2 ULB ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ! BSB BSB: In My Father’s house are many rooms. If it were not so, would I have told you that I am going there to prepare a place for you?
3 ULB ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು. BSB BSB: And if I go and prepare a place for you, I will come back and welcome you into My presence, so that you also may be where I am.
4 ULB ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ>> ಎಂದನು. BSB BSB: You know the way to the place where I am going.”
5 ULB ತೋಮನು ಆತನಿಗೆ, <<ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?>> ಎಂದು ಕೇಳಲು, BSB BSB: “Lord,” said Thomas, “we do not know where You are going, so how can we know the way?”
7 ULB ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ>> ಎಂದು ಹೇಳಿದನು. BSB BSB: If you had known Me, you would know My Father as well. From now on you do know Him and have seen Him.”
8 ULB ಫಿಲಿಪ್ಪನು, <<ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು>> ಎಂದನು. BSB BSB: Philip said to Him, “Lord, show us the Father, and that will be enough for us.”
10 ULB ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ. BSB BSB: Do you not believe that I am in the Father and the Father is in Me? The words I say to you, I do not speak on My own. Instead, it is the Father dwelling in Me, performing His works.
11 ULB ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ. BSB BSB: Believe Me that I am in the Father and the Father is in Me—or at least believe on account of the works themselves.
12 ULB <<ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ. BSB BSB: Truly, truly, I tell you, whoever believes in Me will also do the works that I am doing. He will do even greater things than these, because I am going to the Father.
13 ULB ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು. BSB BSB: And I will do whatever you ask in My name, so that the Father may be glorified in the Son.
14 ULB ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು. BSB BSB: If you ask Me for anything in My name, I will do it.
17 ULB ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು. BSB BSB: the Spirit of truth. The world cannot receive Him, because it neither sees Him nor knows Him. But you do know Him, for He abides with you and will be in you.
18 ULB <<ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ. BSB BSB: I will not leave you as orphans; I will come to you.
19 ULB ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ. BSB BSB: In a little while the world will see Me no more, but you will see Me. Because I live, you also will live.
20 ULB ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ. BSB BSB: On that day you will know that I am in My Father, and you are in Me, and I am in you.
21 ULB ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು>> ಎಂದು ಹೇಳಿದನು. BSB BSB: Whoever has My commandments and keeps them is the one who loves Me. The one who loves Me will be loved by My Father, and I will love him and reveal Myself to him.”
22 ULB ಯೂದನು, (ಇವನು ಇಸ್ಕರಿಯೋತನಲ್ಲ) <<ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?>> ಎಂದು ಕೇಳಿದನು. BSB BSB: Judas (not Iscariot) asked Him, “Lord, why are You going to reveal Yourself to us and not to the world?”
24 ULB ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ. BSB BSB: Whoever does not love Me does not keep My words. The word that you hear is not My own, but it is from the Father who sent Me.
25 ULB <<ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ. BSB BSB: All this I have spoken to you while I am still with you.
29 ULB ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ. BSB BSB: And now I have told you before it happens, so that when it does happen, you will believe.
30 ULB ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. BSB BSB: I will not speak with you much longer, for the prince of this world is coming, and he has no claim on Me.
31 ULB ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ>> ಎಂದನು. BSB BSB: But I do exactly what the Father has commanded Me, so that the world may know that I love the Father. Get up! Let us go on from here.
Select verses for actions: Enter goes to them and Escape comes back.