2 ULB ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು. BSB BSB: and Jesus and His disciples had also been invited to the wedding.
3 ULB ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ <<ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ>> ಎಂದು ತಿಳಿದಳು. BSB BSB: When the wine ran out, Jesus’ mother said to Him, “They have no more wine.”
4 ULB ಯೇಸು ಆಕೆಗೆ <<ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ>> ಎಂದು ಉತ್ತರಕೊಟ್ಟನು. BSB BSB: “Woman, what is that to you and to Me?” Jesus replied. “My hour has not yet come.”
6 ULB ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು. BSB BSB: Now six stone water jars had been set there for the Jewish rites of purification. Each could hold from twenty to thirty gallons.
7 ULB ಯೇಸು ಅವರಿಗೆ, <<ಆ ಬಾನೆಗಳಲ್ಲಿ ನೀರು ತುಂಬಿರಿ>> ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು. BSB BSB: Jesus told the servants, “Fill the jars with water.” So they filled them to the brim.
8 ULB ಅನಂತರ ಆತನು ಸೇವಕರಿಗೆ, <<ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ>> ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು. BSB BSB: “Now draw some out,” He said, “and take it to the master of the banquet.” They did so,
9 ULB ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು, BSB BSB: and the master of the banquet tasted the water that had been turned into wine. He did not know where it was from, but the servants who had drawn the water knew. Then he called the bridegroom aside
10 ULB <<ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ>> ಎಂದನು. BSB BSB: and said, “Everyone serves the fine wine first, and then the cheap wine after the guests are drunk. But you have saved the fine wine until now!”
11 ULB ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು. BSB BSB: Jesus performed this, the first of His signs, at Cana in Galilee. He thus revealed His glory, and His disciples believed in Him.
12 ULB ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿವಸ ಇದ್ದರು. BSB BSB: After this, He went down to Capernaum with His mother and brothers and His disciples, and they stayed there a few days.
13 ULB ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು. BSB BSB: When the Jewish Passover was near, Jesus went up to Jerusalem.
14 ULB ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು. BSB BSB: In the temple courts He found men selling cattle, sheep, and doves, and money changers seated at their tables.
15 ULB ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು. BSB BSB: So He made a whip out of cords and drove all from the temple courts, both sheep and cattle. He poured out the coins of the money changers and overturned their tables.
16 ULB ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ <<ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ>> ಎಂದು ಗದರಿಸಿದನು. BSB BSB: To those selling doves He said, “Get these out of here! How dare you turn My Father’s house into a marketplace!”
17 ULB ಆಗ <<ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ>> ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು. BSB BSB: His disciples remembered that it is written: “Zeal for Your house will consume Me.”
18 ULB ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ <<ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?>> ಎಂದು ಕೇಳಿದರು. BSB BSB: On account of this, the Jews demanded, “What sign can You show us to prove Your authority to do these things?”
19 ULB ಅದಕ್ಕೆ ಯೇಸು <<ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು>> ಎಂದು ಉತ್ತರಕೊಟ್ಟನು. BSB BSB: Jesus answered, “Destroy this temple, and in three days I will raise it up again.”
20 ULB ಅದಕ್ಕೆ ಯೆಹೂದ್ಯರು, <<ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?>> ಎಂದರು. BSB BSB: “This temple took forty-six years to build,” the Jews replied, “and You are going to raise it up in three days?”
21 ULB ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು. BSB BSB: But Jesus was speaking about the temple of His body.
22 ULB ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು. BSB BSB: After He was raised from the dead, His disciples remembered that He had said this. Then they believed the Scripture and the word that Jesus had spoken.
23 ULB ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು. BSB BSB: While He was in Jerusalem at the Passover Feast, many people saw the signs He was doing and believed in His name.
24 ULB ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ, BSB BSB: But Jesus did not entrust Himself to them, for He knew them all.
25 ULB ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ. BSB BSB: He did not need any testimony about man, for He knew what was in a man.