1 ULB ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ, BSB BSB: When Jesus realized that the Pharisees were aware He was gaining and baptizing more disciples than John
2 ULB (ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು), BSB BSB: (although it was not Jesus who baptized, but His disciples),
3 ULB ಆತನು ಯೂದಾಯವನ್ನು ಬಿಟ್ಟು ತಿರುಗಿ ಗಲಿಲಾಯಕ್ಕೆ ಹೊರಟು ಹೋದನು. BSB BSB: He left Judea and returned to Galilee.
4 ULB ಆತನು ಸಮಾರ್ಯ ಸೀಮೆಯನ್ನು ಹಾದುಹೋಗಬೇಕಾಯಿತು. BSB BSB: Now He had to pass through Samaria.
5 ULB ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು. BSB BSB: So He came to a town of Samaria called Sychar, near the plot of ground that Jacob had given to his son Joseph.
6 ULB ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು. BSB BSB: Since Jacob’s well was there, Jesus, weary from His journey, sat down by the well. It was about the sixth hour.
7 ULB ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು <<ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,>> ಎಂದು ಕೇಳಿದನು. BSB BSB: When a Samaritan woman came to draw water, Jesus said to her, “Give Me a drink.”
8 ULB ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು. BSB BSB: (His disciples had gone into the town to buy food.)
9 ULB ಆ ಸಮಾರ್ಯದ ಸ್ತ್ರೀಯು ಆತನಿಗೆ, <<ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?>> ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ. BSB BSB: “You are a Jew,” said the woman. “How can You ask for a drink from me, a Samaritan woman?” (For Jews do not associate with Samaritans.)
10 ULB ಅದಕ್ಕೆ ಯೇಸು <<ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು>> ಅಂದನು. BSB BSB: Jesus answered, “If you knew the gift of God and who is asking you for a drink, you would have asked Him, and He would have given you living water.”
11 ULB ಆ ಸ್ತ್ರೀ ಆತನಿಗೆ, <<ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು? BSB BSB: “Sir,” the woman replied, “You have nothing to draw with and the well is deep. Where then will You get this living water?
12 ULB ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು>> ಅನ್ನಲು, BSB BSB: Are You greater than our father Jacob, who gave us this well and drank from it himself, as did his sons and his livestock?”
13 ULB ಯೇಸು ಆಕೆಗೆ, <<ಈ ನೀರನ್ನು ಕುಡಿಯುವವರೆಲ್ಲರಿಗೆ ಪುನಃ ನೀರಡಿಕೆಯಾಗುವುದು, BSB BSB: Jesus said to her, “Everyone who drinks this water will be thirsty again.
14 ULB ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು>> ಎಂದು ಹೇಳಿದನು. BSB BSB: But whoever drinks the water I give him will never thirst. Indeed, the water I give him will become in him a fount of water springing up to eternal life.”
15 ULB ಆ ಸ್ತ್ರೀಯು, <<ಅಯ್ಯಾ, ನನಗೆ ಆ ನೀರನ್ನು ಕೊಡು, ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗುವುದಿಲ್ಲ. ನೀರು ಸೇದುವುದಕ್ಕೆ ಇಷ್ಟು ದೂರ ಬರಬೇಕಾಗಿರುವುದಿಲ್ಲ>> ಅನ್ನಲು, BSB BSB: The woman said to Him, “Sir, give me this water so that I will not get thirsty and have to keep coming here to draw water.”
16 ULB ಯೇಸು ಆಕೆಗೆ <<ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ>> ಎಂದು ಹೇಳಿದನು. BSB BSB: Jesus told her, “Go, call your husband and come back.”
17 ULB ಅದಕ್ಕೆ ಆ ಸ್ತ್ರೀಯು <<ನನಗೆ ಗಂಡನಿಲ್ಲ>> ಎಂದಳು. ಯೇಸು ಆಕೆಗೆ, <<ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯೇ. BSB BSB: “I have no husband,” the woman replied. Jesus said to her, “You are correct to say that you have no husband.
18 ULB ನಿನಗೆ ಐದು ಮಂದಿ ಗಂಡಂದಿರಿದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ>> ಎಂದನು. BSB BSB: In fact, you have had five husbands, and the man you now have is not your husband. You have spoken truthfully.”
19 ULB ಆ ಸ್ತ್ರೀ ಆತನಿಗೆ, <<ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ. BSB BSB: “Sir,” the woman said, “I see that You are a prophet.
21 ULB ಯೇಸು ಆಕೆಗೆ <<ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರುಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ. BSB BSB: “Believe Me, woman,” Jesus replied, “a time is coming when you will worship the Father neither on this mountain nor in Jerusalem.
23 ULB ಅದಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ. BSB BSB: But a time is coming and has now come when the true worshipers will worship the Father in spirit and in truth, for the Father is seeking such as these to worship Him.
24 ULB ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ>> ಎಂದನು. BSB BSB: God is Spirit, and His worshipers must worship Him in spirit and in truth.”
25 ULB ಆ ಹೆಂಗಸು ಆತನಿಗೆ <<ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು>> ಎಂದು ಹೇಳಲು, BSB BSB: The woman said, “I know that Messiah” (called Christ) “is coming. When He comes, He will explain everything to us.”
26 ULB ಯೇಸು ಆಕೆಗೆ <<ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು>> ಎಂದು ಹೇಳಿದನು. BSB BSB: Jesus answered, “I who speak to you am He.”
