1 ULB ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು. BSB BSB: Then Pilate took Jesus and had Him flogged.
2 ULB ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ, BSB BSB: The soldiers twisted together a crown of thorns, set it on His head, and dressed Him in a purple robe.
3 ULB ಆತನ ಬಳಿಗೆ ಬಂದು <<ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ>> ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು. BSB BSB: And they went up to Him again and again, saying, “Hail, King of the Jews!” and slapping Him in the face.
4 ULB ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, <<ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ>> ಎಂದು ಹೇಳಿದನು. BSB BSB: Once again Pilate came out and said to the Jews, “Look, I am bringing Him out to you to let you know that I find no basis for a charge against Him.”
5 ULB ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, <<ಇಗೋ, ಈ ಮನುಷ್ಯನು>> ಎಂದನು. BSB BSB: When Jesus came out wearing the crown of thorns and the purple robe, Pilate said to them, “Here is the man!”
6 ULB ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, <<ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು>> ಎಂದು ಕೂಗಿದರು. ಪಿಲಾತನು ಅವರಿಗೆ, <<ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ>> ಎಂದನು. BSB BSB: As soon as the chief priests and officers saw Him, they shouted, “Crucify Him! Crucify Him!” “You take Him and crucify Him,” Pilate replied, “for I find no basis for a charge against Him.”
7 ULB ಯೆಹೂದ್ಯರು ಅವನಿಗೆ, <<ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ>> ಎಂದರು. BSB BSB: “We have a law,” answered the Jews, “and according to that law He must die, because He declared Himself to be the Son of God.”
8 ULB ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು, BSB BSB: When Pilate heard this statement, he was even more afraid,
9 ULB ಪುನಃ ತನ್ನ ಅರಮನೆಯೊಳಗೆ ಹೋಗಿ, <<ನೀನು ಎಲ್ಲಿಂದ ಬಂದವನು?>> ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ. BSB BSB: and he went back into the Praetorium. “Where are You from?” he asked. But Jesus gave no answer.
10 ULB ಪಿಲಾತನು, <<ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?>> ಎಂದು ಆತನನ್ನು ಕೇಳಿದನು. BSB BSB: So Pilate said to Him, “Do You refuse to speak to me? Do You not know that I have authority to release You and authority to crucify You?”
11 ULB ಅದಕ್ಕೆ ಯೇಸು, <<ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ>> ಎಂದು ಉತ್ತರ ಕೊಟ್ಟನು. BSB BSB: Jesus answered, “You would have no authority over Me if it were not given to you from above. Therefore the one who handed Me over to you is guilty of greater sin.”
12 ULB ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, <<ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ>> ಎಂದು ಕೂಗಿ ಹೇಳಿದರು. BSB BSB: From then on, Pilate tried to release Him, but the Jews kept shouting, “If you release this man, you are no friend of Caesar. Anyone who declares himself a king is defying Caesar.”
13 ULB ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, <<ಕಲ್ಲು ಹಾಸಿದ ಕಟ್ಟೆ>> ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು. BSB BSB: When Pilate heard these words, he brought Jesus out and sat on the judgment seat at a place called the Stone Pavement, which in Hebrew is Gabbatha.
14 ULB ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, <<ಇಗೋ, ನಿಮ್ಮ ಅರಸನು>> ಎಂದು ಹೇಳಿದನು. BSB BSB: It was the day of Preparation for the Passover, about the sixth hour. And Pilate said to the Jews, “Here is your King!”
15 ULB ಅದಕ್ಕೆ ಅವರು, <<ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು>> ಎಂದು ಕೂಗಿದರು. ಅದಕ್ಕೆ ಪಿಲಾತನು, <<ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?>> ಎಂದು ಹೇಳಿದಕ್ಕೆ, ಮುಖ್ಯಯಾಜಕರು, <<ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ>> ಎಂದು ಉತ್ತರ ಕೊಟ್ಟರು. BSB BSB: At this, they shouted, “Away with Him! Away with Him! Crucify Him!” “Shall I crucify your King?” Pilate asked. “We have no king but Caesar,” replied the chief priests.
16 ULB ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು. BSB BSB: Then Pilate handed Jesus over to be crucified, and the soldiers took Him away.
17 ULB ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು<< ಕಪಾಲಸ್ಥಳ>> ಎಂಬ ಸ್ಥಳಕ್ಕೆ ಹೋದನು. ಇದಕ್ಕೆ ಇಬ್ರಿಯ ಮಾತಿನಲ್ಲಿ <<ಗೊಲ್ಗೊಥಾ>> ಎಂದು ಕರೆಯಲ್ಪಡುತ್ತದೆ. BSB BSB: Carrying His own cross, He went out to The Place of the Skull, which in Hebrew is called Golgotha.
