1 ULB ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು. BSB BSB: After Jesus had spoken these words, He went out with His disciples across the Kidron Valley, where they entered a garden.
2 ULB ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತಿದ್ದರು. BSB BSB: Now Judas His betrayer also knew the place, because Jesus had often met there with His disciples.
3 ULB ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು. BSB BSB: So Judas brought a band of soldiers and officers from the chief priests and Pharisees. They arrived at the garden carrying lanterns, torches, and weapons.
4 ULB ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ <<ನೀವು ಯಾರನ್ನು ಹುಡುಕುತ್ತೀರಿ?>> ಎಂದು ಕೇಳಿದನು. BSB BSB: Jesus, knowing all that was coming upon Him, stepped forward and asked them, “Whom are you seeking?”
5 ULB ಅದಕ್ಕೆ ಅವರು, <<ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ>> ಎಂದರು. ಯೇಸು ಅವರಿಗೆ <<ನಾನೇ ಆತನು>> ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು. BSB BSB: “Jesus of Nazareth,” they answered. Jesus said, “I am He.” And Judas His betrayer was standing there with them.
6 ULB ಆತನು ಅವರಿಗೆ <<ನಾನೇ ಆತನು>> ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು. BSB BSB: When Jesus said, “I am He,” they drew back and fell to the ground.
7 ULB ಆಗ ಆತನು ಪುನಃ ಅವರಿಗೆ <<ನೀವು ಯಾರನ್ನು ಹುಡುಕುತ್ತೀರಿ?>> ಎಂದು ಕೇಳಲು, ಅವರು, <<ನಜರೇತಿನ ಯೇಸುವನ್ನು ಹುಡುಕುತ್ತೇವೆ>> ಎಂದರು. BSB BSB: So He asked them again, “Whom are you seeking?” “Jesus of Nazareth,” they answered.
8 ULB ಅದಕ್ಕೆ ಯೇಸು, <<ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ>> ಎಂದನು. BSB BSB: “I told you that I am He,” Jesus replied. “So if you are looking for Me, let these men go.”
9 ULB ಹೀಗೆ <<ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ>> ಎಂದು ತಾನೇ ಹೇಳಿದ ಮಾತು ನೆರವೇರಿತು. BSB BSB: This was to fulfill the word He had spoken: “I have not lost one of those You have given Me.”
10 ULB ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು. BSB BSB: Then Simon Peter drew his sword and struck the servant of the high priest, cutting off his right ear. The servant’s name was Malchus.
11 ULB ಆಗ ಯೇಸು ಪೇತ್ರನಿಗೆ, <<ಕತ್ತಿಯನ್ನು ಒರೆಯಲ್ಲಿ ಹಾಕು. ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?>> ಎಂದು ಹೇಳಿದನು. BSB BSB: “Put your sword back in its sheath!” Jesus said to Peter. “Shall I not drink the cup the Father has given Me?”
12 ULB ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು. BSB BSB: Then the band of soldiers, with its commander and the officers of the Jews, arrested Jesus and bound Him.
14 ULB ಆ ಕಾಯಫನೇ, ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟವನು. BSB BSB: Caiaphas was the one who had advised the Jews that it would be better if one man died for the people.
15 ULB ಸೀಮೋನ್ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಯವಿದ್ದುದರಿಂದ ಯೇಸುವಿನ ಜೊತೆ ಮಹಾಯಾಜಕನ ಅಂಗಳದೊಳಗೆ ಹೋದನು. BSB BSB: Now Simon Peter and another disciple were following Jesus. Since that disciple was known to the high priest, he also went with Jesus into the courtyard of the high priest.
16 ULB ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು. BSB BSB: But Peter stood outside at the door. Then the disciple who was known to the high priest went out and spoke to the doorkeeper, and brought Peter in.
17 ULB ಆಗ ದ್ವಾರಪಾಲಕಿಯು, <<ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?>> ಎಂದು ಪೇತ್ರನನ್ನು ಕೇಳಲು, ಅವನು, <<ನಾನಲ್ಲ>> ಎಂದನು. BSB BSB: At this, the servant girl watching the door said to Peter, “Aren’t you also one of this man’s disciples?” “I am not,” he answered.
18 ULB ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು. BSB BSB: Because it was cold, the servants and officers were standing around a charcoal fire they had made to keep warm. And Peter was also standing with them, warming himself.
19 ULB ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು. BSB BSB: Meanwhile, the high priest questioned Jesus about His disciples and His teaching.
20 ULB ಅದಕ್ಕೆ ಯೇಸು, <<ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ. BSB BSB: “I have spoken openly to the world,” Jesus answered. “I always taught in the synagogues and at the temple, where all the Jews come together. I said nothing in secret.
