the world, He loved them to the very end.
2 ULB ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು. BSB BSB: The evening meal was underway, and the devil had already put into the heart of Judas, the son of Simon Iscariot, to betray Jesus.
3 ULB ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು. BSB BSB: Jesus knew that the Father had delivered all things into His hands, and that He had come from God and was returning to God.
4 ULB ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು. BSB BSB: So He got up from the supper, laid aside His outer garments, and wrapped a towel around His waist.
5 ULB ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು. BSB BSB: After that, He poured water into a basin and began to wash the disciples’ feet and dry them with the towel that was around Him.
6 ULB ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, <<ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?>> ಎಂದು ಹೇಳಿದನು. BSB BSB: He came to Simon Peter, who asked Him, “Lord, are You going to wash my feet?”
7 ULB ಅದಕ್ಕೆ ಯೇಸು <<ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು>> ಎಂದನು. BSB BSB: Jesus replied, “You do not realize now what I am doing, but later you will understand.”
8 ULB ಪೇತ್ರನು ಆತನಿಗೆ, <<ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು>> ಎಂದು ಹೇಳಿದ್ದಕ್ಕೆ, ಯೇಸು, <<ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ>> ಎಂದನು. BSB BSB: “Never shall You wash my feet!” Peter told Him. Jesus answered, “Unless I wash you, you have no part with Me.”
9 ULB ಸೀಮೋನ ಪೇತ್ರನು, <<ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ>> ಎಂದನು. BSB BSB: “Then, Lord,” Simon Peter replied, “not only my feet, but my hands and my head as well!”
10 ULB ಯೇಸು ಅವನಿಗೆ, <<ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ>> ಎಂದು ಹೇಳಿದನು. BSB BSB: Jesus told him, “Whoever has already bathed needs only to wash his feet, and he will be completely clean. And you are clean, though not all of you.”
11 ULB ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, <<ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ>> ಎಂದು ಹೇಳಿದ್ದನು. BSB BSB: For He knew who would betray Him. That is why He said, “Not all of you are clean.”
12 ULB ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, <<ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ? BSB BSB: When Jesus had washed their feet and put on His outer garments, He reclined with them again and asked, “Do you know what I have done for you?
13 ULB ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ. BSB BSB: You call Me Teacher and Lord, and rightly so, because I am.
14 ULB ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು. BSB BSB: So if I, your Lord and Teacher, have washed your feet, you also should wash one another’s feet.
15 ULB ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ. BSB BSB: I have set you an example so that you should do as I have done for you.
16 ULB ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ. BSB BSB: Truly, truly, I tell you, no servant is greater than his master, nor is a messenger greater than the one who sent him.
17 ULB ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು. BSB BSB: If you know these things, you will be blessed if you do them.
18 ULB ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ. BSB BSB: I am not speaking about all of you; I know whom I have chosen. But this is to fulfill the Scripture: ‘The one who shares My bread has lifted up his heel against Me.’
19 ULB ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ. BSB BSB: I am telling you now before it happens, so that when it comes to pass, you will believe that I am He.
20 ULB ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.>> BSB BSB: Truly, truly, I tell you, whoever receives the one I send receives Me, and whoever receives Me receives the One who sent Me.”
21 ULB ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, <<ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ>> ಎಂದು ಸಾಕ್ಷಿ ಹೇಳಿದನು. BSB BSB: After Jesus had said this, He became troubled in spirit and testified, “Truly, truly, I tell you, one of you will betray Me.”
22 ULB ಆಗ ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಬಿಲಿಗೊಂಡು ಒಬ್ಬರನೊಬ್ಬರು ನೋಡಿಕೊಂಡರು. BSB BSB: The disciples looked at one another, perplexed as to which of them He meant.
23 ULB ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು. BSB BSB: One of His disciples, the one whom Jesus loved, was reclining at His side.