19 ULB ಇದಲ್ಲದೆ ಪಿಲಾತನು <<ನಜರೇತಿನ ಯೇಸು, ಯೆಹೂದ್ಯರ ಅರಸನು>> ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು. BSB BSB: Pilate also had a notice posted on the cross. It read: JESUS OF NAZARETH, THE KING OF THE JEWS.
21 ULB ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ,<< <ಯೆಹೂದ್ಯರ ಅರಸನು> ಎಂದು ಬರೆಯಬೇಡ, <ನಾನು ಯೆಹೂದ್ಯರ ಅರಸನೆಂದು ಹೇಳಿದವನು> ಎಂಬುದಾಗಿ ಬರೆಯಬೇಕು>> ಎಂದು ಹೇಳಿದರು. BSB BSB: So the chief priests of the Jews said to Pilate, “Do not write, ‘The King of the Jews,’ but only that He said, ‘I am the King of the Jews.’”
22 ULB ಅದಕ್ಕೆ ಪಿಲಾತನು, <<ನಾನು ಬರೆದದ್ದು ಬರೆದಾಯಿತು>> ಎಂದು ಉತ್ತರ ಕೊಟ್ಟನು. BSB BSB: Pilate answered, “What I have written, I have written.”
23 ULB ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು. BSB BSB: When the soldiers had crucified Jesus, they divided His garments into four parts, one for each soldier, with the tunic remaining. It was seamless, woven in one piece from top to bottom.
24 ULB ಆಮೇಲೆ ಅವರು, <<ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ>> ಎಂದು ಮಾತನಾಡಿಕೊಂಡರು. ಇದರಿಂದ <<ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು>> ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು. BSB BSB: So they said to one another, “Let us not tear it. Instead, let us cast lots to see who will get it.” This was to fulfill the Scripture: “They divided My garments among them, and cast lots for My clothing.” So that is what the soldiers did.
27 ULB ತರುವಾಯ ಆ ಶಿಷ್ಯನಿಗೆ, <<ಇಗೋ, ನಿನ್ನ ತಾಯಿ>> ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು. BSB BSB: Then He said to the disciple, “Here is your mother.” So from that hour, this disciple took her into his home.
28 ULB ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, <<ನನಗೆ ನೀರಡಿಕೆಯಾಗಿದೆ>> ಎಂದನು. BSB BSB: After this, knowing that everything had now been accomplished, and to fulfill the Scripture, Jesus said, “I am thirsty.”
29 ULB ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಸ್ಪಂಜನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು. BSB BSB: A jar of sour wine was sitting there. So they soaked a sponge in the wine, put it on a stalk of hyssop, and lifted it to His mouth.
30 ULB ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, <<ತೀರಿತು>> ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು. BSB BSB: When Jesus had received the sour wine, He said, “It is finished.” And bowing His head, He yielded up His spirit.
31 ULB ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು. BSB BSB: It was the day of Preparation, and the next day was a High Sabbath. In order that the bodies would not remain on the cross during the Sabbath, the Jews asked Pilate to have the legs broken and the bodies removed.
33 ULB ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. BSB BSB: But when they came to Jesus and saw that He was already dead, they did not break His legs.
34 ULB ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು. BSB BSB: Instead, one of the soldiers pierced His side with a spear, and immediately blood and water flowed out.
35 ULB ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ. BSB BSB: The one who saw it has testified to this, and his testimony is true. He knows that he is telling the truth, so that you also may believe.
36 ULB ಏಕೆಂದರೆ <<ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು>> ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು. BSB BSB: Now these things happened so that the Scripture would be fulfilled: “Not one of His bones will be broken.”
37 ULB <<ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು>> ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ. BSB BSB: And, as another Scripture says: “They will look on the One they have pierced.”
38 ULB ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು. BSB BSB: Afterward, Joseph of Arimathea, who was a disciple of Jesus (but secretly for fear of the Jews), asked Pilate to let him remove the body of Jesus. Pilate gave him permission, so he came and removed His body.
39 ULB ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು. BSB BSB: Nicodemus, who had previously come to Jesus at night, also brought a mixture of myrrh and aloes, about seventy-five pounds.
40 ULB ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು. BSB BSB: So they took the body of Jesus and wrapped it in linen cloths with the spices, according to the Jewish burial custom.
42 ULB ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು. BSB BSB: And because it was the Jewish day of Preparation and the tomb was nearby, they placed Jesus there.
Select verses for actions: Enter goes to them and Escape comes back.