21 ULB ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ>> ಎಂದು ಉತ್ತರಕೊಟ್ಟನು. BSB BSB: Why are you asking Me? Ask those who heard My message. Surely they know what I said.”
22 ULB ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, <<ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?>> ಎಂದನು. BSB BSB: When Jesus had said this, one of the officers standing nearby slapped Him in the face and said, “Is this how You answer the high priest?”
23 ULB ಯೇಸು ಅವನಿಗೆ <<ನಾನು ಏನಾದರೂ ತಪ್ಪನ್ನು ಮಾತನಾಡಿದ್ದರೆ, ಆ ತಪ್ಪಿನ ವಿಷಯವಾಗಿ ಸಾಕ್ಷಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?>> ಎಂದು ಕೇಳಿದನು. BSB BSB: Jesus replied, “If I said something wrong, testify as to what was wrong. But if I spoke correctly, why did you strike Me?”
24 ULB ಆಗ ಅನ್ನನು ಆತನನ್ನು ಇನ್ನೂ ಕಟ್ಟಿರಲಾಗಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು. BSB BSB: Then Annas sent Him, still bound, to Caiaphas the high priest.
25 ULB ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, <<ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?>> ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, <<ನಾನಲ್ಲ>> ಎಂದನು. BSB BSB: Simon Peter was still standing and warming himself. So they asked him, “Aren’t you also one of His disciples?” He denied it and said, “I am not.”
26 ULB ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, <<ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದೆನಲ್ಲವೇ?>> ಎಂದನು. BSB BSB: One of the high priest’s servants, a relative of the man whose ear Peter had cut off, asked, “Didn’t I see you with Him in the garden?”
27 ULB ಅದಕ್ಕೆ ಪೇತ್ರನು ಪುನಃ ನಿರಾಕರಿಸಿ <<ನಾನಲ್ಲ>> ಎಂದನು. ಆಗ ಕೂಡಲೇ ಕೋಳಿ ಕೂಗಿತು. BSB BSB: Peter denied it once more, and immediately a rooster crowed.
28 ULB ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ. BSB BSB: Then they led Jesus away from Caiaphas into the Praetorium. By now it was early morning, and the Jews did not enter the Praetorium, to avoid being defiled and unable to eat the Passover.
29 ULB ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, <<ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?>> ಎಂದು ಕೇಳಿದನು. BSB BSB: So Pilate went out to them and asked, “What accusation are you bringing against this man?”
30 ULB ಯೆಹೂದ್ಯರು ಅವನಿಗೆ, <<ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ>> ಎಂದು ಉತ್ತರಕೊಟ್ಟರು. BSB BSB: “If He were not a criminal,” they replied, “we would not have handed Him over to you.”
31 ULB ಆಗ ಪಿಲಾತನು ಅವರಿಗೆ, <<ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ>> ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, <<ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ>> ಎಂದರು. BSB BSB: “You take Him and judge Him by your own law,” Pilate told them. “We are not permitted to execute anyone,” the Jews replied.
32 ULB ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು. BSB BSB: This was to fulfill the word that Jesus had spoken to indicate the kind of death He was going to die.
34 ULB ಯೇಸು, <<ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?>> ಎಂದನು. BSB BSB: “Are you saying this on your own,” Jesus asked, “or did others tell you about Me?”
35 ULB ಪಿಲಾತನು, <<ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?>> ಎಂದು ಕೇಳಿದ್ದಕ್ಕೆ, BSB BSB: “Am I a Jew?” Pilate replied. “Your own people and chief priests handed You over to me. What have You done?”
37 ULB ಅದಕ್ಕೆ ಪಿಲಾತನು, <<ಹಾಗಾದರೆ ನೀನು ಅರಸನೋ?>> ಎಂದನು. ಯೇಸು, <<ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ>> ಎಂದು ಉತ್ತರಕೊಟ್ಟನು. BSB BSB: “Then You are a king!” Pilate said. “You say that I am a king,” Jesus answered. “For this reason I was born and have come into the world, to testify to the truth. Everyone who belongs to the truth listens to My voice.”
38 ULB ಪಿಲಾತನು, <<ಸತ್ಯ ಎಂದರೇನು?>> ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, <<ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ. BSB BSB: “What is truth?” Pilate asked. And having said this, he went out again to the Jews and told them, “I find no basis for a charge against Him.
39 ULB ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?>> ಎಂದು ಅವರನ್ನು ಕೇಳಿದನು. BSB BSB: But it is your custom that I release to you one prisoner at the Passover. So then, do you want me to release to you the King of the Jews?”
40 ULB ಅದಕ್ಕೆ ಅವರೆಲ್ಲರೂ, <<ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು>> ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು. BSB BSB: “Not this man,” they shouted, “but Barabbas!” (Now Barabbas was an insurrectionist.)
Select verses for actions: Enter goes to them and Escape comes back.