27 ULB ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, <<ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?>> ಎಂದು ಒಬ್ಬರೂ ಆತನನ್ನು ಕೇಳಲಿಲ್ಲ. BSB BSB: Just then His disciples returned and were surprised that He was speaking with a woman. But no one asked Him, “What do You want from her?” or “Why are You talking with her?”
28 ULB ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ, BSB BSB: Then the woman left her water jar, went back into the town, and said to the people,
29 ULB <<ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?>> ಎಂದು ಹೇಳಿದಳು. BSB BSB: “Come, see a man who told me everything I ever did. Could this be the Christ?”
30 ULB ಆಗ ಅವರೆಲ್ಲರು ಊರನ್ನು ಬಿಟ್ಟು ಆತನ ಬಳಿಗೆ ಬಂದರು. BSB BSB: So they left the town and made their way toward Jesus.
31 ULB ಅಷ್ಟರೊಳಗೆ ಶಿಷ್ಯರು <<ಗುರುವೇ, ಊಟಮಾಡು>> ಎಂದು ಆತನನ್ನು ಕೇಳಿಕೊಂಡರು. BSB BSB: Meanwhile the disciples urged Him, “Rabbi, eat something.”
32 ULB ಆದರೆ ಆತನು ಅವರಿಗೆ <<ನಿಮಗೆ ತಿಳಿಯದಿರುವ ಆಹಾರವು ನನ್ನ ಬಳಿಯಲ್ಲಿ ಉಂಟು>> ಎಂದು ಹೇಳಲು BSB BSB: But He told them, “I have food to eat that you know nothing about.”
33 ULB ಶಿಷ್ಯರು, <<ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೊ?>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. BSB BSB: So the disciples asked one another, “Could someone have brought Him food?”
34 ULB ಯೇಸು ಅವರಿಗೆ <<ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ. BSB BSB: Jesus explained, “My food is to do the will of Him who sent Me and to finish His work.
35 ULB <ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ>? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ. BSB BSB: Do you not say, ‘There are still four months until the harvest’? I tell you, lift up your eyes and look at the fields, for they are ripe for harvest.
36 ULB ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು. BSB BSB: Already the reaper draws his wages and gathers a crop for eternal life, so that the sower and the reaper may rejoice together.
37 ULB <ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು> ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ. BSB BSB: For in this case the saying ‘One sows and another reaps’ is true.
38 ULB ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ>> ಎಂದು ಹೇಳಿದನು. BSB BSB: I sent you to reap what you have not worked for; others have done the hard work, and now you have taken up their labor.”
39 ULB <<ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದ>> ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು. BSB BSB: Many of the Samaritans from that town believed in Jesus because of the woman’s testimony, “He told me everything I ever did.”
40 ULB ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿವಸ ಅಲ್ಲಿಯೇ ತಂಗಿದನು. BSB BSB: So when the Samaritans came to Him, they asked Him to stay with them, and He stayed two days.
41 ULB ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು, BSB BSB: And many more believed because of His message.
42 ULB ಜನರು ಆ ಸ್ತ್ರೀಗೆ, <<ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ>> ಎಂದರು. BSB BSB: They said to the woman, “We now believe not only because of your words; we have heard for ourselves, and we know that this man truly is the Savior of the world.”
43 ULB ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು. BSB BSB: After two days, Jesus left for Galilee.
44 ULB ಏಕೆಂದರೆ ಪ್ರವಾದಿಗೆ ಸ್ವಂತದೇಶದಲ್ಲಿ ಗೌರವವಿಲ್ಲವೆಂದು ಯೇಸು ತಾನೇ ಹೇಳಿದ್ದನು. BSB BSB: Now He Himself had testified that a prophet has no honor in his own hometown.
45 ULB ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು. BSB BSB: Yet when He arrived, the Galileans welcomed Him. They had seen all the great things He had done in Jerusalem at the feast, for they had gone there as well.
46 ULB ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು. BSB BSB: So once again He came to Cana in Galilee, where He had turned the water into wine. And there was a royal official whose son lay sick at Capernaum.
47 ULB ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿಯಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, <<ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು>> ಎಂದು ಬೇಡಿಕೊಂಡನು. BSB BSB: When he heard that Jesus had come from Judea to Galilee, he went and begged Him to come down and heal his son, who was about to die.
48 ULB ಯೇಸು ಅವನಿಗೆ <<ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ>> ಎಂದು ಹೇಳಿದನು. BSB BSB: Jesus said to him, “Unless you people see signs and wonders, you will never believe.”
49 ULB ಆ ಅರಮನೆಯ ಅಧಿಕಾರಿಯು <<ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು>> ಅನ್ನಲು BSB BSB: “Sir,” the official said, “come down before my child dies.”
50 ULB ಯೇಸು ಅವನಿಗೆ <<ಹೋಗು ನಿನ್ನ ಮಗನು ಬದುಕುತ್ತಾನೆ>> ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು. BSB BSB: “Go,” said Jesus. “Your son will live.” The man took Jesus at His word and departed.
51 ULB ಅವನು ಇನ್ನೂ ಘಟ್ಟ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು. BSB BSB: And while he was still on the way, his servants met him with the news that his boy was alive.
52 ULB ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, <<ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು>> ಎಂದರು. BSB BSB: So he inquired as to the hour when his son had recovered, and they told him, “The fever left him yesterday at the seventh hour.”
53 ULB ಆಗ <<ನಿನ್ನ ಮಗನು ಬದುಕುತ್ತಾನೆ>> ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು. BSB BSB: Then the father realized that this was the very hour in which Jesus had told him, “Your son will live.” And he and all his household believed.
54 ULB ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ. BSB BSB: This was now the second sign that Jesus performed after coming from Judea into Galilee.