24 ULB ಅವನಿಗೆ ಸೀಮೋನ ಪೇತ್ರನು ಸನ್ನೆಮಾಡಿ, <<ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು>> ಅಂದನು. BSB BSB: So Simon Peter motioned to him to ask Jesus which one He was talking about.
25 ULB ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, <<ಕರ್ತನೇ, ಅವನು ಯಾರು?>> ಎಂದು ಆತನನ್ನು ಕೇಳಿದನು. BSB BSB: Leaning back against Jesus, he asked, “Lord, who is it?”
26 ULB ಅದಕ್ಕೆ ಯೇಸು, <<ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!>> ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು. BSB BSB: Jesus answered, “It is the one to whom I give this morsel after I have dipped it.” Then He dipped the morsel and gave it to Judas son of Simon Iscariot.
27 ULB ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, <<ನೀನು ಮಾಡುವುದನ್ನು ಬೇಗನೇ ಮಾಡು>> ಎಂದು ಹೇಳಿದನು. BSB BSB: And when Judas had taken the morsel, Satan entered into him. Then Jesus said to Judas, “What you are about to do, do quickly.”
28 ULB ಆದರೆ ಆತನು ಅವನಿಗೆ ಇದನ್ನು ಏಕೆ ಹೇಳಿದನೆಂದು ಊಟದ ಮೇಜಿನಲ್ಲಿ ಕುಳಿತವರಲ್ಲಿ ಯಾರಿಗೂ ತಿಳಿಯಲಿಲ್ಲ. BSB BSB: But no one at the table knew why Jesus had said this to him.
29 ULB ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ <<ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ>> ಎಂದು ಅಂದುಕೊಂಡರು. BSB BSB: Since Judas kept the money bag, some thought that Jesus was telling him to buy what was needed for the feast, or to give something to the poor.
30 ULB ಇಸ್ಕರಿಯೋತ ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಅಲ್ಲಿಂದ ಎದ್ದು ಹೊರಗೆ ಹೋದನು. ಆಗ ರಾತ್ರಿಯಾಗಿತ್ತು. BSB BSB: As soon as he had received the morsel, Judas went out into the night.
31 ULB ಅವನು ಹೊರಗೆ ಹೋದ ಮೇಲೆ ಯೇಸುವು, <<ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ. BSB BSB: When Judas had gone out, Jesus said, “Now the Son of Man is glorified, and God is glorified in Him.
32 ULB ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನು ತನ್ನಲ್ಲಿ ಮಹಿಮೆ ಪಡಿಸುವನು. ತಕ್ಷಣವೇ ಮಹಿಮೆ ಪಡಿಸುವನು. BSB BSB: If God is glorified in Him, God will also glorify the Son in Himself—and will glorify Him at once.
33 ULB ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ <ನಾನು ಹೋಗುವಲ್ಲಿಗೆ ನೀವು ಬರಲಾರಿರಿ> ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ. BSB BSB: Little children, I am with you only a little while longer. You will look for Me, and as I said to the Jews, so now I say to you: ‘Where I am going, you cannot come.’
35 ULB ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು>> ಎಂದನು. BSB BSB: By this everyone will know that you are My disciples, if you love one another.”
36 ULB ಸೀಮೋನ್ ಪೇತ್ರನು ಆತನಿಗೆ, <<ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?>> ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, <<ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ>> ಎಂದನು. BSB BSB: “Lord, where are You going?” Simon Peter asked. Jesus answered, “Where I am going, you cannot follow Me now, but you will follow later.”
37 ULB ಪೇತ್ರನು ಆತನಿಗೆ, <<ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು>> ಎಂದು ಹೇಳಿದನು. BSB BSB: “Lord,” said Peter, “why can’t I follow You now? I will lay down my life for You.”
38 ULB ಆಗ ಯೇಸು ಅವನಿಗೆ, <<ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ>> ಎಂದನು. BSB BSB: “Will you lay down your life for Me?” Jesus replied. “Truly, truly, I tell you, before the rooster crows, you will deny Me three times.
Select verses for actions: Enter goes to them and Escape comes back.